ಅಪರಾಧ
ವಿಜಯಪುರ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಮಂದಿಯ ಶವ ಪತ್ತೆ
ವಿಜಯಪುರ ನಗರದ ಹೊರಭಾಗದಲ್ಲಿರುವ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ ಆರು ಜನರ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಾಯಿ ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ (ಮೂಗ) (10), ವಿಕಾಸ (5) ಸಾನಿಕಾ (7) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಶೋಭಾ ಮತ್ತು ಗಂಡ ಮಲಕಾರಿಗೆ ಆಗಸ್ಟ್ ೨೩ರಂದು ಜಗಳ ನಡೆದಿತ್ತು. ಆಗ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಆಕೆ ಮನೆಯಿಂದ ಹೊರಟಿದ್ದರು
ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ವ್ಯಕ್ತಿಯ ಹತ್ಯೆ
ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆಂಬ ಶಂಕೆಯಿಂದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಕೊಲೆಗೈದ ವ್ಯಕ್ತಿಯ ಪೋಟೊವನ್ನು ತನ್ನ ಸ್ಟೇಟಸ್‌ಗೆ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ಕೊಲೆ ಆರೋಪಿ ಪತ್ನಿಯೊಂದಿಗೆ ಸೇರಿ
ಶಾಸಕ ಪ್ರದೀಪ್ ಈಶ್ವರ್‌ಗೆ ಜಾಮೀನು ರಹಿತ ವಾರಂಟ್
ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ತನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆಂದು ಮಾನನಷ್ಟ ಕೇಸ್ ದಾಖಲಿಸಿದ್ದರು. ಈ ವಿಚಾರಕ್ಕೆ
ರೇಣುಕಾಸ್ವಾಮಿ ಕೊಲೆ ಕೇಸ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿಗೆ ಕೋರ್ಟ್ ಸಮ್ಮತಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿಗಳಲ್ಲಿ ಒಬ್ಬನಾಗಿರುವ ಪ್ರದೋಷ್ ಮಾಪಿ ಸಾಕ್ಷಿಯಾಗುವುದಾಗಿ ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿದೆ. ಆರೋಪಿ ಪ್ರದೋಷ್ ಮಾಫಿ ಸಾಕ್ಷಿಯಾಗಲು ಸಮ್ಮತಿಸಿ 59ನೇ ಸೆಷನ್ಸ್ ಕೋರ್ಟ್ ನ್ಯಾ. ಸುಜಾತ ಎಂ. ಸಂಬ್ರಾಣಿ ಅವರಿಂದ ಆದೇಶ ಪ್ರಕಟವಾಗಿದೆ.
ಕೆಪಿಎಸ್ಸಿ ಅಕ್ರಮ: ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಕಚೇರಿ ಮೇಲೆ ಸಿಐಡಿ ಪೊಲೀಸರು ಮತ್ತೊಮ್ಮೆ ಮಂಗಳವಾರ ದಾಳಿ ನಡೆಸಿದ್ದಾರೆ. ಎಸ್ಪಿ ರಾಘವೇಂದ್ರ ಹೆಗ್ಡೆ ನೇತೃತ್ವದಲ್ಲಿ ಸಿಐಡಿ ಅಧಿಕಾರಿಗಳ ತಂಡ ಕೆಪಿಎಸ್ಸಿ ಕಚೇರಿಗೆ ತೆರಳಿ ಹಲವು ದಾಖಲೆಗಳ ಪರಿಶೀಲನೆ ಮುಂದುವರಿಸಿದೆ. ಪರೀಕ್ಷೆ
ಅತ್ಯಾಚಾರ ಪ್ರಕರಣ: ತೆಹಲ್ಕಾ ಮಾಜಿ ಸಂಪಾದಕ ತೇಜ್‌ಪಾಲ್ 2 ವಾರದಲ್ಲಿ ಶರಣಾಗಲಿ ಎಂದ ಸುಪ್ರೀಂ
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಎರಡು ವಾರಗಳೊಳಗೆ ಶರಣಾಗಬೇಕು ಎಂದು ಸುಪ್ರೀಂಕೋರ್ಟ್ ಖಡಕ್ ಸೂಚನೆ ನೀಡಿದೆ. ಸಹೋದ್ಯೋಗಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶರಣಾಗತಿಯಿಂದ ವಿನಾಯಿತಿ ನೀಡುವಂತೆ ತೇಜ್‌ಪಾಲ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಮಹಿಳೆ: ಹೆಣ್ಣು ಮಕ್ಕಳಿಬ್ಬರು ನಾಪತ್ತೆ
ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹಕ್ಕೆ ನೊಂದ ಮಹಿಳೆಯೊಬ್ಬರು ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ್ದು, ಮಹಿಳೆ ಮತ್ತು ಮಗನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ, ಆದರೆ ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ. ಚಿತ್ರದುರ್ಗದ ಮಹಿಳೆ ನದಿಗೆ ಹಾರಿದ್ದು, ಮಹಿಳೆ ಹಾಗೂ ಆಕೆಯ 11 ತಿಂಗಳ
ಅಣ್ಣನ ಮನೆಯಿಂದ ಚಿನ್ನಾಭರಣ ಕಳವುಗೈದಾತ ಅರೆಸ್ಟ್
ಹೊಸದಾಗಿ ಏನಾದರೂ ಬ್ಯುಸಿನೆಸ್ ಮಾಡಬೇಕೆಂದು ಯೋಚಿಸಿ ಅದಕ್ಕೆ ಹಣ ಹೊಂದಿಸಲು ಅಣ್ನನ ಮನೆಯಲ್ಲೇ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಬೇಗೂರಿನಲ್ಲಿ ನಡೆದಿದೆ. ವಿನಯ್ ಕುಮಾರ್ ಬಂಧಿತ ಆರೋಪಿ. ಸಂಬಂಧದಲ್ಲಿ ತಮ್ಮನಾಗಿರುವ ವಿನಯ್ ಹೋಟೆಲ್ ಮ್ಯಾನೇಜ್ಮೆಂಟ್ ಓದಿಕೊಂಡಿದ್ದ,
ಸಿಗ್ನಲ್‌ನಲ್ಲಿ ನಿಂತಿದ್ದ ವಾಹನಗಳಿಗೆ ಕಾರು ಡಿಕ್ಕಿ: ಬೈಕ್ ಸವಾರ ಸಾವು
ಬೆಂಗಳೂರಿನ ಕಗ್ಗದಾಸನಪುರ ಮುಖ್ಯ ರಸ್ತೆಯ ವಿಜ್ಞಾನ ನಗರದಲ್ಲಿ ವೇಗವಾಗಿ ಬಂದ ಕಾರೊಂದು ಸಿಗ್ನಲ್‌ನಲ್ಲಿ ನಿಂತಿದ್ದ ಮತ್ತೊಂದು ಕಾರು ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ೩೩ ವರ್ಷದ ನವೀನ್ ಮೃತಪಟ್ಟವರು. ಅವರು ವಿಜ್ಞಾನನಗರ ಸಿಗ್ನಲ್‌ನಲ್ಲಿ
ಸೈಬರ್ ವಂಚನೆ ಜಾಲ: ಇಬ್ಬರನ್ನು ಬಂಧಿಸಿದ ಇಡಿ
ದೇಶದಲ್ಲಿ ವ್ಯಾಪಿಸಿರುವ ಸೈಬರ್ ವಂಚನೆ ಜಾಲದ ವಿರುದ್ಧ ಜಾರಿ ನಿರ್ದೇಶನಾಲಯವು ತನಿಖೆ ತೀವ್ರಗೊಳಿಸಿದ್ದು, ಇಬ್ಬರನ್ನು ಬಂಧಿಸಿದೆ. ಜಾಲದಲ್ಲಿ 30,000 ಕೋಟಿ ರೂ. ಬ್ಯಾಂಕ್ ಮತ್ತು ನಗದು ವಹಿವಾಟು ನಡೆದಿರುವ ಶಂಕೆ ವ್ಯಕ್ತವಾಗಿದೆ. ಫಹೀಮ್ ಮೊಯಿನ್ ಹುಸೇನ್ ಸಯ್ಯದ್ ಮತ್ತು ನಯೀಮ್ ಮುಯೀನ್




