Menu

ಏರ್‌ ಇಂಡಿಯಾದಲ್ಲಿ ಮತ್ತೆ ತಾಂತ್ರಿಕ ದೋಷ: ಮುಂಬೈಗೆ ತೆರಳಬೇಕಿದ್ದ ವಿಮಾನ ಕೋಲ್ಕೊತಾದಲ್ಲಿ ನಿಲುಗಡೆ

ಸ್ಯಾನ್ ಫ್ರಾನ್ಸಿಸ್ಕೋದಿಂದ ಇಂದು ಮುಂಜಾನೆ ಕೋಲ್ಕತ್ತಾ ಮೂಲಕ ಮುಂಬೈಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಗಿದೆ.

ಎಡ ಎಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಕಾರಣ ಕೋಲ್ಕತ್ತಾದಿಂದ ಮುಂಬೈಗೆ ಟೇಕಾಫ್ ಆಗುವುದು ವಿಳಂಬವಾಯಿತು. ಏರ್ ಇಂಡಿಯಾ ವಿಮಾನ AI180 ಸ್ಯಾನ್ ಫ್ರಾನ್ಸಿಸ್ಕೋ ವಿಮಾನ ನಿಲ್ದಾಣದಿಂದ ನಿಗದಿತ ಸಮಯದಲ್ಲಿ ಹೊರಟಿತು. ಬೆಳಗ್ಗೆ 12:45 ಕ್ಕೆ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ, ಎಡ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು. 5:20ಕ್ಕೆ ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಇಳಿಸಲಾಯಿತು. ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕ್ಯಾಪ್ಟನ್ ಪ್ರಯಾಣಿಕರಿಗೆ ತಿಳಿಸಿದರು.

ಕಳೆದ ಗುರುವಾರ ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ AI-171, ಟೇಕ್ ಆಫ್ ಆದ ಕೆಲವೇ ಸೆಕೆಂಡ್‌ ಗಳಲ್ಲಿ ಪತನಗೊಂಡು ಅದರಲ್ಲಿದ್ದ ಪ್ರಯಾಣಿಕರಲ್ಲಿ ಒಬ್ಬರು ಹೊರತುಪಡಿಸಿ ೨೪೧ ಮಂದಿ ಮೃತಪಟ್ಟಿದ್ದರು. ಸೋಮವಾರವ ನವದೆಹಲಿಯಲ್ಲಿ ಲ್ಯಾಂಡ್‌ ಆಗ ಬೇಕಿದ್ದ ಏರ್ ಇಂಡಿಯಾ ವಿಮಾನವನ್ನು ಮತ್ತೆ ಹಾಂಕಾಂಗ್‌ಗೆ ತಿರುಗಿಸಲಾಗಿದೆ. ತಾಂತ್ರಿಕ ದೋಷದಿಂದಾಗಿ ಈ ಕ್ರಮ ಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ.

Related Posts

Leave a Reply

Your email address will not be published. Required fields are marked *