ಅಪರಾಧ
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ
ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಗುರುವಾರ ಬೆಳಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅವರ ನಾಪತ್ತೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಜ್ಞಾನೇಂದ್ರ ಕುಮಾರ್ ದೆಹಲಿಗೆ ಹೋಗಲೆಂದು ವಿಮಾನ ಟಿಕೆಟ್ ಬುಕ್ ಮಾಡಿದ್ದರು. ಈ ಬಗ್ಗೆ ಅವರು ಕುಟುಂಬದವರಿಗೆ ಮತ್ತು ಆತ್ಮೀಯರಿಗೆ ಮಾಹಿತಿ ನೀಡಿದ್ದರು. ಆದರೆ ಅವರು ವಿಮಾನ ಹತ್ತಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ವಿಮಾನ
ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ಹಂಪಿಯಲ್ಲಿ ನದಿಪಾಲು
ವಿಜಯನಗರದ ಹೊಸಕೋಟೆ ತಾಲೂಕಿನಲ್ಲಿರುವ ಹಂಪಿ ಪ್ರವಾಸಕ್ಕೆ ಬಂದಿದ್ದ ತಾಯಿ ಮತ್ತು ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದಾರೆ. ಆಂಧ್ರ ಪ್ರದ್ರೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದಿಂದ ಸಂಬಂಧಿಕರೊಂದಿಗೆ ಬಂದಿದ್ದ ಯಾಸ್ಮೀನ್(13) ಹಾಗೂ ತಾಯಿ ಶಾಹೀನ್(38) ಹಂಪಿ ಬಳಿಯ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾದವರು. ಅಡುಗೆ
ಸತ್ತಿದ್ದ ಚಿರತೆಯನ್ನು ಸುಟ್ಟ ವೀಡಿಯೊ ವೈರಲ್: ಮೂವರ ಬಂಧನ
ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ ಉರುಳಿಗೆ ಸಿಲುಕಿ ಮೃತಪಟ್ಟಿದ್ದ ಚಿರತೆಯನ್ನು ಗ್ರಾಮಸ್ಥರು ಸುಟ್ಟು ಹಾಕಿರುವ ಪ್ರಕರಣ ಸಂಬಂಧ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಚಿರತೆಯನ್ನು ಸುಟ್ಟ ವೀಡಿಯೊ ವೈರಲ್ ಆದ ಬಳಿಕ ಅರಣ್ಯಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಚಿರತೆ ಸತ್ತಿರುವುದನ್ನು ಅರಣ್ಯ
ಪ್ರಜ್ವಲ್ ರೇವಣ್ಣ ವಿರುದ್ಧ ಸಾಕ್ಷಿಗೆ ಬೆದರಿಕೆ ಆರೋಪ
ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ದಾಖಲಿಸಿದ ಬಳಿಕ ಬೆದರಿಕೆ ಕರೆಗಳು ಬಂದಿರುವುದಾಗಿ ಪ್ರಮುಖ ಸಾಕ್ಷಿಯೊಬ್ಬರು ವಿಚಾರಣೆ ವೇಳೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ತನ್ನ ಮತ್ತು ತನ್ನ ಮಗನ ಸುರಕ್ಷತೆ
ಹನೂರು ಎನ್‌ಕೌಂಟರ್: ಬಲಿಯಾದವರು ಬೇಟೆಗಾರರು ಎಂದು ಸಾಕ್ಷಿ ನೀಡಿದ ಅರಣ್ಯ ಇಲಾಖೆ
ಹನೂರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಎನ್‌ಕೌಂಟರ್‌ಗೆ ಬಲಿಯಾಗಿರುವ ಪ್ರಕರಣದ ತನಿಖೆ ಮುಂದುವರಿದಿದ್ದು, ಎನ್‌ಕೌಂಟರ್‌ನಲ್ಲಿ ಸತ್ತಿರುವ ಮೂವರು ಬೇಟೆಗೆ ಹೋಗಿದ್ದವರು, ದನ ಮೇಯಿಸಲು ಹೋಗಿದ್ದವರು ಅಲ್ಲ ಎಂದು ಇಲಾಖೆ ಸಾಕ್ಷಿ ಸಮೇತ ಹೇಳಿದೆ. ಸ್ಥಳದಲ್ಲಿ ಸಿಕ್ಕ ಬ್ಯಾಗ್, ಮಾಂಸ, ಅಡುಗೆ
ಬೆಂಗಳೂರಿನಲ್ಲಿ ಕಾರೊಳಗೆ ಒಂಬತ್ತು ಕೋಟಿ ಅಕ್ರಮ ನಗದು ಪತ್ತೆ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಕಾರು ತಡೆದು ತಪಾಸಣೆ ನಡೆಸಿದ ಪೊಲೀಸರು ಒಂಬತ್ತು ಕೋಟಿ ರೂಪಾಯಿ ಅಕ್ರಮ ನಗದು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಆದಾಯ ಇಲಾಖೆ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಎಲೆಕ್ಟ್ರಾನಿಕ್ ಸಿಟಿ
ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಹಿರಿಯೂರಿನಲ್ಲಿ ಉರುಳಿ ಇಬ್ಬರ ಸಾವು
ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಿರಿಯೂರಿನ ಐಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿಗೆ ಉರುಳಿ, ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದೆ. ಒಬ್ಬ ಪ್ರಯಾಣಿಕನ
ಬಿಡದಿ ನಕಲಿ ಔಷಧಿ ಜಾಲಕ್ಕೆ ಐದು ರಾಜ್ಯಗಳ ಲಿಂಕ್
ಬೆಂಗಳೂರಿನ ಬಿಡದಿಯಲ್ಲಿ ಪತ್ತೆಯಾಗಿರುವ ನಕಲಿ ಔಷಧಿ ಪೂರೈಕೆ ಜಾಲದ ಆಳ, ಅಗಲ ಜಾಲಾಡುತ್ತಿರುವ ತನಿಖಾ ತಂಡವು ಈ ಹಗರಣದಲ್ಲಿ ಐದು ರಾಜ್ಯಗಳ ಲಿಂಕ್ ಇರುವುದನ್ನು ಪತ್ತೆ ಹಚ್ಚಿದೆ. ಹಿಮಾಚಲ ಪ್ರದೇಶ, ತೆಲಂಗಾಣ, ದೆಹಲಿ, ಚೆನ್ನೈ, ಆಂಧ್ರಪ್ರದೇಶ ರಾಜ್ಯಗಳೊಂದಿಗೆ ಈ ನಕಲಿ ಔಷಧಿ
ಹುಚ್ಚು ಪ್ರೇಮಿಯ ಕಾಟಕ್ಕೆ ಬೇಸತ್ತ ವಿವಾಹಿತೆ ಆತ್ಮಹತ್ಯೆ
ಹುಚ್ಚು ಪ್ರೇಮಿಯ ಕಾಟಕ್ಕೆ ಬೇಸತ್ತ ವಿವಾಹಿತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಇಂದಿರಾನಗರದ ಲಕ್ಷ್ಮೀಪುರಂನಲ್ಲಿ ನಡೆದಿದೆ. ಕವಿತಾ (21) ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಹಳೆಯ ಪ್ರೇಮಿ ಕಿರಣ್ ಎಂಬಾತನನ್ನು ಪೊಲೀಸರು
ಪತಿ ಮನೆಯವರ ಕಿರುಕುಳ: ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಮಗು ಕೊಂದು ಆತ್ಮಹತ್ಯೆ
ಪತಿ ಮನೆಯವರು ಕಿರುಕುಳ ನೀಡಿ, ಮನೆಯಿಂದ ಹೊರ ಹಾಕಿದ್ದಕ್ಕೆ ನೊಂದ ಮಹಿಳೆ ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಆಲೂರು ಹೌಸಿಂಗ್ ಬೋರ್ಡ್‌ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಗಳು ಮತ್ತು ಮಗುವಿನ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ. ಮಗು ಆರ್ಯನ್




