Menu

ಕೇಂದ್ರದ ಸೂಚನೆಯಂತೆ ಎಲ್ಲಾ ಸುರಕ್ಷತಾ ಕ್ರಮ ಪಾಲನೆ: ಸಿಎಂ

ಉಗ್ರರ ನೆಲೆಗಳ ಮೇಲೆ ದಾಳಿ  ಬಳಿಕ ಕೇಂದ್ರ ಸರ್ಕಾರದ  ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ.

ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮವದರೊಂದಿಗೆ ಮಾತನಾಡಿದರು. ಅಣೆಕಟ್ಟೆಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಂಡಿದ್ದಾರೆ ಎಂದರು.

ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿಮ  ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವ ವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ, ಎಷ್ಟು ಜನ ಉಳಿ ದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದರು. ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವುದಾಗಿ ಮುಖ್ಯಮಂತ್ರಿ  ತಿಳಿಸಿದರು.

Related Posts

Leave a Reply

Your email address will not be published. Required fields are marked *