ಅಪರಾಧ
ಚಾಲಕನ ತಪ್ಪಿಗೆ ಕ್ಷಮೆ ಕೇಳಿದ ‘ನಮ್ಮ ಯಾತ್ರಿ ಆ್ಯಪ್’
‘ನಮ್ಮ ಯಾತ್ರಿ ಆ್ಯಪ್’ ಆಟೋ ಚಾಲಕ ಪ್ರಯಾಣಿಕ ಮಹಿಳೆಯನ್ನು ನಿಗದಿತ ಜಾಗದ ಬದಲು ಬೇರೆ ಕಡೆ ಕರೆದೊಯುವಾಗ ಆಕೆ ಆಟೊದಿಂದ ಜಿಗಿದು ಅಪಾಯದಿಂದ ಪಾರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ‘ನಮ್ಮ ಯಾತ್ರಿ ಆ್ಯಪ್’ ಕ್ಷಮೆ ಯಾಚಿಸಿದೆ. ಗುರುವಾರ ರಾತ್ರಿ ಹೆಬ್ಬಾಳದ ವೀರಣ್ಣಪಾಳ್ಯ ಬಳಿ ಈ ಘಟನೆ ನಡೆದಿತ್ತು. ಪ್ರಯಾಣಿಕ ಮಹಿಳೆಯ ಪತಿ ಅಜಾರ್ ಖಾನ್ ‘ಎಕ್ಸ್’ ಖಾತೆಯಲ್ಲಿ ಘಟನೆ ಕುರಿತು ಬರೆದು ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಪಾನಮತ್ತ ಆಟೋ ಚಾಲಕ
ದೂರುದಾರೆ ಜೊತೆ ಅಸಭ್ಯವಾಗಿ ವರ್ತಿಸಿದ ಡಿವೈಎಸ್ಪಿ ಅರೆಸ್ಟ್
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪಿ, ತುಮಕೂರಿನ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿದ ಬಳಿಕ ಬಂಧಿಸಲಾಗಿದೆ. ಪ್ರಕರಣದ ವೀಡಿಯೊ ವೈರಲ್ ಆಗುತ್ತಿದ್ದಂತೆ ಆರೋಪಿ ರಾಮಚಂದ್ರ ತಲೆ
ಗೃಹಸಚಿವರ ತವರಲ್ಲಿ ಮಹಿಳೆ ಜೊತೆ ಡಿವೈಎಸ್ಪಿ ಅಸಭ್ಯ ವರ್ತನೆ
ದೂರು ನೀಡಲು ಬಂದ ಮಹಿಳೆಯ ಜೊತೆ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ತವರು ಜಿಲ್ಲೆಯ ಡಿವೈಎಸ್ಪಿ ರಾಮಚಂದ್ರಪ್ಪ ಅವರ ಅಸಭ್ಯ ವರ್ತನೆಯ ವಿಡಿಯೋ
ಟ್ಯೂಷನ್ ತಪ್ಪಿಸಲು ಕಿಡ್ನ್ಯಾಪ್ ಕಥೆ ಕಟ್ಟಿದ ಮಕ್ಕಳು
ಚಿತ್ರದುರ್ಗದ ಐಮಂಗಲ ಅಬ್ಬಿನ ಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯೂಷನ್‌ಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಕಿಡ್ನ್ಯಾಪ್ ಕಥೆ ಕಟ್ಟಿ ಪೋಷಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ಕಟ್ಟು ಕಥೆಯನ್ನು ಪೊಲೀಸರು ಬಯಲುಗೊಳಿಸಿದ್ದಾರೆ. ಟ್ಯೂಷನ್‌ಗೆ ಹೋದ ಮಕ್ಕಳು ತಡವಾಗಿ ಮನೆಗೆ ಬಂದವರು ತಾವು ಕಿಡ್ನ್ಯಾಪ್
ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಬಹಿಷ್ಕಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿ ಬರುವ ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮಾಧ್ಯಮಗಳಲ್ಲಿ ವರದಿಯಾಗಿದೆ. ನೊಂದ ಕುಟುಂಬದವರು ಜಿಲ್ಲಾಧಿಕಾರಿ, ಪೊಲೀಸರು ಹಾಗೂ ತಹಶೀಲ್ದಾರ್ಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.
ಮಾರಿ ಬಿಡುತ್ತಾರೆ ಅಂತ ಭಯದಲ್ಲಿ ತಾಯಿ, ನಾಲ್ವರು ತಂಗಿಯರ ಕೊಲೆಗೈದ ಮಗ!
ಹೊಸ ವರ್ಷದ ಸಂಭ್ರಮ ಆಚರಿಸುವ ನೆಪದಲ್ಲಿ ತಾಯಿ ಹಾಗೂ ನಾಲ್ವರು ಸೋದರಿಯರಿಗೆ ಮದ್ಯ ಪೂರೈಸಿ ನಂತರ ಭೀಕರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಲಕ್ನೋದ ಖಾಸಗಿ ಹೋಟೆಲ್ ನಲ್ಲಿ ತಾಯಿ ಹಾಗೂ ತಂಗಿಯರಿಗೆ ಮದ್ಯ, ಆಹಾರ
ಬೆಂಗಳೂರಿನಲ್ಲಿ ಕೆಎಸ್ ಡಿಎಲ್ ಅಧಿಕಾರಿ ಆತ್ಮಹತ್ಯೆ
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (KSDL) ಅಧಿಕಾರಿ ಡೆತ್ ನೋಟ್ ಕೈಯಲ್ಲಿ ಹಿಡಿದುಕೊಂಡೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಬಡಾವಣೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಶಿವಮೊಗ್ಗದ ಶಿರಾಳಕೊಪ್ಪದ
ಧಾರವಾಡದಲ್ಲಿ ನಟೋರಿಯಸ್ ಚಡ್ಡಿಗ್ಯಾಂಗ್ ದರೋಡೆಕೋರ ಮೇಲೆ ಪೊಲೀಸರಿಂದ ಫೈರಿಂಗ್!
ಮನೆಯ ಬಾಗಿಲು ಮುರಿದು ಮನೆಯಲ್ಲಿದ್ದ ಗಂಡ ಹೆಂಡತಿಯ ಕೈಕಾಲು ಕಟ್ಟಿ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ, ನಗದು ದರೋಡೆ ಮಾಡಿ ಪರಾರಿಯಾಗಿದ್ದ ನಟೋರಿಯಸ್ ಚಡ್ಡಿ ಗ್ಯಾಂಗ್ ದರೋಡೆಕೋರನ ಮೇಲೆ ಧಾರವಾಡದ ವಿದ್ಯಾಗಿರಿ ಠಾಣೆಯ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಳೆದ
ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ!
ಸಾಲಗಾರರ ಕಾಟ ತಾಳಲಾರದೇ ಪತ್ನಿ ಆತ್ಮಹತ್ಯೆ ಸುದ್ದಿ ಕೇಳಿ ಅದೇ ಬಾವಿಗೆ ಹಾರಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನಲ್ಲೂ ದಂಪತಿ ಒಂದಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಸಾಲಬಾಧೆ ತಾಳಲಾರದೇ ನಟೇಶ್ (55) ಮತ್ತು ಚಿನ್ನಮ್ಮ (45) ಆತ್ಮಹತ್ಯೆ ಮಾಡಿಕೊಂಡ ರೈತ
ಬೆಂಗಳೂರು: ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
ಗಂಡನಿಗೆ ಬುದ್ದಿ ಕಲಿಸಲು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋಡಿಗೆಹಳ್ಳಿ ಗೇಟ್ ಬಳಿ ತುಮಕೂರು ಮೂಲದ ಸುರೇಶ್ ಹಾಗೂ ಬೆಂಗಳೂರಿನ ಮತ್ತಿಕೆರೆ ಮೂಲದ ಕುಸುಮಾ ದಂಪತಿ ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು.