ಅಖಂಡ ವಿರುದ್ಧ ಶಿಸ್ತುಕ್ರಮ:ಡಿಕೆಶಿ

ಅಖಂಡ ವಿರುದ್ಧ ಶಿಸ್ತುಕ್ರಮ:ಡಿಕೆಶಿ

ಬೆಂಗಳೂರು,ಮಾ.2 ಡಿಜೆ ಹಳ್ಳಿ ಕೆಜೆಹಳ್ಳಿ ಪ್ರಕರಣ ಕುರಿತು ತಮ್ಮ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಗೆ ಎಚ್ಚರಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಡಿಜೆಹಳ್ಳಿ-ಕೆಜೆಹಳ್ಳಿ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ಕುಮಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೇ ಡಿಕೆಶಿ ತಮಗೆ ಅನ್ಯಾಯ ಮಾಡುತ್ತಿದ್ದು, ಸಿದ್ದರಾಮಯ್ಯ ಜೊತೆಗೂಡಿ ದೆಹಲಿಯ ಹೈಕಮಾಂಡ್ ಗೆ ದೂರು ನೀಡುವುದಾಗಿ ಅಖಂಡ ಶ್ರೀನಿವಾಸಮೂರ್ತಿ ಹೇಳಿಕೆ ನೀಡಿದ್ದರು.

ಅಖಂಡ ಹೇಳಿಕೆಗಿಂದು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಅಖಂಡ ಶ್ರೀನಿವಾಸ್ ಮೂರ್ತಿಯಾಗಿರಬಹುದು ಅಥವಾ ಪಕ್ಷದಲ್ಲಿ ಯಾರೇ ಇರಬಹುದು, ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಬೇಕೇ ವಿನಃ ಬಹಿರಂಗವಾಗಿ ಚರ್ಚಿಸಬಾರದು.ಪಕ್ಷದ ಯಾವುದೇ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಬಾರದು ಎಂದು ಎಚ್ಚರಿಕೆ ನೀಡಿದರು.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಚಾರವಾಗಿ ಎಐಸಿಸಿ ಮುಖಂಡ ಮಧುಯಸ್ಕಿಗೌಡ್ ಮೈಸೂರಿಗೆ ಭೇಟಿ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ಮೈಸೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಗೆ ಏಕೆ ಮೇಯರ್ ಸ್ಥಾನ ಸಿಗಲಿಲ್ಲ ಎಂಬ ಬಗ್ಗೆ ಮಾಹಿತಿ ಪಡೆಯುತ್ತಾರೆ. ಮಧುಯಸ್ಕಿಗೌಡ ನನ್ನನ್ನೂ ಸಹ ಭೇಟಿಯಾಗಿದ್ದಾರೆ. ಪಕ್ಷದಲ್ಲಿ ಯಾವುದೇ ಅಶಿಸ್ತನ್ನು ಸಹಿಸುವುದಿಲ್ಲ.ಇಲ್ಲಿ ಶಿಸ್ತು ಮುಖ್ಯ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

,

Leave a Reply

Your email address will not be published. Required fields are marked *