ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಗಿದೆ.
ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 242 ಪ್ರಯಾಣಿಕರನ್ನು ಹೊತ್ತೊಯ್ದಿತ್ತು. ಅಪಘಾತ ಸಂಭವಿಸಿದ ಪ್ರದೇಶದಿಂದ ದಟ್ಟವಾದ ಕಪ್ಪು ಹೊಗೆ ಚಿಮ್ಮುತ್ತಿದೆ.
ಅಪಘಾತದ ನಂತರ ಏಳು ಅಗ್ನಿಶಾಮಕ ವಾಹನಗಳು ಸೇರಿದಂತೆ ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಬಹಳಷ್ಟು ಸಾವು ನೋವು ಸಂಭವಿಸಿರುವ ಸಾಧ್ಯತೆ ದಟ್ಟವಾಗಿದೆ.