Monday, September 14, 2026
Menu

ಡಿಸಿಎಂ ಡಿನ್ನರ್‌ ಮೀಟಿಂಗ್‌ ಬಳಿಕ ಸಿಎಂ ಡಿನ್ನರ್‌ ಪಾರ್ಟಿ ಮಾರ್ಚ್ 16ಕ್ಕೆ

dcm

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 16ರಂದು ಸಚಿವರಿಗೆ ಔತಣಕೂಟ ಆಯೋಜಿಸಿದ್ದು, ರಾಜ್ಯ ರಾಜಕೀಯದ ಕುರಿತಂತೆ ಚರ್ಚೆಗಳು ಮತ್ತಷ್ಟು ಬಿರುಸುಗೊಂಡಿದ್ದು, ತೀವ್ರ ಕುತೂಹಲಕ್ಕೂ ಕಾರಣವಾಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೊನ್ನೆಯಷ್ಟೇ ಡಿನ್ನರ್ ಸಭೆ ಆಯೋಜಿಸಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಪಾಲ್ಗೊಂಡಿದ್ದರು.

ಮಾರ್ಚ್ 16ರಂದು ಸಿಎಂ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಬಳಿಕ ಮಾರ್ಚ್ 12ರಂದು ಸಿಎಂ ಮತ್ತು ಡಿಸಿಎಂ ಬಣಗಳ ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಸಂಪುಟ ಪುನರ್‌ರಚನೆಗಾಗಿ ಒತ್ತಡ ಹೇರುವ ತಂತ್ರಗಾರಿಕೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಸಿಎಂ ಡಿನ್ನರ್ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರ, ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಮೂಲಗಳು ತಿಳಿಸಿವೆ. ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಗಳಲ್ಲಿ ಯಾರು ಭಾಗವಹಿಸಬೇಕು ಎಂಬುದರ ಕುರಿತಾಗಿಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

Related Posts

Leave a Reply

Your email address will not be published. Required fields are marked *