ಕನ್ನಡ ಚಿತ್ರರಂಗದಲ್ಲಿ ಮತ್ತೊಬ್ಬ ಸ್ಟಾರ್ ನಟನ ದಾಂಪತ್ಯ ಜೀವನದಲ್ಲಿ ಬಿರುಕುಗೊಂಡಿದ್ದು, ಪತ್ನಿ ಸ್ವಪ್ನಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಅಜಯ್ ರಾವ್ ವಿರುದ್ಧ ಪತ್ನಿ ಸ್ವಪ್ನಾ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚೆಗಷ್ಟೇ ದಂಪತಿ ಹೊಸ ಮನೆಯ ಗೃಹ ಪ್ರವೇಶ ಮಾಡಿದ್ದರು. ವಿಚ್ಛೇದನಕ್ಕೆ ಪತ್ನಿ ಅರ್ಜಿ ಸಲ್ಲಿಸಿರುವ ವಿಷಯ ಖುದ್ದು ಅಜಯ್ ರಾವ್ ಗೆ ಗೊತ್ತಿಲ್ಲ. ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಹೌದಾ? ನನಗೆ ಈ ವಿಷಯ ಗೊತ್ತಿಲ್ಲ. ಹೆಂಡ್ತಿ ಹತ್ತಿರನೇ ಕೇಳಿ ಹೇಳ್ತೀನಿ ಎಂದು ಪ್ರತಿಕ್ರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
2014ರಲ್ಲಿ ಅಜಯ್ ರಾವ್ ಸ್ವಪ್ನಾಳನ್ನು ಪ್ರೀತಿಸಿ ಮದುವೆ ಆಗಿದ್ದರು. ಇದೀಗ 11 ವರ್ಷಗಳ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದ್ದು, ದಂಪತಿಗೆ ಒಂದು ಗಂಡು ಮಗುವಿದೆ.
ಇತ್ತೀಚೆಗಷ್ಟೇ ಸಿನಿಮಾ ನಿರ್ಮಾಣಕ್ಕಿಳಿದು ನಷ್ಟಕ್ಕೆ ಒಳಗಾಗಿದ್ದ ಅಜಯ್ ರಾವ್ ಇದೀಗ ದಾಂಪತ್ಯ ಜೀವನದಲ್ಲಿ ಏರುಪೇರು ಎದುರಿಸುವಂತಾಗಿದೆ.