Monday, September 01, 2025
Menu

ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರದ ಮತ್ತೊಂದು ಭ್ರಷ್ಟಾಚಾರ ಬಯಲು: ಆರ್‌. ಅಶೋಕ

ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಬಳಕೆಯಾಗಬೇಕಾಗಿದ್ದ SCSP/TSP ನಿಧಿಯಲ್ಲಿ ಪ್ರತಿ ವರ್ಷ 15,000 ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದಾಯ್ತು. ಈಗ ಬೋವಿ ಅಭಿವೃದ್ಧಿ ನಿಗಮದಲ್ಲಿ ಫಲಾನುಭವಿಗಳಿಗೆ ಹಣ ನೀಡಲು ನಿಗಮದ ಅಧ್ಯಕ್ಷರು ಕಮಿಷನ್ ಕೇಳುತ್ತಿರುವ ಹಗರಣ ಬಯಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಕಿಡಿ ಕಾರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅಶೋಕ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿ ಹಣವನ್ನ ತೆಲಂಗಾಣ ಚುನಾವಣೆಗೆ, ಲೋಕಸಭೆ ಚುನಾವಣೆಗೆ ಬಳಸಿಕೊಂಡು ನುಂಗಿ ನೀರು ಕುಡಿದಿದ್ದಾಯ್ತು. ಭೂ ಒಡೆತನ ಯೋಜನೆಯಡಿ ಭೂಮಿ ಮಂಜೂರಾದವರಿಗೆ 25 ಲಕ್ಷ ಹಣ ಬಿಡುಗಡ ಸಹಾಯಧನ ಬಿಡುಗಡೆ ಮಾಡಲು 5 ಲಕ್ಷ ಕಮಿಷನ್ ಗೆ ಬೇಡಿಕೆ ಇಟ್ಟಿರುವ ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಅವರು @INCKarnataka ಸರ್ಕಾರದಲ್ಲಿ ತಾಂಡವವಾಡುತ್ತಿರುವ ಕಮಿಷನ್ ದಂಧೆ, ಲಂಚಗುಳಿತನ, ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಕನ್ನಡಿ ಹಿಡಿದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸ್ವಾಮಿ ಸಿಎಂ @siddaramaiah ನವರೇ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರವನ್ನ ಸ್ವತಃ ತಾವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎಂಬಂತೆ SCSP/TSP ಹಣದ ದುರ್ಬಳಕೆ ಎಗ್ಗಿಲ್ಲದೆ ನಡೆಯುತ್ತಲೇ ಇದೆ. ಈಗ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆಯುತ್ತಿರುವ ಅಕ್ರಮ ಸಾಕ್ಷಿ ಸಮೇತ ಬಹಿರಂಗವಾಗಿದೆ. ಇಷ್ಟಾದರೂ ತಾವು ಕುರ್ಚಿಗೆ ಅಂಟಿಕೊಂಡು ಕೂರುತ್ತೀರಿ ಎಂದರೆ ನಿಮ್ಮ ಭಂಡತನಕ್ಕೆ ನೀವೇ ಸಾಟಿ. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ, ನೈತಿಕತೆ ಇದ್ದರೆ ತಾವು ಇನ್ನೊಂದು ಕ್ಷಣವೂ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಬಾರದು ಎಂದು ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *