Menu

Ahmedabad Air Crash: ಇಂಡಿಯಾ ವಿಮಾನ ದುರಂತ-ಮೃತರ ಕುಟುಂಬಕ್ಕೆ ತಲಾ ಒಂದು ಕೋಟಿ ರೂ. ಪರಿಹಾರ ಪ್ರಕಟಿಸಿದ ಟಾಟಾ ಗ್ರೂಪ್‌

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ 1 ಕೋಟಿ ರೂ. ಪರಿಹಾರ ಪ್ರಕಟಿಸಿದೆ.

ಲಂಡನ್​ಗೆ ಹೊರಟಿದ್ದ 242 ಪ್ರಯಾಣಿಕರು ಮತ್ತು 12 ಮಂದಿ ಸಿಬ್ಬಂದಿ ಇದ್ದ ಏರ್​ ಇಂಡಿಯಾ ವಿಮಾನ ಗುರುವಾರ ಮಧ್ಯಾಹ್ನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ. ದುರಂತದಲ್ಲಿ ಒಬ್ಬ ಪರಯಾಣಿಕ ಪವಾಡಸದೃಶವಾಗಿ ಪಾರಾಗಿದ್ದಾರೆ.

ಟಾಟಾ ಗ್ರೂಪ್​​ನ ಅಧ್ಯಕ್ಷ ಎನ್ ಚಂದ್ರಶೇಖರನ್​​​ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂತಾಪ ಸೂಚಿಸಿದ್ದಾರೆ. ಈ ದುರಂತದಿಂದ ನಾವು ದುಃಖಿತರಾಗಿದ್ದೇವೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರೊಂದಿಗೆ ನಮ್ಮ ಮತ್ತು ಪ್ರಾರ್ಥನೆಗಳು ಇರುತ್ತವೆ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ 1 ಕೋಟಿ ರೂ. ಹಾಗೂ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಭರಿಸುತ್ತೇವೆ ಮತ್ತು ಅವರಿಗೆ ಅಗತ್ಯವಿರುವ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳುತ್ತೇವೆ. ವಿಮಾನ ಪತನಗೊಂಡ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್​ನ ಪುನರ್​ನಿರ್ಮಾಣಕ್ಕೆ ನೆರವು ನೀಡುತ್ತೇವೆ ಎಂದು ಟ್ವೀಟ್​ ಮಾಡಿದ್ದಾರೆ.

ದುರಂತ ನಡೆದ ಸಂಭವಿಸಿದ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್​ನ ಮೂವರು ಮೃತಪಟ್ಟಿದ್ದಾರೆ. ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *