Menu

ಔರಾದ್: ದಂಪತಿ ಜಗಳ ಗಂಡನ ಕೊಲೆಯಲ್ಲಿ ಅಂತ್ಯ

ಔರಾದ್ : ಹೆಣ್ಣಿನ ಕೈಗಳಿಗೆ ಬಳೆ ಯಷ್ಟು ಮುಖ್ಯವೋ ಹೆಣ್ಣಿಗೂ ಗಂಡ ಅಷ್ಟೆ ಮುಖ್ಯ ಎಂಬ ಮಾತಿದೆ. ಗಂಡ-ಹೆಂಡತಿ ಪ್ರೀತಿ ಬಹಳ ಅಮೂಲ್ಯ. ಅಂತದ್ರಲ್ಲಿ ಇಲ್ಲೊಬ್ಬಳು ಹೆಂಡತಿ ಗಂಡನನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಅದೂ ಗಂಡ ಹೆಂಡತಿ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿ ಸವಿತಾ ಜೋಜನೆ ಎಂಬಾತಳು ತನ್ನ ಪತಿರಾಯನ್ನೇ ಹತ್ಯೆ ಮಾಡಿರುವ ಪ್ರಕರಣ ಬೀದರ ಜಿಲ್ಲೆಯ ಔರಾದ್ ತಾಲೂಕಿನ ಬಾಚೇಪಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೃತ

ಯಾರಲ್ಲಿ ಕೇಳಿ ಟಿಕೆಟ್‌ ದರ ಹೆಚ್ಚಿಸಿದ್ದೀರೆಂದು ಕಂಡಕ್ಟರ್‌ಗೆ ಕುಡುಕನಿಂದ ಹಲ್ಲೆ

ಕೊಪ್ಪಳ ಜಿಲ್ಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಯಾರನ್ನು ಕೇಳಿ ಬಸ್ ಟಿಕೆಟ್‌ ದರ ಹೆಚ್ಚಿಸಿದ್ದೀರಿ ಎಂದು ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಗಂಗಾವತಿ ಡಿಪೋಕ್ಕೆ ಸೇರಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಹನುಮಪ್ಪ ಎಂಬವರ

ಮಂಗಳೂರು ಬ್ಯಾಂಕ್ ದರೋಡೆ ಕಿಂಗ್ ಪಿನ್ ಸೇರಿ ಮತ್ತಿಬ್ಬರು ಸೆರೆ

ಮಂಗಳೂರು ನಗರ ಹೊರವಲಯದ ಕೆ.ಸಿ.ರೋಡ್‌ನಲ್ಲಿರುವ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆದ ದರೋಡೆ ಪ್ರಕರಣದ ಪ್ರಮುಖ ಆರೋಪಿ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕು ಕನ್ಯಾನದ ಭಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ (69) ಮತ್ತು ಕೆ.ಸಿ.ರೋಡ್‌ನ  ಮೊಹಮ್ಮದ್

ಬೆಳಗಾವಿ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ವಾಪಸ್‌

ಬೆಳಗಾವಿಯಲ್ಲಿ ಕೆಎಸ್ಸಾರ್ಟಿಸಿ ಕಂಡಕ್ಟರ್ ಕನ್ನಡದಲ್ಲಿ ಹೇಳಿ ಎಂದ ಕಾರಣ ಮುಂದಿಟ್ಟುಕೊಂಡು ಹಲ್ಲೆ ನಡೆಸಿ ಬಳಿಕ ಪೋಕ್ಸೋ ಕೇಸ್ ದಾಖಲಿಸಿದ್ದ ದೂರುದಾರೆ ಕೇಸ್‌ ವಾಪಸ್‌ ಪಡೆದಿದ್ದಾರೆ. ಪೋಕ್ಸೋ ಕೇಸ್ ದಾಖಲು ಮಾಡಿದ್ದ ಸಂತ್ರಸ್ತೆಯ ತಾಯಿ ಈ ಕುರಿತು ವೀಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ವಿಜಯಪುರದಿಂದ ಕುಂಭಮೇಳಕ್ಕೆ ಹೊರಟಿದ್ದ ಇಬ್ಬರು ಅಪಘಾತಕ್ಕೆ ಬಲಿ

ಕುಂಭಮೇಳದಲ್ಲಿ ಭಾಗವಹಿಸಲು ಪ್ರಯಾಗ್‌ರಾಜ್ ಗೆ ಪ್ರಯಾಣಿಸುತ್ತಿದ್ದಾಗ ಗುಜರಾತ್‌ನ ಪೋರ್‌ಬಂದರ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಮೃತಪಟ್ಟವರು. ಚಡಚಣ ಪಟ್ಟಣದಿಂದ

ಗೆಳತಿ ಸೇರಿ ಕುಟುಂಬದ ಐವರನ್ನು ಕೊಲೆಗೈದು ವಿಷ ಸೇವಿಸಿದ ಯುವಕ

ಕೇರಳದ ತಿರುವನಂತಪುರದಲ್ಲಿ ಯುವಕನೊಬ್ಬ ತನ್ನ ಕುಟುಂಬ ಸದಸ್ಯರು ಹಾಗೂ ಪ್ರೇಯಸಿ ಸೇರಿದಂತೆ ಐವರನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. 23 ವರ್ಷದ ಆರೋಪಿ ಪೆರುಮಾಳದ ನಿವಾಸಿ ಅಫಾನ್ ಪೊಲೀಸರಿಗೆ ಶರಣಾಗಿ ಐವರು ಕುಟುಂಬ ಸದಸ್ಯರು ಮತ್ತು ಗೆಳತಿ ಸೇರಿದಂತೆ ಐದು ಜನರನ್ನು

ಐಎಂಎ ಹಗರಣ ಸಂತ್ರಸ್ತರಿಗೆ ನಿಗದಿತ ಪರಿಹಾರದ ಭರವಸೆ ನೀಡಿದ ಸಚಿವ ಕೃಷ್ಣ ಭೈರೇಗೌಡ

ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಲ್ಲಿ  ಹಣ ಕಳೆದುಕೊಂಡಿರುವ ಎಲ್ಲ ಸಂತ್ರಸ್ತರಿಗೂ ರಂಜಾನ್ ಹಬ್ಬಕ್ಕೂ ಮೊದಲು ನಿಗದಿತ ಪರಿಹಾರ ಹಣ ನೀಡಲು ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ಸಂಬಂಧ ವಿಕಾಸಸೌಧ ಕಚೇರಿಯಲ್ಲಿ ಸಭೆ

ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಬಿಬಿಎಂಪಿ ಕಚೇರಿ ಉದ್ಯೋಗಿ ಆತ್ಮಹತ್ಯೆ

ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಾಸವಿದ್ದ ಚಾಮರಾಜಪೇಟೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡವರು. ಫೆ.23ರ ರಾತ್ರಿ ಈ ದುರಂತ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು

ಕೆಎಸ್ಸಾರ್ಟಿಸಿ ಕಂಡಕ್ಟರ್‌ ಮೇಲೆ ಹಲ್ಲೆಕೋರರ ವಿರುದ್ಧ ಗೂಂಡಾ ಕಾಯ್ದೆ: ಸಚಿವ ರಾಮಲಿಂಗಾ ರೆಡ್ಡಿ ತಾಕೀತು

ಬೆಳಗಾವಿಯಲ್ಲಿ ಕರ್ನಾಟಕದ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕನ್ನಡದಲ್ಲಿ ಮಾತನಾಡಿ ಎಂದ ವಿಚಾರಕ್ಕೆ ದುಷ್ಕರ್ಮಿಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಹಿನ್ನೆಲೆಯಲ್ಲಿ ಬೆಳಗಾವಿಗೆ ಭೇಟಿ

ಸ್ನೇಹಿತರ ಜತೆಗೂಡಿ ಮಾಜಿ ಗೆಳತಿ ಮೇಲೆ ಗ್ಯಾಂಗ್‌ ರೇಪ್‌

ಸ್ನೇಹಿತರೊಂದಿಗೆ ಸೇರಿ ವ್ಯಕ್ತಿಯೊಬ್ಬ ತನ್ನ ಮಾಜಿ ಗೆಳತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರ ಭಿವಂಡಿಯಲ್ಲಿ ನಡೆದಿದೆ. ಈಗ ಗೆಳತಿ ಬೇರೊಬ್ಬನ ಜತೆ ಸಂಬಂಧದಲ್ಲಿದ್ದಾಳೆಂದು ತಿಳಿದು ಮಾಜಿ ಪ್ರಿಯಕರ ಮೃಗೀಯವಾಗಿ ವರ್ತಿಸಿದ್ದು, ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಕ್ರೂರಿಗಳು ಬೆಳಗ್ಗೆ