ಚನ್ನಪಟ್ಟಣ: ಬಹುಭಾಷಾ ನಟಿ ಡಾ. ಬಿ. ಸರೋಜಾದೇವಿಯವರ ಅಂತ್ಯಕ್ರಿಯೆ ಅವರ ಹುಟ್ಟೂರು ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ನೆರವೇರಲಿದೆ.
ತಮ್ಮ ತವರೂರಿನಲ್ಲಿ ಮಾವಿನ ತೋಟದ ಪಕ್ಕದಲ್ಲಿರುವ ತಾಯಿಯ ಸಮಾಧಿ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನಡೆಸಲು ಕುಟುಂಬ ಚಿಂತನೆ ನಡೆಸಿದೆ.
ಬಹುಭಾಷಾ ನಟಿ ಡಾ. ಬಿ. ಸರೋಜಾದೇವಿಯವರ ನಿಧನ ಹಿನ್ನೆಲೆಯಲ್ಲಿ ಅವರ ತವರೂರಾದ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲು ಸಿದ್ದತೆ ಮಾಡಲಾಗಿದೆ.
ತೆಲುಗು ಹಾಗೂ ತಮಿಳು ಚಿತ್ರರಂಗದಿಂದ ಸೇರಿದಂತೆ ವಿವಿಧ ಭಾಷೆಗಳ ನಟ-ನಟಿಯರು ಭಾಗಿಯಾಗಲಿರುವ ಹಿನ್ನಲೆಯಲ್ಲಿ ಗ್ರಾಮದ ಸುತ್ತಮುತ್ತ ವ್ಯಾಪಕ ಬಂದೋಬಸ್ತು ಹಾಗೂ ಕಟ್ಟುನಿಟ್ಟಿನ ವ್ಯವಸ್ಥೆಗಳ ಕೈಗೆತ್ತಿಕೊಳ್ಳಲಾಗಿದೆ.