ಕಂಗನಾ ವಿರುದ್ಧ ವಿವಾದತ್ಮಕ ಹೇಳಿಕೆ ನೀಡಿದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಬೆದರಿಕೆ ಕರೆ

ಮುಂಬೈ:ಬಾಲಿವುಡ್ ನಟಿ ಕಂಗನಾ ರಾನಾವತ್ ವಿರುದ್ಧ ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರಿಗೆ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ.

ಬೆದರಿಕೆ ಕರೆ ಬಂದಿರುವ ಬಗ್ಗೆ ಖಚಿತ ಮೂಲಗಳಿಂದ ಮಾಹಿತಿ ದೊರೆತಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದ್ದು ಎಲ್ಲಿಂದ ಬಂದಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಈ ಮಧ್ಯೆ ಇಂದು ನಟಿ ಕಂಗನಾ ರಾನಾವತ್ ಮುಂಬೈಗೆ ಆಗಮಿಸುತ್ತಿದ್ದು, ಇಂದು ಬೆಳಗ್ಗೆ ಹಿಮಾಚಲ ಪ್ರದೇಶದ ಪಮಿರ್ಪುರ್ ಜಿಲ್ಲೆಯಲ್ಲಿ ಕೊಥಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ ಚಂಡೀಗಢ ಮೂಲಕವಾಗಿ ಮುಂಬೈಗೆ ತೆರಳಿದ್ದಾರೆ. ಮುಂಬೈ ಗೆ ಆಗಮಿಸಿರುವ ಕಂಗನಾಗೆ ಕರ್ಣಿ ಸೇನೆ ರಕ್ಷಣೆ ಒದಗಿಸಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *