Tuesday, February 17, 2026
Menu

ನಟಿಯ ಖಾಸಗಿ ವೀಡಿಯೊ ವೈರಲ್‌ ಬೆದರಿಕೆಯೊಡ್ಡಿ ಹಣಕ್ಕೆ ಬೇಡಿಕೆ

ರಿಯಾಲಿಟಿ ಶೋದಲ್ಲಿ ಗುರುತಿಸಿಕೊಂಡಿರುವ ನಟಿಯೊಬ್ಬರ ಖಾಸಗಿ ವೀಡಿಯೊ ಚಿತ್ರೀಕರಿಸಿ, ಹಣಕ್ಕಾಗಿ ಬೇಡಿಕೆಯಿಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಪ್ರಕರಣ ಬೆಂಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ‘ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿ’ ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಭಾಗವಹಿಸಿದ್ದ ನಟಿಯೊಬ್ಬರು ಬಾತ್‌ರೂಮ್‌ಗೆ ಹೋಗಿದ್ದಾಗ ಅಪರಿಚಿತನೊಬ್ಬ ಗುಪ್ತವಾಗಿ ಖಾಸಗಿ ದೃಶ್ಯಗಳನ್ನು ವೀಡಿಯೊ ರೆಕಾರ್ಡ್‌ ಮಾಡಿದ್ದಾನೆ. ಅತ್ಯಂತ ವ್ಯವಸ್ಥಿತವಾಗಿ ನಟಿಯ ಗಮನಕ್ಕೆ ಬಾರದಂತೆ ವೀಡಿಯೊ ರೆಕಾರ್ಡ್ ಮಾಡಲಾಗಿದೆ.

ನಾಲ್ಕೈದು ವೀಡಿಯೊಗಳನ್ನು ಆರೋಪಿಯು ನಟಿಯ ಸ್ನೇಹಿತೆಯ ಇನ್‌ಸ್ಟಾಗ್ರಾಮ್ ಖಾತೆಗೆ ಕಳುಹಿಸಿದ್ದಾನೆ. ಈ ವೀಡಿಯೊಗಳು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಆಗಬಾರದು ಎಂದಾದರೆ ತನಗೆ ಇಷ್ಟು ಹಣ ನೀಡಬೇಕು ಎಂದು ಬೇಡಿಕೆಯಿಟ್ಟಿ ದ್ದಾನೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಮೆಸೇಜ್ ಮೂಲಕ ಹಾಗೂ ಇನ್‌ಸ್ಟಾಗ್ರಾಮ್ ಮೂಲಕ ಮೂರ್ನಾಲ್ಕು ಬಾರಿ ವೀಡಿಯೊ ಕಾಲ್ ಮಾಡಿ ನಟಿಯನ್ನು ಆರೋಪಿ ಬೆದರಿಸಿದ್ದಾನೆ. ಹಣ ನೀಡಲು ನಿರಾಕರಿಸಿದರೆ ಅಥವಾ ವಿಳಂಬ ಮಾಡಿದರೆ ವೀಡಿಯೊಗಳನ್ನು ಸೋಷಿಯಲ್ ಮೀಡಿಯಾ ದಲ್ಲಿ ವೈರಲ್ ಮಾಡಿ ಇಮೇಜ್ ಹಾಳು ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾನೆ.

ನಟಿ ಬೆಂಗಳೂರಿನ ಸಿಟಿ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಪೊಲೀಸರು ಐಟಿ ಕಾಯಿದೆ ಹಾಗೂ ಬಿಎನ್‌ಎಸ್ ಸೆಕ್ಷನ್ 77, 351 ಮತ್ತು 308ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಬಳಸಿದ ಇನ್‌ಸ್ಟಾಗ್ರಾಮ್ ಖಾತೆಯ ಐಪಿ ಅಡ್ರೆಸ್ ಮತ್ತು ಮೊಬೈಲ್ ಲೊಕೇಶನ್ ಆಧರಿಸಿ ಸೈಬರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕ್ರೀಡಾಂಗಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

Related Posts

Leave a Reply

Your email address will not be published. Required fields are marked *