ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಬಳಿ ಕುರಿ, ಮೇಕೆ ತುಂಬಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಲಾರಿಯಲ್ಲಿದ್ದ ಸೀನಪ್ಪ(50), ನಜೀರ್ ಅಹ್ಮದ್(36), ಆನಂದ್(42) ಮೃತಪಟ್ಟವರು. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುರಿ, ಮೇಕೆ ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಲಾರಿ ಸಂಚರಿಸುತ್ತಿದ್ದಾಗ ಟೈರ್ ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಲಾಗಿತ್ತು. ಆ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಲಾರಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಬೆಂಗಳೂರಿನ ಹೆಸರಘಟ್ಟ ಸಮೀಪದ ತೋಟಗೆರೆಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಚಿಕ್ಕಬಾಣಾವರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.