Menu

ಕಾಶ್ಮೀರದಲ್ಲಿ ಉಗ್ರರ ದಾಳಿ, ಹತ್ಯೆಗೆ ನಟ ನಟಿಯರು ಖಂಡನೆ

ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದು ಮೂವತ್ತು ಮಂದಿಯನ್ನು ಹತ್ಯೆ ಮಾಡಿರುವ ಬಗ್ಗೆ ಸ್ಯಾಂಡಲ್‌ವುಡ್‌ ನಟ ಶಿವಣ್ಣ, ರಶ್ಮಿಕಾ ಮಂದಣ್ಣ, ರಾಮ್ ಚರಣ್, ರವೀನಾ ಟಂಡನ್ ಸೇರಿದಂತೆ ಅನೇಕರು ಪ್ರತಿಕ್ರಿಯೆ ನೀಡಿ ಈ ಹೇಯ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಖಂಡಿಸಿದ್ದಾರೆ.

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸೌಹಾರ್ದದ ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ. ಹಾಗೆಯೇ ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಲಿ ಮತ್ತು ನಮ್ಮನ್ನು ಅಗಲಿದ ಎಲ್ಲಾ ಭಾರತೀಯರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕೋರುತ್ತಾ ಎಲ್ಲಾ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಹಾಗೂ ಧೈರ್ಯವನ್ನು ದೇವರು ನೀಡಲಿ. ಈ ಪೈಶಾಚಿಕ ಕೃತ್ಯ ಎಸಗುವವರ ವಿರುದ್ಧದ ಸರ್ಕಾರದ ಹೋರಾಟಕ್ಕೆ ಸದಾ ಬೆಂಬಲವಿರುತ್ತದೆ ಎಂದು ಶಿವಣ್ಣ ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಆಘಾತ ಮತ್ತು ದುಃಖವಾಗಿದೆ. ಇಂತಹ ಘಟನೆಗಳಿಗೆ ನಮ್ಮ ಸಮಾಜದಲ್ಲಿ ಸ್ಥಾನವಿಲ್ಲ ಮತ್ತು ಅವುಗಳನ್ನು ಬಲವಾಗಿ ಖಂಡಿಸಬೇಕು. ಸಂತ್ರಸ್ತರ ಕುಟುಂಬದ ಪರವಾಗಿ ರಾಮ್‌ ಚರಣ್‌ ಪೋಸ್ಟ್‌ ಮಾಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಪ್ರತಿಕ್ರಿಯಿಸಿ, ನನ್ನ ಹೃದಯ ಒಡೆದಿದೆ ಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಮೇಲೆ ನಡೆದ ಭೀಕರ ಭಯೋತ್ಪಾದಕ ದಾಳಿಯ ಬಗ್ಗೆ ಕೇಳಿ ನೋವಾಗಿದೆ. ಅವರ ಕುಟುಂಬಗಳಿಗೆ ಹೃದಯಪೂರ್ವಕ ಪ್ರಾರ್ಥನೆ ಮತ್ತು ಸಂತಾಪಗಳು. ಇದು ಎಂದಿಗೂ ಮರೆಯಲಾಗದ ಘೋರ ದಾಳಿ ಎಂದು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಪೋಸ್ಟ್‌ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *