Menu

ಅಂಗನವಾಡಿ ಸಹಾಯಕಿಯ ಕೊಲೆ ಆರೋಪಿ ಬಂಧನ

ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಬಿಳಕಿ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿ ಪ್ರೇಮಾ (52)ಎಂಬವರ  ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ  ಆರೋಪಿಯನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶಿಕಾರಿಪುರ ತಾಲೂಕಿನ ತೊಗರ್ಸಿ ಸಮೀಪದ ಕೋಡಿಹಳ್ಳಿ ಗ್ರಾಮದ ರಾಘವೇಂದ್ರ (26) ಎಂದು ಗುರುತಿಸಲಾಗಿದೆ. ಫೆಬ್ರವರಿ 14 ರಂದು ಬಿಳಕಿ ಗ್ರಾಮದ ಮನೆಯಲ್ಲಿ ಪ್ರೇಮಾ ಅವರ ಮೃತದೇಹ ಮೈಮೇಲೆ ಬಟ್ಟೆಯಿಲ್ಲದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಮೃತ ಮಹಿಳೆಯ ಪುತ್ರ, ತನ್ನ ತಾಯಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮೃತ ಪ್ರೇಮಾ ಅವರ ಪತಿ ಎಂಟು ವರ್ಷಗಳ ಹಿಂದೆಯೇ ನಿಧನರಾಗಿದ್ದರು. ಅವರ ಖಾಸಗಿ ಅಂಗದಲ್ಲಿ ರಕ್ತ ಹೆಪ್ಪುಟ್ಟಿರುವುದು ಪತ್ತೆಯಾಗಿತ್ತು. ಅವರಿಗೆ ನಾಲ್ವರು ಮಕ್ಕಳಿದ್ದು, ಮೂವರು ಹೆಣ್ಣು ಮಕ್ಕಳಿಗೆ ವಿವಾಹವಾಗಿದೆ. ಮಗ ಸಾಗರದಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಮನೆಯಲ್ಲಿ ಪ್ರೇಮಾ ಅವರು ಒಬ್ಬರೇ ವಾಸವಿದ್ದರು ಎನ್ನಲಾಗಿದೆ.

ಕೊಲೆಯಾದ ರಾತ್ರಿ ಕಳೆದು   ಬೆಳಿಗ್ಗೆ ಮನೆಗೆ ಬಂದ ಕುಟುಂಬಸ್ಥರು ಹಾಗೂ ನೆರೆಹೊರೆಯವರು ರಕ್ತದ ಮಡುವಿನಲ್ಲಿ ಬಿದ್ದಿದ್ದ ದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿ ರಾಘವೇಂದ್ರನನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ವಿಚಾರಣೆ ನಡೆಸಲಾಗುತ್ತಿದೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *