ಅಪರಾಧ
ಬಲೂಚಿಸ್ತಾನದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 32 ಕಾರ್ಮಿಕರು ಬಲಿ
ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟವುಂಟಾಗಿ 32 ಕಾರ್ಮಿಕರು ಮೃತಪಟ್ಟಿದ್ದಾರೆ. ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾ ಹೊರವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಅನಿಲ ಶೇಖರಣೆಗೊಂಡಿರುವುದರಿಂದ ಸ್ಫೋಟ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಣಿಯೊಳಗೆ ಮೀಥೇನ್ ಅನಿಲ ಸ್ಫೋಟಗೊಂಡು ಆಮ್ಲಜನಕದ ಮಟ್ಟ ಶೂನ್ಯಕ್ಕೆ ಕುಸಿದಿರುವುದರಿಂದ ಕಾರ್ಮಿಕರು ಬದುಕುಳಿದಿರುವ ಸಾಧ್ಯತೆ ಬಹಳಷ್ಟು ಕಡಿಮೆ ಎಂದು ಸರ್ಕಾರಿ ಗಣಿ ಇಲಾಖೆಯ ಇನ್ಸ್ಪೆಕ್ಟರ್ ಘನಿ
ಭಿವಂಡಿಯಲ್ಲಿ ವಸತಿ ಕಟ್ಟಡ ಕುಸಿದು ಆರು ಜನ ಸಾವು, ಎಂಟು ಮಂದಿ ಅವಶೇಷಗಳಡಿ
ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಕನಿಷ್ಠ ಆರು ಜನ ಪ್ರಾಣ ಕಳೆದುಕೊಂಡಿದ್ದು, ಎಂಟು ಮಂದಿ ಅವಶೇಷಗಳ ಅಡಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಲಾಜಿ ನಗರದ ಕೊಹಿನೂರ್ ಕಟ್ಟಡದ ಒಂದು ಭಾಗ ಗುರುವಾರ ರಾತ್ರಿ ಕುಸಿದು
ಕುಂದಾಪುರದಲ್ಲಿ ಗುಂಡಿಕ್ಕಿ ವ್ಯಕ್ತಿಯ ಹತ್ಯೆ
ಕುಂದಾಪುರದ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದವರು. ಐವನ್ ರಿಚರ್ಡ್ ಕೆಲವು ವ್ಯವಹಾರ ನಡೆಸುತ್ತಿದ್ದರು. ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎಂದು
BMIC ಅತಿ ದೊಡ್ಡ ಸ್ಕ್ಯಾಮ್, ಯೋಜನೆಯಿಂದ ಸಾರ್ವಜನಿಕರಿಗೆ ಏನೂ ದಕ್ಕಿಲ್ಲ, ಪ್ರವರ್ತಕರಿಗೇ ಲಾಭ: ಹೈಕೋರ್ಟ್ ಚಾಟಿ
ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯು ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ಚಾಟಿ ಬೀಸಿದೆ. ವಂಚನೆ ಹಾಗೂ ಇತರ ಅಪರಾಧಗಳ ಆರೋಪಗಳ ಕುರಿತು ತಜ್ಞರ ವಿಶೇಷ ತಂಡದಿಂದ ಸ್ವತಂತ್ರ ತನಿಖೆ ಮತ್ತು ಯೋಜನೆಯ ಲೆಕ್ಕಪತ್ರಗಳ ಫೊರೆನ್ಸಿಕ್ ಆಡಿಟ್
ಪತ್ನಿಯ ಕೊಲೆಗೈದು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿ
ಪತ್ನಿಯ ಕೊಲೆ ಮಾಡಿದ ಬಳಿಕ ಶವವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಆರೋಪಿಯು ಪರಾರಿಯಾಗಿರುವ ಘಟನೆ ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ನಡೆದಿದೆ. ದುರ್ವಾಸನೆ ಬರುತ್ತಿದ್ದ ಕಾರಣ ಮನೆ ಬಾಗಿಲು ತೆರೆದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ರೀಮಾ ಕುಮಾರಿ (20)
ವಿದ್ಯಾರ್ಥಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್: ಎಫ್‌ಐಆರ್
ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರು ನಡೆಸಿದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ನಾಯಕರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಲಾಗಿದ್ದ ದುರುದ್ದೇಶಪೂರಿತ ಹಾಗೂ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪದಡಿ
ರಾಹುಲ್ ಗಾಂಧಿ ವಂಶ ಧ್ವಂಸ ಬೆದರಿಕೆ: ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಾಗೂ ಕಾಂಗ್ರೆಸ್ ವಿರುದ್ಧ
ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷಿಗಳ ಬೆದರಿಸಿದ್ದವರಿಗೆ ಜಾಮೀನು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ದರ್ಶನ್ ಗ್ಯಾಂಗ್‌ನ ಸುಹಾಸ್, ವೈಭವ್ ಮತ್ತು ಪುನೀತ್ ಎಂಬ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಈ ಮೂವರು ಆರೋಪಿಗಳು ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ
ವಜ್ರಾಭರಣ ಗಿಫ್ಟ್ ಆಮಿಷಕ್ಕೆ 1.75 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಮಹಿಳೆ
ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾಗಿದ್ದ ವ್ಯಕ್ತಿಯ ಮಾತು ನಂಬಿ ಬೆಂಗಳೂರಿನ ಯಶವಂತಪುರದ ಮಹಿಳೆಯೊಬ್ಬರು ಫಾರಿನ್ ಸೀರೆ, ವಜ್ರಾಭರಣಗಳ ಆಮಿಷಕ್ಕೆ ಒಳಗಾಗಿ 1.75 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬಹಿರಂಗಗೊಂಡಿದೆ. ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಾಹಿಲ್ ಜುಗ್ಗಲ್
ಪತ್ನಿಗೆ ನೇಣುಬಿಗಿದು ಕೊಲೆಗೈದು ವೀಡಿಯೊ ಮಾಡಿಕೊಂಡ ಪತಿ
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಪತ್ನಿಗೆ ನೇಣು ಬಿಗಿದು ಕೊಲೆ ಮಾಡಿ ಅದರ ವೀಡಿಯೊ ರೆಕಾರ್ಡ್ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿಯು ಪತ್ನಿ ಕೊನೆ ಗಳಿಗೆಯಲ್ಲಿ ಪ್ರಾಣಸಂಕಟದಿಂದ ಒದ್ದಾಡುವುದನ್ನು ಆಕೆಯ ತಂದೆ, ತಾಯಿಗೆ ವೀಡಿಯೊ ಕಾಲ್




