Menu

ಮಂಡ್ಯದ ಅಂಕೇಗೌಡ, ಬೆಂಗಳೂರಿನ ಸುಶೀಲಮ್ಮ ಸೇರಿ 45 ಜನರಿಗೆ ಪದ್ಮ ಪ್ರಶಸ್ತಿ

2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಕರ್ನಾಟಕದ ಜ್ಞಾನದಾಸೋಹಿ ಮಂಡ್ಯದ ಅಂಕೇಗೌಡ (ಸಾಹಿತ್ಯ ಮತ್ತು ಶಿಕ್ಷಣ) , ಸಮಾಜ ಸೇವಕಿ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಸಂಸ್ಥಾಪಕಿ ಡಾ. ಎಸ್.ಜಿ. ಸುಶೀಲಮ್ಮ ಸೇರಿದಂತೆ 45 ಜನರಿಗೆ ಪ್ರತಿಷ್ಠಿತ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಲಾಗಿದೆ.

ಕಲೆ, ಸಾಹಿತ್ಯ, ಕ್ರೀಡೆ, ಸಮಾಜ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಅಂಕೇಗೌಡ , ಡಾ. ಎಸ್.ಜಿ. ಸುಶೀಲಮ್ಮ(ಕರ್ನಾಟಕ), ಆರ್ಮಿಡಾ ಫರ್ನಾಂಡೆಸ್, ಪದ್ಮ ಗುರ್ಮೆಟ್, ತಿರುವಾರೂರ್ ಭಕ್ತವತ್ಸಲಂ ಮತ್ತು ಇತರರಿಗೆ ಪದ್ಮ ಪ್ರಶಸ್ತಿ ಘೋಷಣೆಯಾಗಿದೆ.

ಅಂಕೇಗೌಡರಿಗೆ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ 2026 ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದ ಅಂಕೇಗೌಡರು ರಳಹಳ್ಳಿಯಲ್ಲಿ ಪುಸ್ತಕದ ಮನೆ ನಿರ್ಮಾಣ ಮಾಡಿದ್ದು,ಲಕ್ಷಗಟ್ಟಲೆ ಪುಸ್ತಕಗಳ ಸಂಗ್ರಹವಿದೆ. ಯಾರೇ ಬಂದರೂ, ಯಾವುದೇ ವಿಷಯದ ಪುಸ್ತಕಗಳನ್ನ ನೋಡಬಹುದು, ಓದಬಹುದು. ವಿಶ್ವದ ಎಲ್ಲಾ ಪ್ರಮುಖ ಗ್ರಂಥಗಳು ಒಂದೇ ಸೂರಿನಡಿ ಓದಲು ಸಿಗುವುದು ಈ ಪುಸ್ತಕ ಮನೆಯ ವಿಶೇಷ.

ಸಮಾಜ ಸೇವಕಿ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಸಂಸ್ಥಾಪಕಿ ಡಾ. ಎಸ್.ಜಿ. ಸುಶೀಲಮ್ಮ ಅವರಿಗೆ ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಮಹಿಳಾ ಸಬಲೀಕರಣ, ಶಿಶು ಸಂರಕ್ಷಣೆ ಮತ್ತು ಬಡವರ ಕಲ್ಯಾಣ, ಮಹಿಳಾ ಒಕ್ಕೂಟಗಳ ರಚನೆ, ಸ್ವಯಂ ಉದ್ಯೋಗ ತರಬೇತಿ ನೀಡಿ ಜನರ ಅಭಿವೃದ್ಧಿಗೆ ಶ್ರಮಿಸಿದ್ದಕ್ಕೆ ಈ ಪ್ರಶಸ್ತಿ ಸಂದಿದೆ. ಪ್ರಶಸ್ತಿಗಳನ್ನು ಮಾರ್ಚ್/ಏಪ್ರಿಲ್‌ನಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿಗಳು ಪ್ರದಾನ ಮಾಡುತ್ತಾರೆ.

Related Posts

Leave a Reply

Your email address will not be published. Required fields are marked *