ಅಪರಾಧ
ನಿಯಂತ್ರಣ ತಪ್ಪಿದ ಲಾರಿಗೆ ಇಬ್ಬರು ಬಲಿ
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಸೋಮವಾರ ಮುಂಜಾನೆ ಘಟನೆ ನಡೆದಿದೆ. ಲಾರಿ ಕಬ್ಬಿಣದ ಸಾಮಾನುಗಳನ್ನು ತುಂಬಿಕೊಂಡು ಸಾಗರದಿಂದ ಹೊನ್ನಾವರ ಕಡೆ ಬರುತಿತ್ತು. ಅತಿ ವೇಗದ ಚಾಲನೆಯೇ ಲಾರಿ ಪಲ್ಟಿಯಾಗಲು ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಮೃತರು ಮತ್ತು ಗಾಯಳುಗಳು ಮೂಲತಃ ಬಿಹಾರದವರು, ಗಾಯಾಳುಗಳಿಗೆ ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ
ವೈದ್ಯರ ಮೇಲಿನ ಸಿಟ್ಟಿಗೆ ಎಂಎಲ್‌ಸಿ ಹೆಸರಲ್ಲಿ ವಿಷ ಸ್ವೀಟ್ ಬಾಕ್ಸ್ ಕಳಿಸಿದ್ದ ಮಾನಸಿಕ ರೋಗಿ
ಶಿವಮೊಗ್ಗ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್ ಬಾಕ್ಸ್ಗಳನ್ನು ಕೊರಿಯರ್ ಮಾಡಿದ್ದ ಆರೋಪಿಯನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾನಸಿಕ ರೋಗಿ ಸೌಹಾರ್ದ ಪಟೇಲ್ ಬಂಧಿತ ಆರೋಪಿ. ಭದ್ರಾವತಿ ನಿವಾಸಿಯಾಗಿರುವ ಆರೋಪಿ
ಬೆಂಗಳೂರಿನಲ್ಲಿ ಪತಿ, ಪತ್ನಿ, ಮಕ್ಕಳು ಸೇರಿ ಕುಟುಂಬವೇ ಆತ್ಮಹತ್ಯೆ
ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದಾಶಿವನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ. ಪತಿ ಅನೂಪ್ ಕುಮಾರ್, ಪತ್ನಿ ರಾಖಿ, ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡವರು. ಈ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ.
ಪಿಎಫ್ಐ ಉಗ್ರರಿಗೆ ದುಬೈ ಹಣ ಹಂಚುತ್ತಿದ್ದಾತ ಎನ್‌ಐಎ ಬಲೆಗೆ
ದುಬೈನಿಂದ ಬರುತ್ತಿದ್ದ ಹಣವನ್ನು ನಿಷೇಧಿತ ಪಿಎಫ್ಐ ಉಗ್ರ ಸಂಘಟನೆಯ ಕೃತ್ಯಗಳಿಗೆ ಕರ್ನಾಟಕ ಹಾಗೂ ಕೇರಳದ ತಂಡಗಳ ಮೂಲಕ ಹಂಚುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಬಂಧಿತ.
ಅಂಗನವಾಡಿ ಚಾವಣಿ ಕುಸಿದು ಮಕ್ಕಳಿಗೆ ಗಾಯ, ಕಾರ್ಯಕರ್ತೆಗೆ ಅಮಾನತು ಶಿಕ್ಷೆ
ಕೋಲಾರದ ಡಿಕೆಹಳ್ಳಿ ಗ್ರಾಪಂ ವ್ಯಾಪ್ತಿಯ ದಾಸರಹೊಸಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡದ ಚಾವಣಿಯ ಸಿಮೆಂಟ್ ಕುಸಿದ ಪರಿಣಾಮ ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳ ತಲೆ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಂಗನವಾಡಿ ಕೇಂದ್ರದಲ್ಲಿ ಒಟ್ಟು
ಕುಡಿದ ಮತ್ತಲ್ಲಿ ತಾಯಿಯ ಕೊಂದು ಸುಸೈಡ್ ಮಾಡಿಕೊಂಡ ಮಗ
ಬೆಂಗಳೂರು ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡವ. ಚಿತ್ರದುರ್ಗ ಮೂಲದ ಚಳ್ಳಕೆರೆಯ ಈ
ಬಿಬಿಎಂಪಿ ಕಸ ಸಾಗಣೆ ಲಾರಿಗೆ ಅಕ್ಕ-ತಂಗಿ ಬಲಿ
ಬಿಬಿಎಂಪಿ ಕಸ ಸಾಗಣೆ ಲಾರಿ ಹರಿದು ಅಕ್ಕ-ತಂಗಿ ಇಬ್ಬರು ಮೃತಪಟ್ಟಿರುವ ಘಟನೆ ಥಣಿಸಂದ್ರ ಮುಖ್ಯ ರಸ್ತೆಯ ಸಾರಾಯಿಪಾಳ್ಯ ಬಳಿ ನಡೆದಿದೆ. ಗೋವಿಂದಪುರದ ನಾಜಿಯಾ ಸುಲ್ತಾನ (30), ನಾಜಿಯಾ ಇರ್ಫಾನ (32) ಮೃತರು. ಅಪಘಾತ ನಡೆಸಿದ ಲಾರಿ ಚಾಲಕ ಗಡಿಲಿಂಗನನ್ನು ಪೊಲೀಸರು ಬಂಧಿಸಿದ್ದಾರೆ.
ಇಡಿ ಅಧಿಕಾರಿಗಳೆಂದು ನಂಬಿಸಿ 30 ಲಕ್ಷ ರೂ. ದೋಚಿದ ಖದೀಮರು
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿ 30 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಉದ್ಯಮ ನಡೆಸುತ್ತಿದ್ದಾರೆ. ತಡರಾತ್ರಿ
ಲಾಂಗ್‌ನಿಂದ ಕೊಚ್ಚಿ ಜೆಡಿಎಸ್ ಮುಖಂಡನ ಕೊಲೆ
ಚಿಕ್ಕಬಳ್ಳಾಪುರದಲ್ಲಿರುವ ತಮ್ಮನಾಯಕನಹಳ್ಳಿ ಗೇಟ್ ಬಳಿ ಜೆಡಿಎಸ್ ಮುಖಂಡನನ್ನು ಲಾಂಗ್‌ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಕೊಲೆಯಾದ ವ್ಯಕ್ತಿ. ವೆಂಕಟೇಶ್ ಶುಕ್ರವಾರಟಿವಿಎಸ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ತಮ್ಮನಾಯಕನಹಳ್ಳಿ ಗೇಟ್ನಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಬೈಕ್ ಅಡ್ಡಗಟ್ಟಿ ಲಾಂಗ್‌ನಿಂದ
ಕಾರು ಚಲಾಯಿಸಿ ಅಪಘಾತಕ್ಕೆ ಬಲಿಯಾದ ಹೈಸ್ಕೂಲ್ ವಿದ್ಯಾರ್ಥಿಗಳು
ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು, ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಮಹಮ್ಮದ್ ಮುಜಾವರ್ (16),