Menu

Ahmedabad Air Crash: ಇದೇ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ

ಅಹಮದಾಬಾದ್ ವಿಮಾನ ನಿಲ್ದಾಣದಿಂದ ೨೪೨ ಪ್ರಯಾಣಿಕರನ್ನು ಹೊತ್ತೊಯ್ದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಟೇಕಾಫ್‌ ಆದ ಕೆಲವೇ ಸಮಯದಲ್ಲಿ ಪತನಗೊಂಡಿದ್ದು, ಇದೇ ವಿಮಾನದಲ್ಲಿ ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಪ್ರಯಾಣಿಸುತ್ತಿದರು ಎಂದು ವರದಿಯಾಗಿದೆ.

ವಿಜಯ್‌ ರೂಪಾನಿ ಹಾಗೂ ಅವರ ಸಂಬಂಧಿಗಳು ಕೂಡ ಈ ವಿಮಾನದಲ್ಲಿದ್ದರು ಎನ್ನಲಾಗಿದೆ. ಅಪಘಾತದ ಸ್ಥಳದಿಂದ ದಟ್ಟವಾದ ಹೊಗೆ ವ್ಯಾಪಿಸುತ್ತಿದ್ದು, ಅಗ್ನಿಶಾಮಕ ದಳ ಸೇರಿದಂತೆ ತುರ್ತು ಸೇವಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.

ಹೆಚ್ಚಿನ ಪ್ರಮಾಣದಲ್ಲಿ ಸಾವು ನೋವುಗಳು ಸಂಭವಿಸಿರುವ ಸಾಧ್ಯತೆಯಿದ್ದು, ಅಧಿಕೃತ ಮಾಹಿತಿ ಇನ್ನಷ್ಟೇ ಪ್ರಕಟವಾಗಬೇಕಿದೆ.

Related Posts

Leave a Reply

Your email address will not be published. Required fields are marked *