ನಟ ಸಂಚಾರಿ ವಿಜಯ್ ಸ್ಥಿತಿ ಮತಷ್ಟು ಗಂಭೀರ; ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ನಟ ಸಂಚಾರಿ ವಿಜಯ್ ಸ್ಥಿತಿ ಮತಷ್ಟು ಗಂಭೀರ; ಅಪೋಲೋ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಬೆಂಗಳೂರು: ಭೀಕರ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ‌ʼಸಂಚಾರಿʼ ವಿಜಯ್ ಬದುಕುವ ಸಾಧ್ಯತೆ ತೀರಾ ಕಡಿಮೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿದಂತ ಅಪೊಲೋ ಆಸ್ಪತ್ರೆಯ ವೈದ್ಯ ಡಾ.ಅರುಣ್ ನಾಯ್ಕ್ ಅವರು, ನಟ ಸಂಚಾರಿ ವಿಜಯ್ ಅವರು ಚಿಂತಾಜನಕ ಸ್ಥಿತಿಯಲ್ಲಿ ಇದ್ದಾರೆ. ರಿಕವರಿ ಚಾನ್ಸ್ ಕಡಿಮೆ ಇದೆ, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ, ಆಕ್ಸಿಜನ್ ಮಟ್ಟ ಕುಸಿಯುತ್ತಿದೆ, ಮೆದುಳು ನಿಷ್ಕ್ರಿಯವಾಗಿದೆ, ಪಲ್ಸ್ ರೇಟ್ ನಲ್ಲೂ ಭಾರಿ ಏರುಪೇರಾಗಿದೆ, ಬಿಪಿ ಕೂಡ ಕಂಟ್ರೋಲ್ ಗೆ ಬರ್ತಿಲ್ಲ, ಬ್ರೈನ್ ಫೇಲ್ಯೂರ್ ಹಂತದಲ್ಲಿದೆ ಎಂಬುದಾಗಿ ಅವರ ಕುಟುಂಬಸ್ಥರಿಗೂ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಜೂನ್.12ರಂದು ರಾತ್ರಿ ಜೆಪಿ ನಗರದಲ್ಲಿ ಸಂಚಾರಿ ವಿಜಯ್ ಅವರು ಸ್ನೇಹಿತ ನವೀನ್ ಜೊತೆಗೆ ಮನೆಗೆ ಬೈಕ್ ನಲ್ಲಿ ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು, ಅಪಘಾತಕ್ಕೆ ಈಡಾಗಿದ್ದರು. ಇಂತಹ ಸಂದರ್ಭದಲ್ಲಿ ಅವರಿಗೆ ತಲೆಯ ಎಡಭಾಗಕ್ಕೆ ಪೆಟ್ಟು ಬಿದ್ದು, ರಕ್ತಸ್ರಾವ ಕೂಡ ಆಗಿತ್ತು. ಶಸ್ತ್ರ ಚಿಕಿತ್ಸೆ ಮೂಲಕ ರಕ್ತಸ್ರಾವವನ್ನು ಸರಿ ಪಡಿಸಲಾಗಿತ್ತು. ಅಲ್ಲದೇ ತೊಡೆಯ ಮೂಳೆ ಕೂಡ ಮುರಿದಿತ್ತು. ಈಗ ಅಪೋಲೋ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

,

Leave a Reply

Your email address will not be published. Required fields are marked *