Thursday, November 06, 2025
Menu

ಶೂನ್ಯ ಬಡ್ಡಿ ಆಮಿಷ: ಅಡಮಾನ ಚಿನ್ನದೊಂದಿಗೆ ಕಂಪೆನಿಯವರು ಪರಾರಿ

ಬೆಂಗಳೂರಿನಲ್ಲಿ ಶೂನ್ಯ ಬಡ್ಡಿ ಆಸೆ ತೋರಿಸಿ ಗ್ರಾಹಕರಿಗೆ ಚಿನ್ನ ಅಡಮಾನ ಸಾಲ ನೀಡಿದ ನಕಲಿ ಕಂಪನಿಯು ಅಡಮಾನವಿಟ್ಟಿದ್ದ ಚಿನ್ನದ ಸಮೇತ ನಾಪತ್ತೆಯಾಗಿದೆ. ಗ್ರಾಹಕರು ಅಡಮಾನ ಇಟ್ಟಿದ್ದ ಚಿನ್ನ, ಬೆಳ್ಳಿಯೊಂದಿಗೆ ನಕಲಿ ಕಂಪನಿಯವರು ಪರಾರಿಯಾಗಿದ್ದು, ಅಪರಾಧ ಪತ್ತೆ ದಳ ವಿಭಾಗದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರಣ್ಯಪುರದ ಎಮಿರೇಟ್ ಎಂಬ ಕಂಪನಿ ಚಿನ್ನ ಅಡಮಾನ ಇಟ್ಟವರಿಗೆ 11 ತಿಂಗಳು ಬಡ್ಡಿ ಇಲ್ಲದೆ ಸಾಲ ಕೊಡುತ್ತಿತ್ತು, ಚಿನ್ನಾಭರಣದ ಮೌಲ್ಯದ 50 ರಿಂದ

ಸ್ನೇಹಿತನೊಂದಿಗಿದ್ದ ಯುವತಿಯ ಎಳೆದೊಯ್ದು ಗ್ಯಾಂಗ್‌ ರೇಪ್‌

ತಮಿಳುನಾಡಿನ ಕೊಯಮತ್ತೂರಿನಲ್ಲಿ ಬಾಯ್‌ಫ್ರೆಂಡ್ ಜೊತೆಗಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಕಾರಿನಲ್ಲಿ ಗೆಳೆಯನ ಜೊತೆ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು ಬಾಯ್‌ಫ್ರೆಂಡ್ ಮೇಲೆ ಹಲ್ಲೆ ಮಾಡಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದು ಡ್ಯಾನ್ಸರ್ ಸುಧೀಂದ್ರ ಸಾವು

ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ಕೆಟ್ಟು ನಿಂತಿದ್ದ ಕಾರನ್ನು ಪರಿಶೀಲಿಸುತ್ತಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದು ಡ್ಯಾನ್ಸರ್ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ಯಾಂಟರ್ ಚಾಲಕ ಸ್ಥಳದಲ್ಲೇ ವಾಹನ ನಿಲ್ಲಿಸಿ ಪರಾರಿಯಾಗಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಅಪಘಾತದ ಒಂದು ದಿನ

ರೇಣುಕಾಸ್ವಾಮಿ ಕೊಲೆ: ಸುಪ್ರೀಂ ಆದೇಶ ಮರುಪರಿಶೀಲನೆಗೆ ಪವಿತ್ರಾ ಗೌಡ ಅರ್ಜಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಪುನರ್ ಪರಿಶೀಲಿಸುವಂತೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ರಾಜ್ಯ ಸರ್ಕಾರದ ಪರ ವಕೀಲ ಅನಿಲ್ ನಿಶಾನಿ ಪ್ರತಿಕ್ರಿಯೆ ನೀಡಿದ್ದು, ಪವಿತ್ರ

ದಾವಣಗೆರೆಯಲ್ಲಿ ಸರ್ಕಾರಿ ನೌಕರಿ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ ಆರೋಪಿ ಅರೆಸ್ಟ್‌

ದಾವಣಗೆರೆಯಲ್ಲಿ ಜನರಿಗೆ ಸರ್ಕಾರಿ ನೌಕರಿ ಕೊಡಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಶ್ರೀನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ಶ್ರೀನಾಥ್ ರಾಜಕೀಯ ನಾಯಕನ ಸೋಗಿನಲ್ಲಿ ಕೆಲವು ವರ್ಷಗಳಿಂದ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳಿಗೆ ಮೋಸ ಮಾಡಿದ್ದಾನೆ ಎನ್ನಲಾಗಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ ಡಿ

ಆನ್ಲೈನ್ ವಂಚನೆ: 1.09 ಕೋಟಿ ರೂ. ಕಳೆದುಕೊಂಡ ಬಾಗಲಕೋಟೆ ವ್ಯಾಪಾರಿ

ಆನ್ಲೈನ್ ಹೂಡಿಕೆ ವಂಚನೆ ಜಾಲಕ್ಕೆ ಸಿಲುಕಿದ ಬಾಗಲಕೋಟೆಯ ವ್ಯಾಪಾರಿಯೊಬ್ಬರು 1.09 ಕೋಟಿ ರೂ. ಕಳೆದುಕೊಂಡಿರುವುದು ಬಹಿರಂಗಗೊಂಡಿದೆ. ಆಸ್ತಾ ಟ್ರೇಡ್ 903 ಸ್ಟ್ರಾಟಜಿ ಹಬ್ ಎಂಬ ಹೆಸರಿನ ನಕಲಿ ಆನ್ಲೈನ್ ಗ್ರೂಪ್ ಮೂಲಕ ಅಂತಾರಾಜ್ಯ ಆನ್‌ಲೈನ್ ವಂಚಕರು ವ್ಯಾಪಾರಿಗೆ ಹೂಡಿಕೆ ಮಾಡಿದರೆ ಹೆಚ್ಚಿನ

ಅನಿಲ್ ಅಂಬಾನಿಯ 3,000 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ವಿರುದ್ಧ ಹಣ ವರ್ಗಾವಣೆ ತಡೆ ಕಾಯ್ದೆಯಡಿ  ನಡೆಯುತ್ತಿರುವ ತನಿಖೆಯ ಹಿನ್ನೆಲೆಯಲ್ಲಿ ಇಡಿ 3,000 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳು ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಕಮ್ಯುನಿಕೇಶನ್, ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್

ದಿನೇಶ್ ಬೀಡಿ ಮಾಲೀಕನ ಕೊಲೆಗೈದು ಮಗ ಆತ್ಮಹತ್ಯೆ

ಮಥುರಾದ ವೃಂದಾವನ ಸಮೀಪದ ಕಾಲೊನಿಯಲ್ಲಿ ಭಾರತದ ಪ್ರಮುಖ ಬ್ರ್ಯಾಂಡ್ ದಿನೇಶ್ 555 ಬೀಡಿಯ ಮಾಲೀಕ ಹಾಗೂ ತಂದೆ ಸುರೇಶ್ ಚಂದ್ ಅವರನ್ನು ಮಗ ಕೊಲೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಡಿತದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ.

ವಿದ್ಯಾರ್ಥಿನಿ ಗರ್ಭಿಣಿಯಾಗಲು ನಾನು ಕಾರಣನಲ್ಲ: ವಾಯ್ಸ್‌ ನೋಟ್‌ ಮಾಡಿಟ್ಟು ಪಿರಿಯಾಪಟ್ಟಣದಲ್ಲಿ ಯುವಕ ಆತ್ಮಹತ್ಯೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿ ಗರ್ಭಿಣಿಯಾಗಲು ಕಾರಣನೆಂಬ ಆರೋಪ ಎದುರಿಸುತ್ತಿದ್ದ ರಾಮು ಎಂಬ 27 ವರ್ಷದ ಯುವಕ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಾಯುವ ಮೊದಲು ಆತ ವಾಯ್ಸ್ ನೋಟ್ ರೆಕಾರ್ಡ್ ಮಾಡಿಟ್ಟಿದ್ದು, ತನ್ನ ಮೇಲಿನ ಆರೋಪ ಸುಳ್ಳು.

ವೈದ್ಯೆ ಕೃತಿಕಾ ರೆಡ್ಡಿ ಕೊಲೆ: ಮಹೇಂದ್ರ ರೆಡ್ಡಿಗಿತ್ತು ಹಲವು ಯುವತಿಯರ ಸಂಪರ್ಕ

ಇತ್ತೀಚೆಗೆ ಗಂಡ ಮಹೇಂದ್ರ ರೆಡ್ಡಿಯಿಂದಲೇ ಕೊಲೆಯಾಗಿರುವ ವೈದ್ಯೆ ಕೃತಿಕಾ ರೆಡ್ಡಿ ಪ್ರಕರಣದ ವಿಚಾರಣೆಯಲ್ಲಿ ಮಾರತ್ತಹಳ್ಳಿ ಪೊಲೀಸರು ಮಹತ್ವದ ವಿಚಾರವನ್ನು ಬಯಲಿಗೆಳೆದಿದ್ದಾರೆ.  ಆರೋಪಿಗೆ ಹಲವು ಯುವತಿಯರ ಜೊತೆ ಸಂಪರ್ಕ ಇರುವುದು ಪತ್ತೆಯಾಗಿದೆ. 2023 ರಲ್ಲಿ ಮುಂಬೈ ಮೂಲದ ಯುವತಿಯ ಹಿಂದೆ ಬಿದ್ದದ್ದ ಮಹೇಂದ್ರ