ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಗಿರು ವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ , ಕೇಂದ್ರ ಗೃಹ ಸಚಿವ ಅಮಿತ್ ಶಾ, ಉದ್ಯಮಿ ವಿಜಯ್ ಮಲ್ಯ ಸೇರಿದಂತೆ ಹಲವು ಗಣ್ಯರು ಆಘಾತಗೊಂಡು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾ ಗಿದೆ.ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಹಾರೈಸಿದ್ದಾರೆ.
ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ.
ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ. #AirIndia #crash pic.twitter.com/5wux1aj1dj— Siddaramaiah (@siddaramaiah) June 12, 2025
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಅಹಮದಾಬಾದ್-ಲಂಡನ್ ವಿಮಾನದ ದುರಂತ ಅಪಘಾತದಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಇದರಿಂದ ಸಂಕಟ ಅನುಭವಿಸುತ್ತಿರುವ ಕುಟುಂಬಗಳಿಗೆ ನನ್ನ ಸಂತಾಪಗಳು. ಎಲ್ಲರ ಸುರಕ್ಷತೆಗಾಗಿ ಹಾರೈಸುತ್ತೇನೆ ಎಂದು ಡಿಸಿಎಂ ಶಿವಕುಮಾರ್ ಪೋಸ್ಟ್ ಮಾಡಿದ್ದಾರೆ.