Thursday, October 01, 2026
Menu

ಅಮೆರಿಕದಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮತ್ತು ಮಗನ ಎದುರೇ ಕರ್ನಾಟಕದ ವ್ಯಕ್ತಿಯ ಹತ್ಯೆ

ಅಮೆರಿಕದ ಡಲ್ಲಾಸ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮತ್ತು ಮಗನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯನ್ನು ಮಚ್ಚಿನಿಂದ ಹಲ್ಲೆಗೈದು ಶಿರಚ್ಛೇದ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕರ್ನಾಟಕದ ಚಂದ್ರ ನಾಗಮಲ್ಲಯ್ಯ (೩೭) ಎಂದು ಗುರುತಿಸಲಾಗಿದೆ. ಯೋರ್ಡಾನಿಸ್ ಕೋಬೋಸ್-ಮಾರ್ಟಿನೆಜ್ ಕೊಲೆಗಾರ. ಡಲ್ಲಾಸ್‌ನ ಮೋಟೆಲ್‌ವೊಂದರಲ್ಲಿ ಚಂದ್ರ ನಾಗಮಲ್ಲಯ್ಯ ಅವರು ಮುರಿದ ವಾಷಿಂಗ್‌ ಮೆಷಿನ್‌ ಬಳಸದಂತೆ ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್‌ಗೆ ಹೇಳಿದ್ದಾರೆ. ಚಂದ್ರ ನಾಗಮಲ್ಲಯ್ಯ ತಾವು ಏನು ಹೇಳುತ್ತಿದ್ದೇನೆ ಎಂಬುದನ್ನು ಭಾಷಾಂತರ ಮಾಡಿ ಹೇಳುವಂತೆ ಇನ್ನೊಬ್ಬರು

ಶಿಕಾರಿಪುರದಲ್ಲಿ ಕೆಲವೇ ದಿನಗಳಲ್ಲಿ ಮದುವೆಯಾಗಲಿದ್ದ ಜೋಡಿ ಅಪಘಾತಕ್ಕೆ ಬಲಿ

ಶಿಕಾರಿಪುರ ತಾಲೂಕಿನ ಅಂಬಾರಕೊಪ್ಪ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಕಳೆದ ತಿಂಗಳು ನಿಶ್ಚಿತಾರ್ಥ ಆಗಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದ ಜೋಡಿ ಮೃತಪಟ್ಟಿದೆ. ಬೈಕ್​​ನಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದ್ದು, ಬಸವನಗೌಡ (24) ಹಾಗೂ ರೇಖಾ (22) ಮೃತಪಟ್ಟವರು. ಈ ಜೋಡಿಗೆ ಶ್ರಾವಣ ಮಾಸದಲ್ಲಿ ನಿಶ್ಚಿತಾರ್ಥವಾಗಿತ್ತು.

ತುಮಕೂರಿನಲ್ಲಿ ನೀರಿನ ಜಗಳ: ವ್ಯಕ್ತಿ ಮೇಲೆ ವಾಹನ ಚಲಾಯಿಸಿ ಕೊಂದು ಪೊಲೀಸರಿಗೆ ಶರಣಾದ ಆರೋಪಿ

ತುಮಕೂರು ಜಿಲ್ಲೆಯ ಕೊಡಿಗೇನಹಳ್ಳಿ ಹೋಬಳಿಯ ಪೊಲೇನಳ್ಳಿಯಲ್ಲಿ ನೀರಿನ ವಿಚಾರಕ್ಕೆ ನಡೆದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ ಕಂಡಿದೆ. ಗೂಡ್ಸ್ ವಾಹನ ಚಲಾಯಿಸಿ ಆನಂದ ಎನ್ನುವ ವ್ಯಕ್ತಿಯನ್ನು ನಾಗೇಶ ಎಂಬಾತ ಕೊಲೆ ಮಾಡಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ

ಬಸ್‌ನಲ್ಲಿ ಬಾಲಕಿಗೆ ಕಿರುಕುಳ: ಕಂಡಕ್ಟರ್‌ ಡ್ರೈವರ್‌ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಬಸ್‌ ಬೆಳಗ್ಗೆ ಬೆಂಗಳೂರಿನ ಬಸವೇಶ್ವರ ನಗರಕ್ಕೆ ತಲುಪಿದಾಗ ಬಾಲಕಿಯ ತಾಯಿ ಮತ್ತು ಸೋದರ ಚಾಲಕ, ನಿರ್ವಾಹಕರನ್ನು ಕೆಳಗಿಸಿ ಬಟ್ಟೆ ಬಿಚ್ಚಿಸಿ ಥಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ

ಕೊಪ್ಪದಲ್ಲಿ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಮಗಳೂರಿನ ಕೊಪ್ಪ ತಾಲೂಕು ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ತಾಳ್‌ ಗ್ರಾಮದಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಕೊಪ್ಪ ಪಟ್ಟಣದ ಜಿಜೆಸಿ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಯಾಗಿದ್ದ. ಬೆಳಿಗ್ಗೆ

ಪ್ರಚೋದನಕಾರಿ ಭಾಷಣ: ಸಿಟಿ ರವಿ ವಿರುದ್ಧ ಪ್ರಕರಣ ದಾಖಲು

ಮದ್ದೂರಿನಲ್ಲಿ ಬುಧವಾರ ನಡೆದ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪದಡಿ ಎಂಎಲ್‌ಸಿ ಸಿಟಿ ರವಿ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ. ಸಮುದಾಯಗಳ ಮಧ್ಯೆ ದ್ವೇಷ ಉಂಟುಮಾಡುವ

ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ: ನಿರ್ದೇಶಕ ಎಸ್. ​ನಾರಾಯಣ್ ವಿರುದ್ಧ ಎಫ್‌ಐಆರ್‌

ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಚಿತ್ರ ನಿರ್ದೇಶಕ ಎಸ್‌. ನಾರಾಯಣ್‌ ಮತ್ತು ಅವರ ಮಗ ಪವನ್‌ ವಿರುದ್ಧ ಸೊಸೆ ಪವಿತ್ರಾ ದೂರು ದಾಖಲಿಸಿದ್ದಾರೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯಿಸುತ್ತಿರುವದಾಗಿ ಪವಿತ್ರಾ ಅವರು ಮಾವ ಮತ್ತು ಗಂಡನ ವಿರುದ್ಧ ಜ್ಞಾನಭಾರತಿ ಪೊಲೀಸ್

ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

ದೆಹಲಿ ಪೊಲೀಸರು, ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ ಹಾಗೂ ರಾಂಚಿ ಪೊಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡು ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಿದ್ದಾರೆ. ಬೊಕಾರೊ ಮೂಲದ ಆಶರ್ ಡ್ಯಾನಿಶ್ ಎಂಬ ಪ್ರಮುಖ ಆರೋಪಿಯನ್ನು ರಾಂಚಿಯಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ಘಟಕವು

ಬಹುಕೋಟಿ ವಂಚನೆ ಪ್ರಕರಣ: ನಟ ಧ್ರುವ ಸರ್ಜಾಗೆ ಸದ್ಯಕ್ಕೆ ರಿಲೀಫ್‌

ನಿರ್ಮಾಪಕ ರಾಘವೇಂದ್ರ ಹೆಗಡೆ ಮುಂಬೈನಲ್ಲಿ ದಾಖಲಿಸಿದ್ದ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ನ್ಯಾಯಾಲಯ ನೀಡಿರುವ ಆದೇಶದಿಂದ ನಟ ಧ್ರುವ ಸರ್ಜಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಧ್ರುವ ಸರ್ಜಾ ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಪಡೆದು ಸಿನಿಮಾ ಮಾಡಲು

ಕನ್ನಡಕ್ಕೆ ಅವಮಾನ: ವಿಚಾರಣೆಗೆ ಹಾಜರಾಗದ ಸೋನು ನಿಗಮ್‌ ವಿರುದ್ಧ ಪೊಲೀಸರು ಮತ್ತೆ ಕೋರ್ಟ್‌ಗೆ

ಗಾಯಕ ಸೋನು ನಿಗಮ್ ಅವರು ಕನ್ನಡಿಗರ ಮನವಿಯನ್ನು ಪಹಲ್ಗಾಮ್ ದಾಳಿಗೆ ಹೋಲಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದಡಿ ಆವಲಹಳ್ಳಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿಲ್ಲ. ಈ ಕಾರಣಕ್ಕೆ ಈಗ ಈಗ ಪೊಲೀಸರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ