Menu

ಎಐಸಿಸಿ ಅಖಿಲ ಭಾರತ ಓಬಿಸಿ ಸಲಹಾ ಸಮಿತಿಯ ಸಭೆ ಅತ್ಯಂತ ಯಶಸ್ವಿ: ಸಿಎಂ ಸಿದ್ದರಾಮಯ್ಯ

obc meeting

ಬೆಂಗಳೂರು: ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ‌ ಸಿದ್ದರಾಮಯ್ಯ ನ್ಯಾಯ ಯೋಧ ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ ಪರ ಬದ್ಧತೆಗೆ, ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದರು.

ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಆವರು ಸಭೆಯಲ್ಲಿ ನಡೆದ ಚರ್ಚೆಯ ಮಾಹಿತಿ ನೀಡಿದರು.

ಸಮಾಜದ ನಿರ್ಲಕ್ಷಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ತೋರಿರುವ ಧೈರ್ಯ  ಹಾಗೂ ವಿಶೇಷವಾಗಿ ಹಿಂದುಳಿದ ವರ್ಗಗಳ ಬಗ್ಗೆ ತೋರಿರುವ ಕಾಳಜಿಗೆ ಎಐಸಿಸಿ ಒಬಿಸಿ ವಿಭಾಗದ ಸಲಹಾ ಸಮಿತಿಯು,  ನ್ಯಾಯ ಯೋಧರಾದ ರಾಹುಲ್ ಗಾಂಧಿಯವರಿಗೆ ಧನ್ಯವಾದ  ಅರ್ಪಿಸುತ್ತದೆ ಎಂದರು.

ರಾಹುಲ್ ಗಾಂಧಿಯವರ ದೃಢನಿಶ್ಚಯದಿಂದಾಗಿ ಮನುವಾದಿ ಮೋದಿ ಸರ್ಕಾರವನ್ನು ನ್ಯಾಯಯುತ ಮತ್ತು ಸಾಂವಿಧಾನಿಕ ಬೇಡಿಕೆಯಾಗಿದ್ದ ಜಾತಿ ಗಣತಿಯನ್ನು  ಭಾರತದಲ್ಲಿ ಕೈಗೊಳ್ಳುವಂತೆ ಮಾಡಿತು. ಈ ಐತಿಹಾಸಿಕ ಸಾಧನೆಗಾಗಿ ಭಾರತದ ಎಲ್ಲಾ ಹಿಂದುಳಿದ ವರ್ಗಗಳ ಪರವಾಗಿ ಸಮಿತಿಯು ಹೃತ್ಪೂರ್ವಕವಾಗಿ ರಾಹುಲ್ ಗಾಂಧಿಯವರನ್ನು ಶ್ಲಾಘಿಸುತ್ತದೆ ಎಂದು ಅವರು ನುಡಿದರು.

ಇದೊಂದು ಮೈಲಿಗಲ್ಲಾದರೂ, ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಇದೊಂದು ಸಣ್ಣ ಹೆಜ್ಜೆ. ನ್ಯಾಯ ಯೋಧ ರಾಹುಲ್ ಗಾಂಧೀಜಿಯವರ ಅಚಲ ನಾಯಕತ್ವದಡಿಯಲ್ಲಿ, ಭಾರತವು ಅತ್ಯುನ್ನತ ಸಾಂವಿಧಾನಿಕ ಉದ್ದೇಶವಾದ ಸಾಮಾಜಿಕ ಪರಿವರ್ತನೆಯನ್ನು ಸಾಕಾರಗೊಳಿಸಲಿದೆ. ತನ್ಮೂಲಕ ನಮ್ಮ ಮಹಾನ್ ದೇಶದಲ್ಲಿ ಸಮಸಮಾಜವನ್ನು ನಿರ್ಮಿಸಲು ಇದರಿಂದ ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ನ್ಯಾಯ ಯೋಧರಾದ ರಾಹುಲ್ ಗಾಂಧಿಜಿಯವರ ಧೀರ ಮತ್ತು ನಿರ್ಭಯ ನಾಯಕತ್ವದಡಿಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ಹಿಡಿದು ಎಲ್ಲರಿಗೂ ಸಾಮಾಜಿಕ ನ್ಯಾಯ ದೊರಕಿಸಲು ನಿರ್ಧರಿಸಿ, ಹೋರಾಡಲು ನಾವೆಲ್ಲರೂ ಪ್ರಮಾಣ ಮಾಡುತ್ತೇವೆ ಎಂದರು.

Related Posts

Leave a Reply

Your email address will not be published. Required fields are marked *