Thursday, January 30, 2025
Menu

ಜ.17ರಿಂದ ಬೆಂಗಳೂರಲ್ಲಿ ಅಮೆರಿಕ ಕಾನ್ಸುಲೇಟ್ ಕಚೇರಿ

ಬೆಂಗಳೂರಿನ ಜೆಡಬ್ಲ್ಯು ಮ್ಯಾರಿಯೇಟ್ ಹೋಟೆಲ್‌ನಲ್ಲಿ ಅಮೆರಿಕದ ಕಾನ್ಸುಲೇಟ್ ಕಚೇರಿ ಜ.17ರಂದು ಕಾರ್ಯಾರಂಭಿಸಲಿದೆ. ಇದರಿಂದ ಕನ್ನಡಿಗರು ಇನ್ನು ಮುಂದೆ ಚೆನ್ನೈ ಸೇರಿ ನೆರೆಯ ರಾಜ್ಯಗಳಿಗೆ ಹೋಗುವ ಬದಲು ಬೆಂಗಳೂರಿನಲ್ಲೇ ಅಮೆರಿಕದ ವೀಸಾ ಮತ್ತು ಅದಕ್ಕೆ ಸಂಬಂಧಿಸಿದ ಸೇವೆ ಪಡೆಯಬಹುದು.

ಈ ಹೋಟೆಲ್‌ನಲ್ಲಿ ಈಗಾಗಲೇ ಯುನೈಟೆಡ್ ಸ್ಟೇಟ್ಸ್ ಕಮರ್ಷಿಯಲ್ ಸರ್ವಿಸ್ (ಯುಎಸ್ ಸಿಎಸ್) ಕಚೇರಿ ಇದ್ದು, ಅದೇ ಸ್ಥಳದಲ್ಲೇ ಕಾನ್ಸುಲೇಟ್ (ದೂತಾವಾಸ) ಕಚೇರಿ ಕಾರ್ಯಾರಂಭ ಮಾಡಲಿದೆ. ಕಾನ್ಸುಲೇಟ್ ಕಚೇರಿ ಸ್ಥಾಪಿಸಲು ಐಟಿ-ಬಿಟಿ ಕಂಪನಿಗಳು ಹೆಚ್ಚಾಗಿರುವ ವೈಟ್ ಫೀಲ್ಡ್ ಸೇರಿ 2-3 ಸ್ಥಳಗಳನ್ನು ರಾಜ್ಯ ಸರ್ಕಾರ ಗುರುತಿಸಿದೆ. ಅದರಲ್ಲಿ ಒಂದು ಸ್ಥಳವನ್ನು ಅಮೆರಿಕದ ಅಧಿಕಾರಿಗಳು ಆಯ್ಕೆ ಮಾಡುವವರೆಗೆ ಜೆಡಬ್ಲ್ಯುಮ್ಯಾರಿಯೇಟ್ ಹೋಟೆಲ್‌ನಲ್ಲಿ ಕಚೇರಿ ಕಾರ್ಯ ನಿರ್ವಹಿಸಲಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರಿನ ಸಾವಿರಾರು ಜನ ಅಮೆರಿಕ ವೀಸಾ ಕೆಲಸಗಳಿಗಾಗಿ ನೆರೆಯ ಚೆನ್ನೈ, ಹೈದರಾಬಾದ್ ಹಾಗೂ ಮುಂಬೈ ನಗರಗಳಲ್ಲಿರುವ ಕಾನ್ಸುಲೇಟ್ ಕಚೇರಿಗಳಿಗೆ ಹೋಗಬೇಕಾಗಿದೆ. ಇದರಿಂದ ಅನಗತ್ಯವಾಗಿ ಜನರ ಹಣ ಮತ್ತು ಸಮಯ ಪೋಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲೇ ಕಾನ್ಸುಲೇಟ್ ಕಚೇರಿ ಆರಂಭಿಸಬೇಕು ಎಂಬ ಬೇಡಿಕೆ ಹತ್ತಾರು ವರ್ಷಗಳಿಂದ ಇತ್ತು, ಬೇಡಿಕೆ ಕೊನೆಗೂ ಈಡೇರುತ್ತಿದೆ.

Related Posts

Leave a Reply

Your email address will not be published. Required fields are marked *