ಅಪರಾಧ
ನಿರ್ಮಾಣ ಹಂತದ ಸುರಂಗಕ್ಕೆ ನೀರು ನುಗ್ಗಿ ಏಳು ಕಾರ್ಮಿಕರ ಸಾವು
ಉತ್ತರಾಖಂಡದ ಚಮೋಲಿ ಜಿಲ್ಲೆಯ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗಕ್ಕೆ ನೀರು ನುಗ್ಗಿ ಏಳು ಕಾರ್ಮಿಕರು ಅಸು ನೀಗಿದ್ದಾರೆ, ದುರಂತದಲ್ಲಿ 13 ಕಾರ್ಮಿಕರು ಗಾಯಗೊಂಡಿದ್ದಾರೆ. ಅಲಕನಂದಾ ನದಿ ಮೇಲೆ ನಿರ್ಮಾಣ ಹಂತದಲ್ಲಿರುವ ವಿಷ್ಣುಗಾಡ್-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಟೇಲ್ ರೇಸ್ ಟನಲ್‌ನಲ್ಲಿ ಈ ದುರ್ಘಟನೆ ನಡೆದಿದೆ. ಹಿಂದೂಸ್ತಾನ್ ಕನ್‌ಸ್ಟ್ರಕ್ಷನ್ ಕಂಪನಿ (ಎಚ್‌ಸಿಸಿ) ನಿರ್ಮಾಣ ಕಾರ್ಯ ನಡೆಸುತ್ತಿದ್ದಾಗ ಸಂಜೆ ನೀರು ಏಕಾಏಕಿ ಸುರಂಗದೊಳಗೆ ಪ್ರವೇಶಿಸಿದೆ, ಕನಿಷ್ಠ 22 ಜ ಸಿಕ್ಕಿ ಹಾಕಿಕೊಂಡಿದ್ದರು.
ಕಾರಿಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಚಿತ್ರದುರ್ಗದ ದೊಡ್ಡಸಿದ್ದವ್ವನ ಹಳ್ಳಿ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿಯೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ದೊಡ್ಡಸಿದ್ದವ್ವನ ಹಳ್ಳಿ ಗ್ರಾಮದ ಬಳಿ ಸಂಚರಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಬಳಿಕ ಮತ್ತೊಂದು
ಧಾರವಾಡದಲ್ಲಿ ಪ್ರೇಯಸಿ ಆತ್ಮಹತ್ಯೆ ಬಳಿಕ ಪ್ರಿಯಕರ ಸುಸೈಡ್
ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದ ಬಳಿಕ ಪ್ರಿಯಕರನೂ ಆತದ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೋಟಬಾಗಿ ಗ್ರಾಮದಲ್ಲಿ ನಡೆದಿದೆ. ಪ್ರೇಯಸಿ ಮೇಘಾ ಗುಬ್ಬನ್ನವರ್(20) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪ್ರಿಯಕರ ತರುಣ್ ಸಾಗರ್ ಕುರಕುರಿ(21) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹಾಸನದಲ್ಲಿ ಸರ ಕಸಿಯಲು ಯತ್ನಿಸಿದವನಿಗೆ ಸಾರ್ವಜನಿಕರಿಂದ ಥಳಿತ
ಕುತ್ತಿಗೆಗೆ ಹಾಕಿದ್ದ ಚಿನ್ನದ ಸರವನ್ನು ಕಸಿಯಲು ಹೋಗಿ ಸಾರ್ವಜನಿಕರಿಂದ ಗೂಸಾ ತಿಂದ ಪ್ರಕರಣ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಗಗನ್ (31) ಚಿನ್ನ ಕದಿಯಲು ಬಂದು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಆರೋಪಿ. ಪಟ್ಟಣದ ಬಿ.ಎಮ್ ರಸ್ತೆಯಲ್ಲಿರುವ ಕಿಂಗ್ಸ್ ಕಂಫರ್ಟ್ ಎಂಬ ಅತಿಥಿ
ರೇಣುಕಾಸ್ವಾಮಿ ಕೊಲೆ ಕೇಸ್ ಮಾಫಿ ಸಾಕ್ಷಿ: ಆಕ್ಷೇಪಣೆ ಸಲ್ಲಿಕೆ ಅವಕಾಶವಿಲ್ಲವೆಂದ ಹೈಕೋರ್ಟ್
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಮಾಫಿ ಸಾಕ್ಷಿಯಾಗಲು ಅವಕಾಶ ಕೋರಿರುವ ಆರೋಪಿ ಪ್ರದೋಶ್ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಪ್ರಕರಣದ 14ನೇ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿರುವ ವಿಚಾರದಲ್ಲಿ ಆಕ್ಷೇಪಣೆ ಸಲ್ಲಿಸಲು
ರೀಲ್ಸ್ ನೋಡಬೇಡವೆಂದು ಬುದ್ಧಿ ಹೇಳಿದ ತಾಯಿ: ವಿದ್ಯಾರ್ಥಿನಿ ಆತ್ಮಹತ್ಯೆ
ಹೆಚ್ಚು ಮೊಬೈಲ್ ಬಳಕೆ ಮಾಡಬೇಡ, ಹೆಚ್ಚು ರೀಲ್ಸ್ ನೋಡಬೇಡ ಎಂದು ತಾಯಿ ಬೈದು ಬುದ್ಧಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ನಡೆದಿದೆ. ಕೊಟಬಾಗಿ ಗ್ರಾಮದ ಮೇಘಾ ಗುಬ್ಬಣ್ಣವರ (20) ಆತ್ಮಹತ್ಯೆ ಮಾಡಿಕೊಂಡವಳು.ಮೇಘಾ
ಮಗನಿಗೆ ಅಪಘಾತ: ಪರಸ್ಪರ ದೂಷಿಸಿಕೊಂಡು ಕಾರವಾರದಲ್ಲಿ ದಂಪತಿ ಆತ್ಮಹತ್ಯೆ
ರಸ್ತೆ ಅಪಘಾತದಿಂದ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಈ ವಿಚಾರದಲ್ಲಿ ಪರಸ್ಪರ ದೂಷಿಸಿಕೊಂಡ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರ ಹೊರವಲಯದ ಶಿರವಾಡದಲ್ಲಿ ನಡೆದಿದೆ. ವಿಜಯ ವಡ್ಡರ್ (36) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ವೆಂಕಟೇಶ್ ವಡ್ಡರ್ (38) ಆಳೇವಾಡ–ಕೋಡಿಬಾಗ್
ಪಾಕ್ ಜೊತೆ ನಿರಂತರ ಸಂಪರ್ಕ: ಕಲ್ಬುರ್ಗಿಯಲ್ಲಿ ಆರೋಪಿ ಪೊಲೀಸ್ ವಶಕ್ಕೆ
ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಭಯೋತ್ಪಾದನೆ ನಿಗ್ರಹ ದಳ ಹಾಗೂ ಕಲಬುರಗಿ ಪೊಲೀಸ್ ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ ಪಾಕ್ ಜೊತೆ ನಿರಂತರ ಸಂಪರ್ಕ ಹೊಂದಿದ್ದ ಆರೋಪಿಯನ್ನು ಕಲ್ಬುರ್ಗಿಯಲ್ಲಿ ಬಂಧಿಸಿದೆ. ಸಮೀರ್ ಬಂಧಿತ ಆರೋಪಿಯಾಗಿದ್ದಾನೆ. ಕಲ್ಬುರ್ಗಿ ನಗರದ ಸಮೀಪದ ಮಾಲಗತ್ತಿ
ಜಾಮರ್ ಇದ್ರೂ ಜೈಲಿನಲ್ಲಿ ಆಂಧ್ರದ ಸಿಮ್ ಸಕ್ರಿಯ: ಸೋಷಿಯಲ್ ಮೀಡಿಯಾ, ನಗ್ನ ಚಿತ್ರ ವೀಕ್ಷಣೆಯಲ್ಲಿ ಪ್ರಜ್ವಲ್
ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರು ಸೆಂಟ್ರಲ್ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಸಿಕೊಂಡು ಸೋಷಿಯಲ್ ಮೀಡಿಯಾ, ನಗ್ನ ಚಿತ್ರಗಳ ವೀಕ್ಷಿಸುತ್ತಾ ಆರಾಮವಾಗಿ ಕಾಲ ಕಳೆಯುತ್ತಿರುವ ವೀಡಿಯೊ ವೈರಲ್ ಆಗಿದೆ. ಜೈಲಿನಲ್ಲಿ ಜಾಮರ್ ಅಳವಡಿಸಲಾಗಿದ್ದರೂ ಆಂಧ್ರದಲ್ಲಿ ಖರೀದಿಯಾಗಿರುವ ಏರ್‌ಟೆಲ್ ಸಿಮ್ ಪ್ರಜ್ವಲ್ ಬಳಸುವ ಮೊಬೈಲ್‌ನಲ್ಲಿ
ಡೇಟಿಂಗ್ ಆ್ಯಪ್: ಪುರುಷರಿಗೆ ಬ್ಲ್ಯಾಕ್‌ಮೇಲ್ ಮಾಡಿ ಯುವತಿ ವಂಚಿಸಿದ್ದು ಏಳು ಕೋಟಿ ರೂ.
ಯುವತಿ ಡೇಟಿಂಗ್ ಆ್ಯಪ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪುರುಷರೊಂದಿಗೆ ಸ್ನೇಹ ಬೆಳೆಸಿ ಅವರೊಂದಿಗೆ ಆತ್ಮೀಯವಾಗಿರುವ ಪೋಟೊಗಳು ಹಾಗೂ ವೀಡಿಯೊಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಆರು ಕೋಟಿ ರೂ. ವಂಚಿಸಿರುವ ಪ್ರಕರಣ ಉತ್ತರಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಡೇಟಿಂಗ್




