ಅಪರಾಧ
ಕ್ಷುಲ್ಲಕ ಜಗಳ: ಬ್ರಹ್ಮಾವರದಲ್ಲಿ ತಂದೆ,ತಾಯಿಯ ಹತ್ಯೆಗೈದ ಮಗ
ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಮಗನೊಬ್ಬ ತಂದೆ–ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಉಡುಪಿಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಹತ್ಯೆಗೀಡಾದವರು. ಮಗ ಶಾಹಿದ್ ಅಲಿ (31) ಕೊಲೆ ಆರೋಪಿಯಾಗಿದ್ದು, ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೆಹಬೂಬ್ ಅಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಶಾಹಿದ್ ಅಲಿ ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಭಾನುವಾರ
ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆ ವೆಂಟಿಲೇಟರ್ ಸ್ಫೋಟ: ಬೆಂಕಿಗೆ ಮೂರು ಶಿಶುಗಳು ಬಲಿ
ಮಹಾರಾಷ್ಟ್ರದ ಅಮರಾವತಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾ ರಬೆಳಗಿನ ಜಾವ ವೆಂಟಿಲೇಟರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಮೂರು ನವಜಾತ ಶಿಶುಗಳು ಮೃತಪಟ್ಟಿವೆ. ಚಿಕಿತ್ಸೆ ಪಡೆಯುತ್ತಿದ್ದ ಹಲವು ಶಿಶುಗಳನ್ನು ಸ್ಥಳಾಂತರಿಸಲಾಗಿದೆ. ಬೆಳಗಿನ ಜಾವ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ವೆಂಟಿಲೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. 39
ಕೋಳಿ ಫಾರ್ಮ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ: ಏಳು ಆರೋಪಿಗಳು ಅರೆಸ್ಟ್
ಕೊಲ್ಲಾಪುರದ ಚಂದಗಡ ತಾಲೂಕಿನಲ್ಲಿ ಕೋಳಿ ಫಾರ್ಮ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಜಾಲವನ್ನು ಬಯಲಿಗೆಳೆದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಇಪ್ಪತ್ತು ಕಿ.ಮೀ ದೂರದ ಚಂದಗಡದ ರಾಜಗೋಳಿ ಗ್ರಾಮದಲ್ಲಿ ಆರೋಪಿಗಳು ಕೋಳಿ ಫಾರಂ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದರು.
ಹಣಿಗೇರಿ ವನ್ಯಜೀವಿ ವಲಯದಲ್ಲಿ ಬೇಟೆಗಾರರ ಬಂಧನ
ಶಿವಮೊಗ್ಗ ತಾಲೂಕಿನ ಹಣಿಗೇರಿ ವನ್ಯಜೀವಿ ವಲಯದ ಸಿರಿಗೇರಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೇಟೆಯಾಡಲು ಸಂಚು ರೂಪಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಚೋರಡಿ ವಡೆಯರಕೊಪ್ಪ ಗ್ರಾಮದ ಲೋಕೇಶ್ ಎಸ್‌ಡಿ, ಸಚಿನ್ ಎಂ, ಅರುಣ್ ಕುಮಾರ್ ಹಾಗೂ ಸುಬ್ಬರಾಯ ಬಂಧಿತ ಆರೋಪಿಗಳು.
ಗೋಣಿಕೊಪ್ಪದಲ್ಲಿ ಕಾಡಾನೆ ದಾಳಿಗೆ ಪ್ರವಾಸಿ ಬಲಿ
ಕಾಡನೆ ದಾಳಿಗೆ ಪ್ರವಾಸಿಗರೊಬ್ಬರು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ತೆರಲು ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಆರ್ ಆರ್ ನಗರದ ಮುರಳಿಕೃಷ್ಣ (40) ಎಂದು ಆನೆ ದಾಳಿಗೆ ಬಲಿಯಾದವರು ಗುರುತಿಸಲಾಗಿದೆ. ಅವರು ಸ್ಥಳೀಯ ಹೋಂಸ್ಟೇಯೊಂದರಲ್ಲಿ ತಂಗಿದ್ದು, ವಿಹಾರಕ್ಕಾಗಿ ತೆರಳಿದ್ದ ವೇಳೆ ಈ
200 ರೂ.ಗಾಗಿ ಮಂಗಳಮುಖಿಯ ಕೊಲೆಗೈದು ಪರಾರಿಯಾಗಿದ್ದವ ಅರೆಸ್ಟ್
ಬೆಂಗಳೂರಿನ ಮೆಜೆಸ್ಟಿಕ್ ಬಿಎಂಟಿಸಿ ಬಸ್‌ನಿಲ್ದಾಣದಲ್ಲಿ ತಡರಾತ್ರಿ ಮಂಗಳಮುಖಿಯೊಬ್ಬರನ್ನು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ರಾಮಮೂರ್ತಿ ನಗರದ ಗೌತಮ್ (29) ಮಂಗಳಮುಖಿಯನ್ನು ೨೦೦ ರೂಪಾಯಿಗಾಗಿ ಕೊಲೆ ಮಾಡಿದ ಕಿರಾತಕ ಎಂದು ಗುರುತಿಸಲಾಗಿದೆ. ರಾತ್ರಿ ದರೋಡೆ ಮಾಡುವುದನ್ನೇ ಆತ ಉದ್ಯೋಗವನ್ನಾಗಿಸಿಕೊಂಡ
ಮಡಿಕೇರಿಯಲ್ಲಿ ಲಾರಿ ಡಿಕ್ಕಿ ಹೊಡೆದು ಟ್ಯಾಕ್ಸಿ ಚಾಲಕ ಸಾವು
ಮಡಿಕೇರಿ ನಗರದ ತಿಮ್ಮಯ್ಯ ಸರ್ಕಲ್ ಬಳಿ ಗ್ಯಾಸ್ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಟ್ಯಾಕ್ಸಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಗಣಪತಿ ಬೀದಿ ನಿವಾಸಿ ಸಾಹಿಲ್ (24) ಎಂದು ಗುರುತಿಸಲಾಗಿದೆ. ಮಂಗಳೂರು ರಸ್ತೆಯಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ತಿಮ್ಮಯ್ಯ
ಔಷಧ ಘಟಕ ಸ್ಫೋಟಕ್ಕೆ ಇಬ್ಬರು ಬಲಿ, ಉಕ್ಕು ಕಾರ್ಖಾನೆ ಸ್ಫೋಟದಲ್ಲಿ ಮೂವರ ಸಾವು
ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿರುವ ಉಕ್ಕು ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಮೂವರು ಇಂಜಿನಿಯರ್‌ಗಳು ಅಸು ನೀಗಿದ್ದಾರೆ. ಔಷಧ ತಯಾರಿಕಾ ಘಟಕದಲ್ಲಿ ಸ್ಫೋಟಕ್ಕೆ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದರೆ,
ಹೊಸ ಮೊಬೈಲ್‌ಗಾಗಿ ಜಗಳ: ಪ್ರಪಾತಕ್ಕೆ ಜಿಗಿದ ಮಗನ ರಕ್ಷಿಸಲು ಹೋದ ತಂದೆಯೂ ಸಾವು, ಪ್ರತ್ಯಕ್ಷದರ್ಶಿ ತಾಯಿ ಆತ್ಮಹತ್ಯೆ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಾಥೇರಾನ್ ಬೆಟ್ಟದಿಂದ ಯುವಕನೊಬ್ಬ ಪ್ರಪಾತಕ್ಕೆ ಹಾರಿದ್ದು, ರಕ್ಷಿಸಲು ಹೋದ ತಂದೆಯೂ ಬಿದ್ದು ಮೃತಪಟ್ಟರೆ, ಇದನ್ನು ಕಣ್ಣಾರೆ ಕಂಡ ತಾಯಿ ಕೂಡ ಅದೇ ಪ್ರಪಾತಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ೧೯ ವರ್ಷದ ಯುವಕ ಕುನಾಲ್ ಎಂಬಾತ ಹೊಸ ಮೊಬೈಲ್
ಪಾಕ್ ಜೊತೆ ಸಂಪರ್ಕ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿಯ ಬಂಧನ
ಪಾಕಿಸ್ತಾನದವರ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ ( 28 ) ಬಂಧಿತ ಆರೋಪಿ. ಕೌಂಟರ್ ಇಂಟಲಿಜೆನ್ಸ್ ಸೆಲ್ ಮತ್ತು ಸೆಂಟ್ರಲ್ ಐಬಿ ಅಧಿಕಾರಿಗಳ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಿದ್ದಾರೆ.




