ಡ್ರಗ್ಸ್ ಕೇಸ್ನಲ್ಲಿ 2020ರ ಸೆಪ್ಟೆಂಬರ್ನಲ್ಲಿ ಬಂಧಿತರಾಗಿ ಹಲವು ದಿನ ಜೈಲಿನಲ್ಲಿದ್ದು ಹೊರ ಬಂದಿರುವ ನಟಿ ರಾಗಿಣಿ ಅವರಿಗೆ ನಾಲ್ಕು ವರ್ಷಗಳ ಬಳಿಕ ರಿಲೀಫ್ ಸಿಕ್ಕಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್ ಕೇಸ್ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ. ಯಾವುದೇ ಸಾಕ್ಷ್ಯ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.
ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೂಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ಕಾರಣಕ್ಕೆ ಎನ್ಡಿಪಿಎಸ್ ಕಾಯಿದೆಯಡಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಈ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎನ್ನಲಾಗಿದೆ.
ಸಹ ಆರೋಪಿಗಳ ಹೇಳಿಕೆ ಆಧರಿಸಿ ರಾಗಿಣಿ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಯಾವುದೇ ಸಾಕ್ಷ್ಯಗಳನ್ನು ಒದಗಿಸಿಲ್ಲ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಾಡಿದ್ದರು. ಈ ವಾದವನ್ನು ಪರಿಣಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ. ಎ 4 ಆರೋಪಿ ಪ್ರಶಾಂತ್ ರಂಕಾ ವಿರುದ್ಧದ ಪ್ರಕರಣ ಕೂಡ ರದ್ದಾಗಿದೆ.