ಅಪರಾಧ
ಹಾಸನದ ಮನೆಯಲ್ಲಿ ಸ್ಫೋಟದಿಂದ ಗಾಯಗೊಂಡಿದ್ದ ದಂಪತಿ ಸಾವು
ಹಾಸನದ ಹಳೇಆಲೂರು ಪಟ್ಟಣದ ಮನೆಯೊಂದರಲ್ಲಿ ನಡೆದ ನಿಗೂಢ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುದರ್ಶನ್ (32), ಕಾವ್ಯ (27) ಮೃತಪಟ್ಟ ದಂಪತಿ. ಘಟನೆಯಲ್ಲಿ ಗಾಯಗೊಂಡಿದ್ದ ದಂಪತಿಯನ್ನು ಸೋಮವಾರ ರಾತ್ರಿ ಹಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು, ಬಳಿಕ ರಾತ್ರಿಯೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ನಲ್ಲಿ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸು ನIಗಿದ್ದಾರೆ. ದಂಪತಿಯ 14 ತಿಂಗಳ ಮಗುವಿಗೆ ಈಗ ಯಾರೂ
ಗರ್ಭಪಾತಕ್ಕೆ ಒತ್ತಾಯಿಸಿದ ಗೆಳೆಯನ ಕತ್ತು ಸೀಳಿ ಕೊಲೆಗೈದ ಅಪ್ರಾಪ್ತ ವಯಸ್ಕ ಗರ್ಭಿಣಿ
ಛತ್ತೀಸ್ಗಢದ ಲಾಡ್ಜ್‌ವೊಂದರಲ್ಲಿ ಅಪ್ರಾಪ್ತ ವಯಸ್ಕ ಗರ್ಭಿಣಿಯೊಬ್ಬಳು ತನ್ನ ಗೆಳೆಯನ ಕತ್ತು ಸೀಳಿ ಹತ್ಯೆ ಮಾಡಿದ್ದಾಳೆ. ರಾಯ್‌ಪುರ ಪೊಲೀಸರು ಛತ್ತೀಸ್ಗಢ ನಗರದ ಗಂಜ್ ಪೊಲೀಸ್ ಠಾಣೆ ಪ್ರದೇಶದ ಲಾಡ್ಜ್‌ನಿಂದ ಯುವಕನ ಶವವನ್ನು ವಶಪಡಿಸಿಕೊಂಡಿದ್ದಾರೆ. ಕೊಲೆಗೈದ ಬಳಿಕ ಬಿಲಾಸ್‌ಪುರಕ್ಕೆ ಹಿಂತಿರುಗಿದ ಗರ್ಭಿಣಿ ಬಾಲಕಿ ತನ್ನ
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್
ಸೌಜನ್ಯ ಪರ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿದ್ದ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು 1
ಜೈಲು ಅಧಿಕಾರಿಗಳ ವಿರುದ್ಧ ದರ್ಶನ್ ಅರ್ಜಿ ವಿಚಾರಣೆ: ಆದೇಶ ಅ. 9ಕ್ಕೆ ಕಾಯ್ದಿರಿಸಿದ ಕೋರ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣದ ದೋಷಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಹೆಚ್ಚುವರಿ ಹಾಸಿಗೆ ದಿಂಬು ನೀಡದ ವಿಚಾರಕ್ಕೆ ಸಂಬಂಧಪಟ್ಟಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ನಡೆದಿದ್ದು, ಅಕ್ಟೋಬರ್ 9ಕ್ಕೆ ಆದೇಶ ಕಾಯ್ದಿರಿಸಲಾಗಿದೆ. ಜೈಲಿನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ
ಅಕ್ರಮ ಆಸ್ತಿ ಗಳಿಕೆ: ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರ ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಹೋಬಳಿಯ ಬಸಾಪುರ ಗ್ರಾಮದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು, ಎಫ್‌ಐಆರ್ ದಾಖಲಾದ ಬಳಿಕ
ಹಾಸನದಲ್ಲಿ ನಿಗೂಢ ಸ್ಫೋಟ: ದಂಪತಿ ಗಂಭೀರ ಗಾಯ
ಹಾಸನದ ಆಲೂರು ತಾಲೂಕಿನ ಹಳೇಆಲೂರು ಗ್ರಾಮದ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿ ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸುದರ್ಶನ್ ಆಚಾರ್ (32) ಹಾಗೂ ಕಾವ್ಯ (27) ಸ್ಫೋಟದಿಂದ ಗಾಯಗೊಂಡ ದಂಪತಿ. ಇಬ್ಬರಿಗೂ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಝೀರೋ ಟ್ರಾಫಿಕ್‍ನಲ್ಲಿ
ಬೆಂಗಳೂರಿನಲ್ಲಿ ವಾಸವಿದ್ದ ಮೂವರು ಅಕ್ರಮ ಶ್ರೀಲಂಕಾ ವಲಸಿಗರು ಅರೆಸ್ಟ್
ಶ್ರೀಲಂಕಾದಿಂದ ಬಂದ ಮೂವರು ಅಕ್ರಮ ವಲಸಿಗರನ್ನು ಬೆಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಕಿಸ್ತಾನ, ಬಾಂಗ್ಲಾದಿಂದ ಬಂದಿದ್ದ ಅಕ್ರಮ ವಲಸಿಗರನ್ನು ಕೆಲವು ತಿಂಗಳ ಹಿಂದೆ ಬಂಧಿಸಲಾಗಿತ್ತು. ಶ್ರೀಲಂಕಾ ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಲಂಕಾದಿಂದ ಅಕ್ರಮವಾಗಿ ವಲಸೆ
ಬೆಂಗಳೂರಿನಲ್ಲಿ 7.80 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಿದ ಸಿಸಿಬಿ
ಬೆಂಗಳೂರಿನಲ್ಲಿ ಸಿಸಿಬಿ ನಡೆಸಿದ ಕಾರ್ಯಾಚರಣೆಯಲ್ಲಿ 7.80 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ. ಎಂಡಿಎಂಎ ಕ್ರಿಸ್ಟಲ್ 3.8 ಕೆಜಿ, ಎಂಡಿಎಂಎ ಬ್ರೌನ್ ಹಾಗೂ ವೈಟ್ ಡ್ರಗ್ಸ್ , 42 ಗ್ರಾಂ ತೂಕದ 82 ಎಕ್ಸಟೆಸಿ ಮಾತ್ರೆಗಳು, 23 ಕೆಜಿ ಗಾಂಜಾ ಹಾಗೂ 482
ಶಿರಾದಲ್ಲಿ ರಸ್ತೆ ಅಪಘಾತ: ಮೂವರು ಬಲಿ
ತುಮಕೂರಿನ ಜಿಲ್ಲೆ ಶಿರಾ ನಗರದ ಹೊರವಲಯದ ಸಾಯಿ ಡಾಬ ಬಳಿ ಭಾನುವಾರ ರಾತ್ರಿ ಎರಡು ಬೈಕ್‌ಗಳು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ರಾಮನಗರಜಿಲ್ಲೆಯ ಕೊಳಗೊಂಡನಹಳ್ಳಿ ಗ್ರಾಮದ ಮುತ್ತುರಾಜ್ (36) ಮತ್ತು ವೆಂಕಟಧನಶೆಟ್ಟಿ (64), ಎಮ್ಮೇರಹಳ್ಳಿ ತಾಂಡದ ವಿಷ್ಣು ಎನ್. ನಾಯ್ಕ್(24) ಮೃತಪಟ್ಟವರು.
ಬೀಳಗಿಯಲ್ಲಿ ಕಾರು ಟಂಟಂ ಡಿಕ್ಕಿ: ಇಬ್ಬರ ಸಾವು
ಬಾಗಲಕೋಟೆ ಜಿಲ್ಲೆಯ ಬೀಳಗಿ ಅನಗವಾಡಿ ಬ್ರಿಡ್ಜ್ ಬಳಿ ಕಾರು ಮತ್ತು ಟಂಟಂ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹೇಶ್ ನಾಯ್ಕರ್ (27) ಮತ್ತು ಮೆಹಬೂಬ್ ಶೇಖ್ (30) ಮೃತಪಟ್ಟವರು. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಾದಗಿ ಪೊಲೀಸರು




