ಅಪರಾಧ
ತುಮಕೂರಿನಲ್ಲಿ ಲಾರಿಗೆ ಗೂಡ್ಸ್ ವಾಹನ ಡಿಕ್ಕಿ: ಇಬ್ಬರು ಬಲಿ
ತುಮಕೂರಿನ ಸೋರೆಕುಂಟೆ ಬಳಿ ಲಾರಿಗೆ ಹಿಂಬದಿಯಿಂದ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲೊ ಒಬ್ಬರನ್ನು ಷಣ್ಮುಗ (50) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆ ಕಾರ್ಯ ಮುಂದುವರಿದಿದೆ. ಬೆಂಗಳೂರಿನಿಂದ ಚಿತ್ರದುರ್ಗ ಕಡೆಗೆ ಟ್ರ್ಯಾಕ್ಟರ್‌ಗಳನ್ನು ತುಂಬಿಸಿಕೊಂಡು ಲಾರಿ ಸಂಚರಿಸುತ್ತಿತ್ತು. ಅದೇ ರಸ್ತೆಯಲ್ಲಿ ವೇಗವಾಗಿ ಬಂದ ಗೂಡ್ಸ್ ವಾಹನವು ಸೋರೆಕುಂಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯ ಹಿಂಬಾಗಕ್ಕೆ ರಭಸದಿಂದ ಡಿಕ್ಕಿ ಹೊಡೆದಿದೆ. ಗೂಡ್ಸ್ ವಾಹನ
ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಶ್ ಅರ್ಜಿಗೆ ಆಕ್ಷೇಪಣೆ ಅವಕಾಶವಿಲ್ಲ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ14 ಆರೋಪಿಯಾಗಿ ಜೈಲಿನಲ್ಲಿರುವ ಪ್ರದೋಶ್ ಮಾಫಿ ಸಾಕ್ಷಿಯಾಗಿ ಬದಲಾದ ಬಳಿಕ ಎರಡನೇ ಬಾರಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್ ಮಾಫಿ ಸಾಕ್ಷಿ ಹೇಳಿಕೆಗಳಿಗೆ ಆಕ್ಷೇಪಣೆ ಸಲ್ಲಿಸುವ ಅವಕಾಶ ಇಲ್ಲ ಎಂದು ಹೇಳಿದೆ. ವೀಡಿಯೊ ಕಾನ್ಫರೆನ್ಸ್
ಚಿನ್ನ, ನಗದು ದೋಚಿ ಮನೆ ಕೆಲಸದವರು ಪರಾರಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದ ಮನೆಯೊಂದರಲ್ಲಿ ಕೆಲಸಕ್ಕಿದ್ದ ನೇಪಾಳಿಗಳು ಚಿನ್ನ, ಬೆಳ್ಳಿ, ನಗದು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಹೊಸಕೋಟೆ ಹೊರವಲಯದ ಹೆದ್ದಾರಿ ಬದಿಯ 40 ಎಕರೆ ಪ್ರದೇಶದಲ್ಲಿರುವ ಪಾಲಮ್ ವಿಲ್ಲಾ ಬಡಾವಣೆಯಲ್ಲಿ ವಾಸವಿರುವ ರವಿ ರಾಜನ್ ಎಂಬವರ ಮನೆಯಲ್ಲಿ
ಶಾಂತಲಾ ಡ್ರಾಪ್ ಸರ್ಚ್ ಮಾಡಿದ್ದ ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾಗಿರುವ ಟೆಕ್ಕಿ
ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್ ಹೋಗಿ ನಾಪತ್ತೆಯಾಗಿರುವ ಬೆಂಗಳೂರಿನ ಕಾಡುಗೋಡಿಯ ಟೆಕ್ಕಿ, ಮಧ್ಯಪ್ರದೇಶದ ಇಂದೋರ್‌ನ ಅದ್ವೈತ್ ಉಪಾಧ್ಯಾಯ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ನಾಪತ್ತೆಯಾದ ಮೂರನೇ ದಿನವೂ ಅದ್ವೈತ್ ಹುಡುಕಾಟ ನಡೆಸಲಾಗುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ತನಿಖೆಯ ವೇಳೆ ಇದು ಪೂರ್ವನಿಯೋಜಿತ
ಐವತ್ತು ದಿನದ ಗಂಡು ಮಗುವನ್ನು ಕೊಂದ ತಾಯಿ, ಅಜ್ಜಿ, ಅಜ್ಜ, ಮಾವ ಅರೆಸ್ಟ್
ಐವತ್ತು ದಿನದ ಹಿಂದೆ ಜನಿಸಿದ್ದ ಗಂಡು ಮಗುವನ್ನು ತಾಯಿ, ಅಜ್ಜ, ಅಜ್ಜಿ , ಸೋದರಮಾವ ಸೇರಿ ಕೊಲೆ ಮಾಡಿ ಬಾವಿಗೆ ಎಸೆದಿರುವ ಘಟನೆ ಬೀದರ್‌ನ ಔರಾದ್‌ನಲ್ಲಿರುವ ವಡಗಾಂವ್ ಗ್ರಾಮದಲ್ಲಿ ನಡೆದಿದೆ. ತನ್ನ ಪತ್ನಿ ವಾಣಿಶ್ರೀ ಹೆರಿಗೆಗೆ ಎಂದು ತವರು ಮನೆಗೆ ಹೋಗಿದ್ದು,
ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಮಾರುತ್ತಿದ್ದಾತ ಬೆಳಗಾವಿಯಲ್ಲಿ ಅರೆಸ್ಟ್
ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಭೋಲು ಪ್ರಜಾಪತಿ ಎಂಬಾತ ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ತುಂಬಿಸಿ ಚಾಕ್ಲೆಟ್ ರೂಪದಲ್ಲಿ ಮಾರಾಟ ಮಾಡುತ್ತಿದ್ದ
ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳಲ್ಲಿ ಅವಧಿ ಮೀರಿದ ಮಾಂಸ, ಹಾಲು, ಕೊಳೆತ ತರಕಾರಿ, ಅನೈರ್ಮಲ್ಯ
ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ನಡೆಸಿದ ವಿಶೇಷ ತಪಾಸಣೆ ವೇಳೆ ಹಲವು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಪತ್ತೆಯಾಗಿದ್ದು, ಬೆಂಗಳೂರಿನ ಹಲವು ತ್ರಿ-ಸ್ಟಾರ್ ಮತ್ತು ಫೈವ್ ಸ್ಟಾರ್ ಹೋಟೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಮೂಡಿಗೆರೆಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಯುವಕರ ಸಾವು
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುರುಕಿರಣ್ (28), ಮೋಹನ್ (30), ಜ್ಞಾನೇಶ್ (28) ಮೃತಪಟ್ಟ ಯುವಕರು,
ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಕಾರ್ಯಾಚರಣೆ
ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗಳ ಪತ್ತೆ ಕಾರ್ಯಾಚರಣೆ ನಡೆಸಲಾಗಿದ್ದು, 30 ಸ್ಥಳಗಳಲ್ಲಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳು ಹಾಗೂ ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ
ಬಿಟೆಕ್ ವಿದ್ಯಾರ್ಥಿ ಡೆತ್‌ನೋಟ್ ಬರೆದಿಟ್ಟು ಹಾಸ್ಟೆಲ್‌ನಲ್ಲಿ ಸುಸೈಡ್
ಬೆಂಗಳೂರು ನಗರದ ಹಾಸ್ಟೆಲ್‌ವೊಂದರಲ್ಲಿ ಬಿಟೆಕ್ ವಿದ್ಯಾರ್ಥಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರದ ರಕ್ಷನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆ.6 ರಂದು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಾನು ಒಳ್ಳೆ ಮಗನಾಗಲಿಲ್ಲ ಎಂದು ಡೆತ್‌ನೋಟ್ ಬರೆದಿಟ್ಟಿದ್ದಾನೆ. ರಕ್ಷನ್ ಮೃತದೇಹವನ್ನು ಪೊಲೀಸರು ಪೋಷಕರಿಗೆ




