ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯ ಏಪ್ರಿಲ್ ೮ಕ್ಕೆ ಮುಂದೂಡಿದೆ.
ನಟ ದರ್ಶನ್, ಪವಿತ್ರಾ ಗೌಡ ಮತ್ತು ಸಹಚರರು ಕೊಲೆ ಮಾಡಿದ್ದಾರೆ ಎಂಬ ಪೊಲೀಸರ ಆರೋಪದ ಕುರಿತು ವಿಚಾರಣೆ ಮಂಗಳವಾರ ನಡೆದಿದ್ದು, ದರ್ಶನ್ ಮತ್ತು ಪವಿತ್ರಾ ಗೌಡ ವಿಚಾರಣೆಗೆ ಖುದ್ದು ಹಾಜರಾಗಿದ್ದದ್ದರೆ, ನಿಖಿಲ್ ಮತ್ತು ಕೇಶವಮೂರ್ತಿ ಗೈರು ಹಾಜರಾಗಿದ್ದರು.
ಇತರೆ ಆರೋಪಿಗಳನ್ನು ಮಾಫಿ ಸಾಕ್ಷಿ ಮಾಡಲು ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂದು ವಿಚಾರಣೆ ವೇಳೆ ದರ್ಶನ್ ಪರ ವಕೀಲರು ಗಂಭೀರ ಆರೋಪ ಮಾಡಿದರು.
ದರ್ಶನ್ ಪ್ರಕರಣದಲ್ಲಿ ನಮ್ಮ ಬಳಿ ಸಾಕಷ್ಟು ಸಾಕ್ಷ್ಯ ಇವೆ ಎಂದು ಪೊಲೀಸರು ವರದಿಯಲ್ಲಿ ಹೇಳಿದ್ದಾರೆ. ವಿಚಾರಣೆ ಕೂಡ ಮುಗಿದಿದೆ ಎಂದು ಹೇಳಿಕೆ ನೀಡಿದ್ದಾರೆ. ಹಾಗಿದ್ದ ಮೇಲೆ ಅರೋಪಿಗಳನ್ನು ಮಾಫಿ ಸಾಕ್ಷಿಗಳನ್ನಾಗಿ ಮಾಡಿಕೊಳ್ಳಲು ಒತ್ತಡ ಹೇರುತ್ತಿರುವುದೇಕೆ ಎಂದು ವಕೀಲರು ಪ್ರಶ್ನಿಸಿದ್ದಾರೆ.
ವಾದವನ್ನು ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಏಪ್ರಿಲ್ 8ಕ್ಕೆ ವಿಚಾರಣೆ ಮುಂದೂಡಿದ್ದಾರೆ.