ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಲಾತೋರ್ ನಲ್ಲಿ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಸಾಕಷ್ಟು ಬೆದರಿಕೆ ಕರೆಗಳು ಬಂದಿದ್ದವು.
ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪಿ ದಿನೇಶ್ ನರ್ವೊಣಿಯನ್ನು ಮಹಾರಾಷ್ಟ್ರದ ಲಾತೂರ್ ನಲ್ಲಿ ಅರೆಸ್ಟ್ ಮಾಡಿದ್ದಾರೆ. ಸೊಲ್ಲಾಪುರ ಮೂಲದ ದಿನೇಶ್ ಪ್ರಕರಣ ದಾಖಲಾಗುತ್ತಿದ್ದಂತೆ ಲಾತೂರ್ ಗೆ ಪರಾರಿಯಾಗಿದ್ದ.
ಲಾತೂರ್ ನಲ್ಲಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಕಲ್ಬುರ್ಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಂದು ರಾತ್ರಿ ವೇಳೆ ಆರೋಪಿಯನ್ನು ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಗೆ ಕರೆದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಚಾಕೋಲೇಟ್, ಬಿಸ್ಕೆಟ್ ಏಜೆಂಟ್ ಆಗಿರುವ ದಿನೇಶ್, ಕುಡಿದ ಮತ್ತಿನಲ್ಲಿ ಬೆದರಿಕೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಪ್ರಿಯಾಂಕ್ ಖರ್ಗೆ ನಂಬರ್ ಗೂಗಲ್ ನಲ್ಲಿ ಇಲ್ಲದೇ ಇದ್ದರೂ ಹೇಗೆ ಸಿಕ್ಕಿತು ಎಂಬ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಈತ ಮೊದಲು ಪೊಲೀಸ್ ಸಂಖ್ಯೆಯಿಂದ ಕರೆ ಮಾಡಿ ನಂತರ ಮೊಬೈಲ್ ನಂಬರ್ ಬದಲಿಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.