ಅಪರಾಧ
ಮೈಸೂರಿನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಿಸಿದ ಸೋದರರು ಜಲ ಸಮಾಧಿ
ಮೈಸೂರಿನ ವರುಣಾ ನಾಲೆ ನೀರಿನಲ್ಲಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಸಹೋದರರು ಬಾಲಕನನ್ನು ಬದುಕಿಸಿ ತಾವೇ ಜಲಸಮಾಧಿ ಆಗಿರುವ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ನಾಲೆಯಲ್ಲಿ ಈಜಲು ಹೋಗಿದ್ದ ಬಾಲಕ ಮುಳುಗುತ್ತಿರುವುದನ್ನು ನೋಡಿದ ನಾಲೆಯ ಮೇಲ್ಗಡೆ ನಡೆದುಕೊಂಡು ಬರುತ್ತಿದ್ದ ಸಹೋದರರು ಆತನ ರಕ್ಷಣೆಗೆ ನಾಲೆಗೆ ಜಿಗಿದಿದ್ದಾರೆ.ಮುಳುಗುತ್ತಿದ್ದ ಬಾಲಕನನ್ನು ನೀರಿನಿಂದ ಮೇಲೆತ್ತಿ ರಕ್ಷಿಸಿದ್ದಾರೆ, ಸಹೋದರರು ಸುಸ್ತಾಗಿ ನೀರಿನಿಂದ ಮೇಲೆ ಬರಲು ಆಗದೆ ಜಲಸಮಾಧಿ ಆಗಿದ್ದಾರೆ. ಬಡಗಲಹುಂಡಿ ಗ್ರಾಮದ ರಮೇಶ್ ಪುತ್ರ
ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಹಿಳೆ ಬಿಎಂಟಿಸಿ ಬಸ್‌ಗೆ ಬಲಿ
ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಹಿಳೆ ಬೆಂಗಳೂರಿನ ವಿಜಯನಗರ ಸಮೀಪದ ಹಂಪಿನಗರದಲ್ಲಿ ಬಿಎಂಟಿಸಿ ಬಸ್‌ಗೆ ಬಲಿಯಾಗಿರುವ ಘಟನೆ ನಡೆದಿದೆ. ಯಲಹಂಕದಿಂದ ಹಂಪಿನಗರದತ್ತ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ಹಂಪಿನಗರ ಬಸ್ ನಿಲ್ದಾಣದೊಳಗೆ ಪ್ರವೇಶಿಸುತ್ತಿದ್ದ ವೇಳೆ ಡಿಕ್ಕಿ ಹೊಡೆದು 58 ವರ್ಷದ ಮಹಿಳೆ ಮಾಲಾ ಅಸು ನೀಗಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಆರೋಪಿ ಪ್ರದೋಶ್‌ಗೆ ಮಧ್ಯಂತರ ಜಾಮೀನು
ರೇಣುಕಾ ಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಶ್‌ಗೆ 20 ದಿನಗಳ ಮಧ್ಯಂತರ ಜಾಮೀನು ಮಂಜೂರಾಗಿದೆ. ಆರೋಪಿ ಪ್ರದೋಶ್ ತಂದೆ ಸುಬ್ಬಾರಾವ್ ಇತ್ತೀಚೆಗೆ ನಿಧನರಾಗಿದ್ದು, ಅವರ ಉತ್ತರಾದಿ ಕ್ರಿಯೆಗಳಿಗಾಗಿ ಜಾಮೀನು ನೀಡಬೇಕೆಂದು ಬೆಂಗಳೂರಿನ 57 ಸಿಸಿಹೆಚ್ ಕೋರ್ಟ್ಗೆ ಅರ್ಜಿ ಹಾಕಲಾಗಿತ್ತು. ಪರಿಶೀಲಿಸಿದ
ಮೂಡಿಗೆರೆ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಯುವತಿ ಸಾವು
ಬೆಂಗಳೂರಿನಿಂದ ಸ್ನೇಹಿತೆಯ ಮದುವೆ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ರಂಜಿತಾ (27) ಮೃತ ಯುವತಿ, ಈಕೆ ಬೇಲೂರು ತಾಲೂಕಿನ ದೇವಲಾಪುರ ಗ್ರಾಮದ ನಿವಾಸಿ. ಶುಕ್ರವಾರ ಈ
ಬಾಗಲಕೋಟೆ ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು
ಬಾಗಲಕೋಟೆಯ ನವನಗರದ 49ನೇ ಸೆಕ್ಟರ್‌ನಲ್ಲಿ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಬದಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಕೆಲವು ದಿನಗಳಿಂದ ನೆಲಕ್ಕೆ ಬಿದ್ದುಕೊಂಡಿದ್ದ ವಿದ್ಯುತ್ ತಂತಿ ತುಳಿದು ಈ ಸಾವು ಸಂಭವಿಸಿದೆ.
ಬೆಂಗಳೂರಿನಲ್ಲಿ ಮಹಿಳೆಯ ಕೊಂದು ಶವ ಆಟೋದಲ್ಲಿಟ್ಟು ಪ್ರಿಯಕರ ಪರಾರಿ
ಬೆಂಗಳೂರಿನ ತಿಲಕ್ನಗರ ಮುಖ್ಯರಸ್ತೆಯಲ್ಲಿ ನಾಲ್ಕು ಮಕ್ಕಳ ತಾಯಿಯನ್ನು ಹತ್ಯೆಗೈದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ ಆಗಿದ್ದಾನೆ. ಸಲ್ಮಾ(35) ಹತ್ಯೆಯಾದ ಮಹಿಳೆ, ಪ್ರಿಯಕರ ಸುಬ್ಬುಮಣಿ ಕೊಲೆ ಆರೋಪಿ. ಆಟೋದಲ್ಲಿ ಮೃತದೇಹ ಇರುವುದನ್ನು ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೇಸ್ ದಾಖಲಿಸಿಕೊಂಡು ತಿಲಕ್ನಗರ
ವೈದ್ಯೆ ಆತ್ಮಹತ್ಯೆ ಪ್ರಕರಣ: ಅತ್ಯಾಚಾರಿ ಆರೋಪಿ ಪಿಎಸ್‌ಐ ಪೊಲೀಸ್‌ಗೆ ಶರಣು
ಮಹಾರಾಷ್ಟ್ರದ ಸತಾರದಲ್ಲಿ ನಡೆದಿದ್ದ ವೈದ್ಯೆಯ ಆತ್ಮಹತ್ಯೆ ಪ್ರಕರಣದ ಆರೋಪಿ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದ್ನೆ ಫಾಲ್ಟನ್ ಗ್ರಾಮೀಣ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಮತ್ತೊಬ್ಬ ಆರೋಪಿಯಾದ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್‌ನನ್ನು ಪುಣೆಯಲ್ಲಿ ಬಂಧಿಸಲಾಗಿತ್ತು. ವೈದ್ಯೆಗೆ ಮರಣೋತ್ತರ ಪರೀಕ್ಷೆಯ ವರದಿಗಳನ್ನು ಬದಲಾಯಿಸುವಂತೆ ರಾಜಕಾರಣಿಗಳು
ಕರ್ನೂಲ್ ಬಸ್ ದುರಂತ: ಉನ್ನತ ಮಟ್ಟದ ತನಿಖೆಗೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ ಎಂದ ಡಿಕೆ ಶಿವಕುಮಾರ್
“ಕರ್ನೂಲ್ ಬಸ್ ದುರಂತದ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಕರ್ನೂಲ್ ನಲ್ಲಿ ಸಂಭವಿಸಿರುವ ಬಸ್ ದುರಂತದ ಬಗ್ಗೆ ಕೇಳಿದಾಗ,
ಬಿಎಸ್ಸಿ ನರ್ಸಿಂಗ್ ಮಾಡಿ ಬನ್ನೂರು ಹೈವೇ ಬಳಿ ಭ್ರೂಣ ಲಿಂಗ ಪತ್ತೆ ದಂಧೆ ಆಸ್ಪತ್ರೆ ತೆರೆದಿದ್ದ ಶ್ಯಾಮಲಾ
ತಿ.ನರಸೀಪುರ ತಾಲೂಕಿನ ಬನ್ನೂರು ಹೈವೇ ಬಳಿಯ ಭ್ರೂಣ ಲಿಂಗ ಪರೀಕ್ಷೆ ಮತ್ತು ಹತ್ಯೆ ಕೇಂದ್ರ ಪತ್ತೆ ಪ್ರಕರಣದ ಮುಖ್ಯ ರೂವಾರಿ ಶ್ಯಾಮಲಾ ಬಿಎಸ್ಸಿ ನರ್ಸಿಂಗ್ ಓದು ಮುಗಿಸಿದ ಕೂಡಲೇ 15 ಬೆಡ್‌ಗಳ ಆಸ್ಪತ್ರೆ ಆರಂಭಿಸಿ ಅಲ್ಲಿ ಭ್ರೂಣ ಪರೀಕ್ಷೆ ಮತ್ತು ಹತ್ಯೆ
ಮಾದನಾಯಕನಹಳ್ಳಿ ಮನೆಗೆ ನುಗ್ಗಿ ಗಂಡಸರ ಕಟ್ಟಿ ಹಾಕಿ ಮಹಿಳೆಯ ರೇಪ್, ಹಣ, ಮೊಬೈಲ್ ದರೋಡೆ
ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯ ಗಂಗೊಂಡನಹಳ್ಳಿಯ ಮನೆಯೊಂದಕ್ಕೆ ನುಗ್ಗಿದ ಆರು ದುಷ್ಕರ್ಮಿಗಳು ಅಲ್ಲಿದ್ದ ಗಂಡಸರನ್ನು ಕಟ್ಟಿ ಹಾಕಿ ಥಳಿಸಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರಗೈದು ಹಣ, ಮೊಬೈಲ್ ದೋಚಿ ಪರಾರಿಯಾಗಿದ್ದಾರೆ. ಗಂಗೊಂಡನಹಳ್ಳಿಯ ಮಾರೇಗೌಡ ಎಂಬವರ ಮನೆಯಲ್ಲಿ ನೇಪಾಳ ಮೂಲದ ಸಂತ್ರಸ್ತೆ ಮತ್ತು




