ಬೆಂಗಳೂರು: ಮೇ 26 (ಉದಯಕಾಲ ನ್ಯೂಸ್) ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜೈಲು ವಾಸ ಅನುಭವಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮತ್ತೆ ಆತಂಕ ಎದುರಾಗಿದ್ದು, ವಿರುದ್ದ ಜಾರಿ ನಿರ್ದೇಶನಾಲಯ ದೆಹಲಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.
800ಕೋಟಿ ರೂ ಗೂ ಹೆಚ್ಚು ಸಂಪತ್ತನ್ನು ಹೊಂದಿರುವ, 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ಹೊಂದುವ ಮೂಲಕ ಅಕ್ರಮ ಹಣ ವರ್ಗಾವಣೆ ನಡೆಸಿದ್ದರು ಎಂಬ ಆರೋಪ ಡಿ.ಕೆ ಶಿವಕುಮಾರ್ ಅವರ ಮೇಲಿದೆ.
ಈ ಸಂಬಂಧ 2019ರಲ್ಲಿ ಬಂಧನಕ್ಕೊಳಗಾಗಿದ್ದ ಡಿಕೆಶಿ ಅವರು ತಿಹಾರ್ ಕೇಂದ್ರ ಕಾರಾಗೃಹದಲ್ಲಿ45 ದಿನಗಳ ಕಾಲ ಸೆರೆವಾಸ ಅನುಭವಿಸಿದ್ದರು.