Thursday, October 01, 2026
Menu

ಹೊನ್ನಾಳಿಯಲ್ಲಿ ಬಾಯ್ಲರ್‌ ಸ್ಫೋಟ: ಬಾಲಕಿ ಸಾವು

ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಉತ್ತರ ಭಾಗದಲ್ಲಿ ಮನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 11 ವರ್ಷದ ಬಾಲಕಿ ಮೃತಪಟ್ಟಿದ್ದು, ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಸ್ವೀಕೃತಿ ಮೃತ ಬಾಲಕಿ, ತೀರ್ಥಿಬಾಯಿ, ಹೂವಾ ನಾಯ್ಕ್, ಸುನೀತಾ ಬಾಯಿ ಗಂಭೀರವಾಗಿ ಗಾಯಗೊಂಡವರು. ಮನೆಯಲ್ಲಿ ಬೆಳಗ್ಗೆ ಬಾಯ್ಲರ್ ಆನ್ ಮಾಡಿದಾಗ ಸ್ಟೋಟಗೊಂಡಿದೆ. ಬಾಯ್ಲರ್ ಪಕ್ಕದಲ್ಲೇ ಇದ್ದ ಬಾಲಕಿ ಸ್ವೀಕೃತಿ ಸ್ಥಳದಲ್ಲೇ ಅಸು ನೀಗಿದ್ದಾಳೆ. ಗಂಭೀರವಾಗಿ ಗಾಯಗಳಾಗಿರುವ ಮೂವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ

ಬೆಂಗಳೂರು ಪೊಲೀಸರಿಂದ 23 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು ಸಿಟಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 23 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ. ಸಿಟಿ ಪೊಲೀಸರು  ಮತ್ತು ಸಿಸಿಬಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸೇರಿ ಒಟ್ಟು ಆರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಅವರಲ್ಲಿ

ಕುವೈತ್‌ ಡಿಫೆನ್ಸ್ ಆಸ್ಪತ್ರೆಯಲ್ಲಿ ಉದ್ಯೋಗ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ

ಕುವೈತ್‌ ಡಿಫೆನ್ಸ್ ಆಸ್ಪತ್ರೆಯಲ್ಲಿ ಉತ್ತಮ ಸಂಬಳದ ಉದ್ಯೋಗವಿದೆ ಎಂದು ನಂಬಿಸಿ 30 ಯುವಕರಿಂದ 52 ಲಕ್ಷ ರೂಪಾಯಿ  ಪಡೆದು ತಂಡವೊಂದು ವಂಚಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬಹಿರಂಗಗೊಂಡಿದೆ. ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ

ಸಹಕರಿಸಿದರೆ ಫುಲ್ ಮಾರ್ಕ್ಸ್ ಕೊಡ್ತೀನಿ: ಮನೆಗೆ ಕರೆದು ವಿದ್ಯಾರ್ಥಿನಿಗೆ ಕಿರುಕುಳವಿತ್ತ ಹೆಚ್‌ಒಡಿ ಅರೆಸ್ಟ್‌

ಬೆಂಗಳೂರಿನ ತಿಲಕ್‌ ನಗರದಲ್ಲಿ ಮನೆಗೆ ಊಟಕ್ಕೆ ಕರೆದು ಬಿಸಿಎ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿಯಾಗಿರುವ ಖಾಸಗಿ ಕಾಲೇಜಿನ ವಿಭಾಗವೊಂದರ ಮುಖ್ಯಸ್ಥನನ್ನು ಪೊಲೀಸರು ಬಂಧಿಸಿದ್ದಾರೆ. ಸಂಜೀವ್ ಕುಮಾರ್ ಮಂಡಲ್‌ ಬಂಧಿತ. ಆತ ಖಾಸಗಿ ಕಾಲೇಜಿನ ಹೆಡ್ ಆಫ್ ಡಿಪಾರ್ಟ್‌ಮೆಂಟ್.

ಕೆಆರ್‌ಪೇಟೆ ಬಾಲಕಿಯ ಸಾಮೂಹಿಕ ಅತ್ಯಾಚಾರ: ವೃದ್ಧನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ 68 ವರ್ಷದ ವ್ಯಕ್ತಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲು ಕೋರಿ ಆರೋಪಿ ಚನ್ನಪ್ಪರ್ ಅಲಿಯಾಸ್​ ರಾಜಯ್ಯ (68) ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ

ಮೈಸೂರಿನಲ್ಲಿ ಹಾಡುಹಾಗಲೇ ಆಟೋ ಚಾಲಕನ ಬರ್ಬರ ಹತ್ಯೆ

ಹಾಡುಹಾಗಲೇ ಅರಮನೆ ಸಮೀಪ ಪ್ರವಾಸಿಗರ ಎದುರಿನಲ್ಲೇ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಗುಂಪೊಂದು ಕೊಚ್ಚಿ ಕೊಲೆ ಮಾಡಿದ ಘಟನೆ ಮೈಸೂರಿನಲ್ಲಿ ಮಂಗಳವಾರ ನಡೆದಿದೆ. ಮೈಸೂರಿನ ದೊಡ್ಡಕೆರೆ ಮೈದಾನದ ಬಳಿ ದಸರಾ ವಸ್ತುಪ್ರದರ್ಶನ ರಸ್ತೆಯಲ್ಲಿ ಆಟೋ ಓಡಿಸುತ್ತಿದ್ದ ಮೈಸೂರಿನ ಕ್ಯಾತಮಾರನಹಳ್ಳಿಯ ಅಶ್ವತ್ಥಕಟ್ಟೆ ಬಳಿಯ ನಿವಾಸಿ ವೆಂಕಟೇಶ್

ರಿಕವರಿ ಚಿನ್ನ ವಾರಸುದಾರರಿಗೆ ನೀಡದ ಪೊಲೀಸ್‌ ವಿರುದ್ಧ ದೂರು

ಕಳ್ಳತನ ಪ್ರಕರಣಗಳಲ್ಲಿ ಚಿನ್ನ ರಿಕವರಿ ಮಾಡಿರುವ ಪೊಲೀಸರು ಆ ಚಿನ್ನವನ್ನು ವಾರಸುದಾರರಿಗೆ ಹಿಂತಿರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ವಿರುದ್ಧ ಈ ಸಂಬಂಧ ದೂರು ದಾಖಲಾಗಿದೆ. ಕೇಂದ್ರ ವಲಯ ಐಜಿ ಲಾಬೂರಾಮ್​ ಅವರಿಗೆ ವಕೀಲ

ಬೆಳಗಾವಿಯಲ್ಲಿ ಕುದಿಯುತ್ತಿದ್ದ ಅಡುಗೆ ಎಣ್ಣೆ ಸುರಿದು ಪತಿಯ ಹತ್ಯೆಗೆ ಯತ್ನ

ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ರಾಮನಗರದಲ್ಲಿ ಮಹಿಳೆಯೊಬ್ಬರು ಕುದಿಯುತ್ತಿದ್ದ ಅಡುಗೆ ಎಣ್ಣೆ ಸುರಿದು ಪತಿಯ ಹತ್ಯೆಗೆ ವಿಫಲ ಯತ್ನ ನಡೆಸಿದ್ದಾರೆ. ವೈಶಾಲಿ ಪಾಟೀಲ್ (48) ಕಾದ ಅಡುಗೆ ಎಣ್ಣೆಯನ್ನು ಪತಿ ಸುಭಾಷ ಪಾಟೀಲ್ (55)ಗೆ ಸುರಿದಿದ್ದು, ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಂತಾಜನಕ

ನಟಿಗೆ ಲೈಂಗಿಕ ಕಿರುಕುಳ ಆರೋಪ: ನಿರ್ಮಾಪಕ ಹೇಮಂತ್‌ ಕುಮಾರ್‌ ಅರೆಸ್ಟ್‌

ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ನಿರ್ಮಾಪಕ ಹೇಮಂತ್‌ ಕುಮಾರ್‌ ಅವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್‌ ವೇಳೆ ನಿರ್ಮಾಪಕ ಹೇಮಂತ್‌ ಕುಮಾರ್‌ ಲೈಂಗಿಕ ಕಿರುಕುಳ ನೀಡಿರುವುದಾಗಿ ನಟಿಯೊಬ್ಬರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೇಮಂತ್‌ ಕುಮಾರ್‌

ಕೊಪ್ಪಳದಲ್ಲಿ ಹುಲಿಗೆಮ್ಮ ದೇಗುಲ ಪಾದಯಾತ್ರೆ: ಬಸ್‌ ಹರಿದು ಮೂವರು ಭಕ್ತರ ಸಾವು

ಕೊಪ್ಪಳ‌ ತಾಲೂಕಿನ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರಂತ ಸಂಭವಿಸಿದೆ. ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19)