Menu

ಅಲ್ ಖೈದಾ ಸಂಪರ್ಕ ಆರೋಪ: ಪುಣೆಯಲ್ಲಿ ಟೆಕ್ಕಿ ಅರೆಸ್ಟ್‌

ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಪುಣೆಯ ಕೊಂಧ್ವಾದಲ್ಲಿ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಜುಬೈರ್ ಹಂಗರ್ಗೇಕರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು.   ಪುಣೆ ರೈಲು ನಿಲ್ದಾಣದಲ್ಲಿ   ಆರೋಪಿಯನ್ನು ಬಂಧಿಸಿದ ಬಳಿಕ  ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಶೇಷ ಯುಎಪಿಎ ನ್ಯಾಯಾಲಯ ಆರೋಪಿಯನ್ನು ನವೆಂಬರ್ 4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಬಂಧಿತ ಆರೋಪಿಯು

ಹಿಟ್‌ ಅಂಡ್‌ ರನ್‌: ದೊಡ್ಡಬಳ್ಳಾಪುರದಲ್ಲಿ ಯುವಕರಿಬ್ಬರು ಬಲಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ಹಿಟ್​ ಅಂಡ್‌ ರನ್‌ಗೆ ಬೈಕ್​ ಸವಾರರಿಬ್ಬರು ಬಲಿಯಾಗಿದ್ದಾರೆ.  ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ತೂಬಗೆರೆ ನಿವಾಸಿ ನಂದನ್ ಕುಮಾರ್(22) ಮತ್ತು ದೊಡ್ಡತಿಮ್ಮನಹಳ್ಳಿಯ ರವಿಕುಮಾರ್(24) ಮೃತ ಯುವಕರು.

ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆತ್ಮಹತ್ಯೆ

ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ಎಂಬವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದ ಹುಬ್ಬಳ್ಳಿಯ ಭವಾನಿ ನಗರದ ನಿವಾಸಿಯಾಗಿದ್ದು, ಪತ್ನಿ, ಪುತ್ರ ಮತ್ತು ಪುತ್ರಿ

ಬಾಲಕಿಯ ರೇಪ್‌ ಮಾಡಿ ಗರ್ಭಿಣಿಯನ್ನಾಗಿಸಿದ ಮೂವರು ಹೆಂಡತಿಯರ ಗಂಡ

ಕಲಬುರಗಿಯ ಚಿಂಚೊಳ್ಳಿ ತಾಲೂಕಿನ ಮಿರಿಯಾಣದಲ್ಲಿ ಕಲ್ಲು ಪರಸಿಯ ಪಾಲಿಶಿಂಗ್ ಮಾಲೀಕನೊಬ್ಬ ತನ್ನ ಪಾಲಿಶಿಂಗ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಅಪ್ರಾಪ್ತ ವಯಸ್ಕ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ

ಕೊಪ್ಪಳದಲ್ಲಿ ಮಕ್ಕಳಿಬ್ಬರ ಕೊಂದು ತಾಯಿ ಆತ್ಮಹತ್ಯೆ

ಕೊಪ್ಪಳದ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯೊಂದು ನಡೆದಿದೆ. ಮಕ್ಕಳಾದ ರಮೇಶ್​(4), ಜಾನು(2)ವನ್ನು ಹತ್ಯೆ ಮಾಡಿದ ಬಳಿಕ ತಾಯಿ ತಾಯಿ ಲಕ್ಷ್ಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಬೆಳಗಾವಿಯಲ್ಲಿ ಎರಡು ಸಾವಿರ ರೂ. ವಾಪಸ್‌ ಕೊಡದ್ದಕ್ಕೆ ಸ್ನೇಹಿತನ ಕೊಲೆ

ಬೆಳಗಾವಿ ಬೈಲಹೊಂಗಲ ತಾಲೂಕಿನ ಗಿರಿಯಾಲ್ ಗ್ರಾಮದಲ್ಲಿ ಕೊಟ್ಟ ಸಾಲ ವಾಪಸ್ ಕೊಡದಿದ್ದಕ್ಕೆ ಸ್ನೇಹಿತನನ್ನು ಕೊಲೆ ಮಾಡಿ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಗಿರಿಯಾಲ‌್ ಗ್ರಾಮದ ಮಂಜುನಾಥ ಗೌಡರ (30) ಕೊಲೆಯಾದವ. ಕಳೆದ ವಾರ ಸ್ನೇಹಿತ ದಯಾನಂದ ಗುಂಡ್ಲೂರನಿಂದ 2 ಸಾವಿರ ಸಾಲ ಪಡೆದಿದ್ದ

ಕೆಆರ್‌ಎಸ್‌ನಲ್ಲಿ ರಿವರ್ಸ್‌ ತೆಗೆಯುತ್ತಿದ್ದ ಬಸ್‌ಗೆ ಊಟ ಮಾಡುತ್ತಿದ್ದ ಮಹಿಳೆ ಬಲಿ

ಮಂಡ್ಯದ ಕೆಆರ್‌ಎಸ್ ನಲ್ಲಿ ಬಸ್ ರಿವರ್ಸ್ ತೆಗೆಯುವಾಗ ನಡೆದ ಅವಘಡದಲ್ಲಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕೆಆರ್‌ಎಸ್‌ಗೆ ಪ್ರವಾಸ ಬಂದಿದ್ದ ಕೇರಳದ ಮಹಿಳೆ ಕೌಸಲ್ಯಾ ಪಾರ್ಕಿಂಗ್‌ ಬಳಿ ಊಟ ಮಾಡುತ್ತ ಕುಳಿತಿದ್ದಾಗ ಈ ದುರಂತ ಸಂಭವಿಸಿದ್ದು, ಮತ್ತೊಬ್ಬರು ಕೇರಳದ ಮಹಿಳೆ ಗಾಯಗೊಂಡಿದ್ದಾರೆ. ಕೆಆರ್‌ಎಸ್

ಮದುವೆ ಭರವಸೆಯಿತ್ತು ರೇಪ್‌ ಮಾಡಿ ವಂಚಿಸಿದ ಡಿಜೆ ಹಳ್ಳಿ ಇನ್ಸ್‌ಪೆಕ್ಟರ್‌ ಸಸ್ಪೆಂಡ್‌

ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ವಿರುದ್ಧ ಮದುವೆಯ ಭರವಸೆಯಿತ್ತು ರೇಪ್‌ ಮಾಡಿ ವಂಚಿಸಿರುವುದಾಗಿ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಇನ್ಸ್‌ಪೆಕ್ಟರ್‌ ಸುನಿಲ್ ಮತ್ತು ಅವರೊಂದಿಗೆ ಗುರುತಿಸಿಕೊಂಡ ಮತ್ತೊಬ್ಬ ಎಎಸ್‌ಐಯನ್ನು ತಕ್ಷಣವೇ ಅಮಾನತುಗೊಳಿಸ

ಮಾಲೂರು ಬಾರ್‌ನಲ್ಲಿ ಮಿಕ್ಸ್‌ಚರ್ ಕೊಡಲಿಲ್ಲವೆಂದು ಕ್ಯಾಷಿಯರ್‌ನ ಕೊಲೆ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದ ಬಾರ್‌ನಲ್ಲಿ ರಾತ್ರಿ ಮದ್ಯ ಸೇವನೆಗೆ ಹೋದ ವ್ಯಕ್ತಿ ಸೈಡ್ಸ್ ನೀಡುವುದಕ್ಕೆ ಬಾರ್ ಕ್ಯಾಷಿಯರ್ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದು, ಕೆಲಸ ಮುಗಿಸಿಕೊಂಡು ಮನೆಗೆ ಹೋದ ಕ್ಯಾಷಿಯರ್‌ ಮನೆಯೊಳಗೆ ಹೋಗಬೇಕು ಎನ್ನುವಷ್ಟರಲ್ಲಿ ಆತನ ಹೆಂಡತಿ-ಮಕ್ಕಳ ಕಣ್ಣೆದುರೇ ಚಾಕು

ಮೈಸೂರಿನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಿಸಿದ ಸೋದರರು ಜಲ ಸಮಾಧಿ

ಮೈಸೂರಿನ ವರುಣಾ ನಾಲೆ ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಸಹೋದರರು ಬಾಲಕನನ್ನು ಬದುಕಿಸಿ ತಾವೇ ಜಲಸಮಾಧಿ ಆಗಿರುವ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ಮುಳುಗುತ್ತಿರುವುದನ್ನು ನೋಡಿದ ನಾಲೆಯ ಮೇಲ್ಗಡೆ ನಡೆದುಕೊಂಡು ಬರುತ್ತಿದ್ದ ಸಹೋದರರು