ಅಪರಾಧ
ಅಕ್ಕ-ಪಕ್ಕದ ಮನೆಯವರ ಜಗಳ 6 ವರ್ಷದ ಬಾಲಕಿ ಕೊಲೆಯಲ್ಲಿ ಅಂತ್ಯ
ಕ್ಷುಲಕ ಕಾರಣಕ್ಕೆ ನಡೆದ ಜಗಳದ ಹಿನ್ನೆಲೆಯಲ್ಲಿ ತಾಯಿಗೆ ಬುದ್ದಿ ಕಲಿಸಲು ಆಕೆಯ 6 ವರ್ಷದ ಮಗಳನ್ನು ಬರ್ಬರವಾಗಿ ಕೊಂದು ಶವವನ್ನು ಚರಂಡಿಗೆ ಎಸೆದ ವಿಕೃತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವೈಟ್ಫೀಲ್ಡ್ ಸಮೀಪದ ನಲ್ಲೂರಳ್ಳಿಯಲ್ಲಿ ಮಂಗಳವಾರ ನೆರೆಹೊರೆಯವರ ನಡುವಿನ ದ್ವೇಷಕ್ಕೆ ಪಶ್ಚಿಮ ಬಂಗಾಳ ಮೂಲದ ಶಹಜಾನ್ ಕತೂನ್ (6) ಬಲಿಯಾಗಿದ್ದಾಳೆ. ನಲ್ಲೂರಳ್ಳಿಯಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳದ ಕೊಲ್ಕತ್ತಾ ಮೂಲದ ಕುಟುಂಬ ಹಾಗೂ ಅಕ್ಕಪಕ್ಕದ ಮನೆಯವರಿಗೂ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಇತ್ತೀಚೆಗೆ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಇರಿತ!
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್
ಮೈಸೂರು ಕೋರ್ಟ್ ಗೆ ಬಾಂಬ್ ಬೆದರಿಕೆ ಕರೆ
ಸಾಂಸ್ಕೃತಿಕ ನಗರಿ ಮೈಸೂರಿನ ಹಳೆ ನ್ಯಾಯಾಲಯಕ್ಕೆ ಹುಸಿ ಬಾಂಬ್ ಕರೆ ಬಂದ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪ ಬಹಿಷ್ಕರಿಸಿ ಎಲ್ಲರೂ ಹೊರ ಬಂದ ಘಟನೆ ನಡೆದಿದೆ. ಎಂದಿನಂತೆ ಹಳೆ ಕೋರ್ಟ್ ನಲ್ಲಿ ಕಲಾಪಗಳು ನಡೆಯುತ್ತಿದ್ದವು. ಈ ವೇಳೆ ಹುಸಿ ಬಾಂಬ್ ಬೆದರಿಕೆ ಕರೆ
ಬೆಂಗಳೂರಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ ದೋಚಿದ್ದ ಮನೆಗೆಲಸದ ದಂಪತಿ ಅರೆಸ್ಟ್
ಬೆಂಗಳೂರಿನ ಸದಾಶಿವನಗರದ ನಿವಾಸಿಯೊಬ್ಬರ ಮನೆಯಲ್ಲಿ ನಾಲ್ಕು ವರ್ಷಗಳಿಂದ ಕೆಲಸಕ್ಕಿದ್ದ ಮಹಿಳೆ ಮತ್ತು ಆಕೆಯ ಪತಿ ಸೇರಿ 1.37 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದು, ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ. ಸದಾಶಿವನಗರದ ನಿವಾಸಿ ಅಭಿಷೇಕ್ ಅವರ ಮನೆಯಲ್ಲಿ ಪಶ್ಚಿಮ ಬಂಗಾಳದ ಹಾಜೀರಾ
ದಾವಣಗೆರೆಯಲ್ಲಿ ಬೈಕ್ಗೆ ಗುದ್ದಿದ ಅಪರಿಚಿತ ವಾಹನ: ಸವಾರ ಸಾವು
ದಾವಣಗೆರೆಯ ಶಿರಮಗೊಂಡನಹಳ್ಳಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಬೈಕ್ ಸವಾರ ಮಂಜುನಾಥ (27) ಮೃತಪಟ್ಟ ಯುವಕ. ಗದಗ ಶಿಂಗ್ಲಿ ಗ್ರಾಮದ ಮಂಜುನಾಥ ಬೈಕ್ನಲ್ಲಿ ಬೆಂಗಳೂರಿಗೆ ಬರುತ್ತಿದ್ದಾಗ ಹಿಂಬದಿಯಿಂದ ಅಪರಿಚಿತ ವಾಹನ
ಕೆಎಸ್ಆರ್ಟಿಸಿ ಬಸ್ಗೆ ಟಿಪ್ಪರ್ ಡಿಕ್ಕಿ: 9 ಮಂದಿಗೆ ಗಾಯ
ಟಿಪ್ಪರ್ ಲಾರಿ, ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ವಿದ್ಯಾರ್ಥಿಗಳು ಸೇರಿದಂತೆ 9 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉಡುಪಿಯ ತಲ್ಲೂರು ನೇರಳಕಟ್ಟೆಯ ಶೇಟ್ಟರಕಟ್ಟೆ ತಿರುವಿನ ಹಾಜರಿ ಬಳಿ ನಡೆದಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಬರುತ್ತಿದ್ದ ಕೇರಳ
ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಬಿಕ್ಕಟ್ಟು: ಇರಾನ್ನಲ್ಲಿ ಭುಗಿಲೆದ್ದ ಪ್ರತಿಭಟನೆ, 35 ಮಂದಿ ಬಲಿ
ಇರಾನ್ನಲ್ಲಿ ಆರ್ಥಿಕ ಬಕ್ಕಟ್ಟು ತೀವ್ರಗೊಂಡಿದ್ದು, ಬೆಲೆ ಏರಿಕೆ ಹಾಗೂ ನಿರುದ್ಯೋಗದಿಂದ ತತ್ತರಿಸಿರುವ ಜನ ಪ್ರತಿಭಟನೆ ಆರಂಭಿಸಿದ್ದು, 35ಕ್ಕೂ ಹೆಚ್ಚು ಮಂದಿ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಇರಾನ್ನಲ್ಲಿ ಅಯತೊಲ್ಲಾ ಅಲಿ ಖಮೇನಿ ಆಡಳಿತದ ವಿರುದ್ಧ ಸಾರ್ವಜನಿಕರು ಬಂಡೆದಿದ್ದಾರೆ. 1,200ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿರುವ ಸರ್ಕಾರ,
ಬಾಂಗ್ಲಾದಲ್ಲಿ ಹಿಂದೂ ಪತ್ರಕರ್ತನ ಹತ್ಯೆ, ಹಿಂದೂ ಮಹಿಳೆಯ ಅತ್ಯಾಚಾರ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, 40 ವರ್ಷದ ಹಿಂದೂ ಮಹಿಳೆ ಮೇಲೆ ಇಬ್ಬರು ಅತ್ಯಾಚಾರ ಎಸಗಿ ಮರಕ್ಕೆ ಕಟ್ಟಿಹಾಕಿ ತಲೆಗೂದಲು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಜೆನಿಹಾದಾಹ್ ವಿಭಾಗೀಯ ಜಿಲ್ಲೆಯಾದ ಕಾಲಿಂಗಜ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಪೊಲೀಸರಿಗೆ ದೂರು
ಬಳ್ಳಾರಿ ಗಲಭೆ: 26 ಆರೋಪಿಗಳು ಪರಪ್ಪನ ಅಗ್ರಹಾರಕ್ಕೆ ಸ್ಥಳಾಂತರ
ಬೆಂಗಳೂರು: ಬಳ್ಳಾರಿಯ ಬ್ಯಾನರ್ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಪ್ರಕರಣದ ಸಂಬಂಧ ಕೊಲೆ ಆರೋಪಿ ಗುರುಚರಣ್ ಸಿಂಗ್ ಸೇರಿ 26 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ. ನ್ಯಾಯಾಲಯದ
ದರೋಡೆಗೆ ಸಂಚು ಹಾಕ್ತಿದ್ದ ಐವರು ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ
ಶಿವಮೊಗ್ಗ: ಭದ್ರಾವತಿಯ ಗೋಂದಿ ಕೈಮರದಲ್ಲಿ ದರೋಡೆಗೆ ಸಂಚು ಹಾಕುತ್ತಿದ್ದ ಐವರು ಆರೋಪಿಗಳಿಗೆ 10 ವರ್ಷ ಕಠಿಣ ಶಿಕ್ಷೆ ಮತ್ತು 50 ಸಾವಿರ ದಂಡ ವಿಧಿಸಿ ಭದ್ರಾವತಿಯ ಘನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.




