ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ, ಸಾರಿಗೆ ನೌಕರರ ಪ್ರತಿಭಟನೆ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ, ಸಾರಿಗೆ ನೌಕರರ ಪ್ರತಿಭಟನೆ


ಬೆಂಗಳೂರು, ಮಾರ್ಚ್ 2  ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಾರಿಗೆ ನೌಕರರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಈ ಬಾರಿಯ ಬಜೆಟ್ ನಲ್ಲಿ ಸಾರಿಗೆ ನೌಕರರ 6ನೇ ವೇತನ ಆಯೋಗ ಜಾರಿಯಾಗಬೇಕು ಎನ್ನುವ ಬೇಡಿಕೆ ಮುಂದಿಟ್ಟುಕೊಂಡು ಸಾರಿಗೆ ನೌಕರರು ಮೌರ್ಯ ವೃತ್ತದಲ್ಲಿ ಒಂದು ದಿನದ ಉಪವಾಸ ಕೈಗೊಂಡಿದ್ದಾರೆ.

ಡಿಸೆಂಬರ್ ತಿಂಗಳಲ್ಲಿ ಮುಷ್ಕರ ನಡೆಯುತ್ತಿದ್ದ ಸಂದರ್ಭದಲ್ಲಿ ಸರ್ಕಾರ 10 ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿತ್ತು. ಅದರಲ್ಲಿ ಅತಿ ಮುಖ್ಯವಾಗಿದ್ದು ಎಂದರೆ ಆರನೇ ವೇತನ ಆಯೋಗ ಜಾರಿಯಾಗಬೇಕೆನ್ನುವುದಾಗಿತ್ತು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಉಚಿತ ವೈದ್ಯಕೀಯ ಸೌಲಭ್ಯ ನೀಡಬೇಕು, ಸೇವಾ ಹಿರಿತನದ ಆಧಾರದಲ್ಲಿ ಗೌರವಧನ ಹೆಚ್ಚಳ ಮಾಡಬೇಕು, ಎಲ್ ಕೆ.ಜಿ ಯುಕೆಜಿಯನ್ನು ಅಂಗನವಾಡಿಯಲ್ಲೇ ಆರಂಭಿಸಬೇಕು ಎನ್ನುವ ಕೆಲವು ಬೇಡಿಕೆಗಳನ್ನು ಮುಂದಿಡಲಾಗಿದೆ.
ಇನ್ನು ಬಸ್ ಗಳ ಸಂಚಾರಕ್ಕೆ ಯಾವುದೇ ರೀತಿಯ ಅಡ್ಡಿ ಇಲ್ಲ, ಇಂದಿನ ಪ್ರತಿಭಟನೆಯಲ್ಲಿ ಎಲ್ಲಾ ನಿಗಮದ ನೌಕರರು ಭಾಗಿಯಾಗಲಿದ್ದಾರೆ. ಆದರೆ ವಾರದ ರಜೆ ಇರುವ ನೌಕರರು ಮಾತ್ರ ಹೋರಾಟದಲ್ಲಿ ಭಾಗಿಯಾಗಲು ಸಾರಿಗೆ ನಿಗಮಗಳ ನೌಕರರ ಸಂಘಗಳು ಸೂಚಿಸಿವೆ.
ಹೀಗಾಗಿ ಇಂದು ಯಾವುದೇ ಬಸ್ ಗಳ ಸಂಚಾರದಲ್ಲಿ ಅಡ್ಡಿ ಇರುವುದಿಲ್ಲ, ಮಾರ್ಚ್ 15ಕ್ಕೆ ಸರ್ಕಾರ ತೆಗೆದುಕೊಂಡ ಗಡುವು ಮುಕ್ತಾಯವಾಗಲಿದ್ದು ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದೂ ಸಾರಿಗೆ ನೌಕರರು ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *