Menu

ಇರಾನ್‌ನ ರಾಡಾರ್, ಡ್ರೋನ್ ಕೇಂದ್ರಗಳ ಮೇಲೆ ಅಮೆರಿಕ ದಾಳಿ

ಅಮೆರಿಕ ಇರಾನ್‌ನ ಗೊರುಕ್ ಮತ್ತು ಕ್ವೆಶ್ಮ್ ದ್ವೀಪಗಳಲ್ಲಿರುವ ರಾಡಾರ್ ಮತ್ತು ಡ್ರೋನ್ ನಿಯಂತ್ರಣ ಕೇಂದ್ರಗಳ ಮೇಲೆ ದಾಳಿ ನಡೆಸಿದ್ದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ ತಿಳಿಸಿದೆ. ಅಂತರರಾಷ್ಟ್ರೀಯ ಜಲಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಮೆರಿಕದ ಎಂಕ್ಯೂ-1 ಡ್ರೋನ್ ಅನ್ನು ಇರಾನ್ ಹೊಡೆದುರುಳಿಸಿತ್ತು. ಇದಕ್ಕೆ ಪ್ರತಿಯಾಗಿ ಈ ದಾಳಿ ನಡೆಸಲಾಗಿದೆ ಎಂದು ಹೇಳಿದೆ.

ಇರಾನ್‌ನ ವಾಯು ರಕ್ಷಣಾ ವ್ಯವಸ್ಥೆ, ಡ್ರೋನ್ ನಿಯಂತ್ರಣ ಕೇಂದ್ರ ಹಾಗೂ ಎರಡು ದಾಳಿ ನಡೆಸುವ ಡ್ರೋನ್‌ಗಳನ್ನು ಈ ದಾಳಿ ಮೂಲಕ ನಾಶಪಡಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಯಾವುದೇ ಅಮೆರಿಕ ಸೇನಾ ಸಿಬ್ಬಂದಿಗೆ ಹಾನಿಯಾಗಿಲ್ಲ ಎಂದು ಸೆಂಟ್ರಲ್ ಕಮಾಂಡ್ ಹೇಳಿಕೊಂಡಿದೆ.

ಕಳೆದ ವಾರವೂ ಅಮೆರಿಕ ಮತ್ತು ಇರಾನ್ ನಡುವೆ ದಾಳಿ ಪ್ರತಿದಾಳಿಗಳು ನಡೆದಿದ್ದವು. ಹೊರ್ಮುಜ್ ಜಲಸಂಧಿ ಸಮೀಪ ಇರಾನ್ ಡ್ರೋನ್ ಕಾರ್ಯಾಚರಣೆಯನ್ನು ಗುರಿಯಾಗಿಸಿ ಅಮೆರಿಕ ದಾಳಿ ನಡೆಸಿತ್ತು. ಪ್ರತಿಯಾಗಿ ಇರಾನ್ ಅಮೆರಿಕದ ಸೇನಾ ನೆಲೆಯ ಮೇಲೆ ಆಕ್ರಮಣ ಮಾಡಿತ್ತು.

ಉಭಯ ದೇಶಗಳ ನಡುವೆ ಕದನ ವಿರಾಮ ವಿಸ್ತರಣೆ ಹಾಗೂ ಹೊರ್ಮುಜ್ ಜಲಸಂಧಿ ತೆರೆಯುವ ಕುರಿತು ಮಾತುಕತೆಗಳು ನಡೆಯುತ್ತಿರುವ ಮಧ್ಯೆಯೇ ಈ ಬೆಳವಣಿಗೆ ನಡೆದಿದೆ.

Related Posts

Leave a Reply

Your email address will not be published. Required fields are marked *