ಅಪರಾಧ
ದೊಡ್ಡಬಳ್ಳಾಪುರದಲ್ಲಿ ಗೃಹಪ್ರವೇಶದ ಅಡುಗೆಗೆ ಬಂದಿದ್ದ ಬಾಲಕ ಸಾವು
ದೊಡ್ಡಬಳ್ಳಾಪುರ ನಗರದ ಜಾಲಪ್ಪ ಕಾಲೇಜು ರಸ್ತೆಯ ಅಶ್ವತ್ಥಪ್ಪನವರ ಮನೆ ಬಳಿ ಗೃಹಪ್ರವೇಶದ ಅಡುಗೆ ಕೆಲಸಕ್ಕೆ ಬಂದಿದ್ದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗರೇ ಕಾಲುವೆ ನಿವಾಸಿ ಹೇಮಂತ (17)ಮೃತ ಬಾಲಕ. ಶಾಮಿಯಾನ ಬಿಚ್ಚಲು ಹೋಗಿ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿದ್ಯುತ್ ಸ್ಪರ್ಶಿಸಿದ ಕೂಡಲೇ ಮೇಲಿನಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಅಸು ನೀಗಿದ್ದಾನೆಂದು ಪೋಷಕರು ಹೇಳಿದ್ದು, ಬಾಲಕಾರ್ಮಿಕನನ್ನು ಕೆಲಸಕ್ಕೆ ಕರೆದುಕೊಂಡ ಗುತ್ತಿಗೆದಾರ ಗಂಗರಾಜು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Accident Death: ಕೆಆರ್ ಪೇಟೆಯಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹರಿದು ವ್ಯಕ್ತಿ ಸಾವು
ಶ್ರೀನಿವಾಸಪುರ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುತ್ತಿದ್ದ ಡಬಲ್ ಟ್ರ್ಯಾಲಿ ಟ್ರ್ಯಾಕ್ಟರ್ ಹರಿದು ಸೈಕಲ್ ಸವಾರ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಆನೆಗೊಳ ಚಿಕ್ಕತರಹಳ್ಳಿ ಗ್ರಾಮದ ಈರಪ್ಪ(55) ಮೃತಪಟ್ಟಿದ್ದಾರೆ. ಚಾಲಕ ಸಂಚಾರ ನಿಯಮ ಮೀರಿ ಡಬಲ್ ಟ್ರ್ಯಾಲಿ ಅಳವಡಿಸಿಕೊಂಡಿದ್ದು, ಕೆಲಸ ಮುಗಿಸಿ ಸೈಕಲ್ನಲ್ಲಿ
ಬೆಂಗಳೂರು: ವಾಮಾಚಾರಕ್ಕೆ ಸಾಕುನಾಯಿ ಬಲಿಕೊಟ್ಟ ಮಹಿಳೆ
ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನಲ್ಲಿ ವಾಮಾಚಾರಕ್ಕೆ ಸಾಕು ನಾಯಿಯನ್ನೇ ಕೊಂದು ಬಚ್ಚಿಟ್ಟಿದ್ದ ಅಮಾನವೀಯ ಘಟನೆ ಮಹದೇವಪುರದ ಚಿನ್ನಪ್ಪ ಲೇಔಟ್ ನಲ್ಲಿ ನಡೆದಿದೆ. ವಾಮಾಚಾರಕ್ಕಾಗಿ ನಾಲ್ಕು ದಿನಗಳ ಹಿಂದೆಯೇ ಈ ಮಹಿಳೆ ತಾನೇ ಸಾಕಿದ ನಾಯಿಯನ್ನು
Accident Deaths: ಬಾದಾಮಿಯಲ್ಲಿ ಲಾರಿ-ಬೈಕ್ ಡಿಕ್ಕಿ: ಇಬ್ಬರ ಸಾವು
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಬಳಿ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಕೆರೂರ ಪೋಲಿಸರ ಭೇಟಿ ಪರಿಶೀಲನೆ ನಡೆಸುತ್ತಿದ್ದು, ಮೃತರ ಗುರುತು, ಅಪಘಾತಕ್ಕೆ ಕಾರಣ ಏನು ಎಂಬುದು
ವಿಜಯಪುರ ಬ್ಯಾಂಕ್ ದರೋಡೆ: ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರು ಅರೆಸ್ಟ್
ವಿಜಯಪುರ: ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ಮಾಡಿ, 10.5 ಕೋಟಿ ರೂ. ಮೌಲ್ಯದ ಚಿನ್ನವನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಮೇ 25ರಂದು ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಣಣದ ಕೆನರಾ ಬ್ಯಾಂಕ್ನಲ್ಲಿ ದರೋಡೆ ನಡೆದಿತ್ತು. ಸ್ವತಃ
Accident death: ಬೀದರ್ನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು
ಬೀದರ್ನ ಹುಮನಾಬಾದ್ ರೈಲು ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು 31 ವರ್ಷದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕಲ್ಬುರ್ಗಿಯಿಂದ ಬೀದರ್ಗೆ ಸಂಚರಿಸುತ್ತಿದ್ದ ಲೋಕಲ್ ರೈಲಿನಲ್ಲಿ ಈ ದುರಂತ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕಲ್ಬುರ್ಗಿಯ ಬಸವನಗರ ನಿವಾಸಿ ವಿಜಯಾನಂದ (31) ಎಂದು ಗುರುತಿಸಲಾಗಿದೆ.
ಪ್ರಾಂಶುಪಾಲನ ಜೊತೆ ಶಿಕ್ಷಕಿ ಅನೈತಿಕ ಸಂಬಂಧ: ಅಡ್ಡಿಪಡಿಸಿದ ಮಗನ ಕೊಲೆ
ಶಾಲಾ ಶಿಕ್ಷಕಿಯೊಬ್ಬರು ಪ್ರಾಂಶುಪಾಲನ ಜೊತೆ ಸ್ನೇಹ ಬೆಳೆಸಿದ್ದು ಅದು ಸಂಬಂಧಕ್ಕೆ ತಿರುಗಿದ್ದನ್ನು ವಿರೋಧಿಸಿದ ಮಗನನ್ನೇ ಕೊಲೆ ಮಾಡಿರುವ ಘಟನೆ ಬಿಹಾರದ ಪಾಟ್ನಾದ ಗ್ರಾಮೀಣ ಜಿಲ್ಲೆಯಲ್ಲಿ ನಡೆದಿದೆ. ಶಿಕ್ಷಕಿ ರೋಮಾಕುಮಾರಿ (32) ಶಾಲಾ ಪ್ರಾಂಶುಪಾಲ ನಿರ್ಮಲ್ ಪಾಸ್ವಾನ್ ಜೊತೆ ಸೇರಿ ತನ್ನ 12
ಕೆಲಸಕ್ಕಿದ್ದ ಮನೆಯಲ್ಲಿ ಚಿನ್ನ ಕದ್ದು ಮಹಿಳೆ ಜೈಲುಪಾಲು
ಬೆಂಗಳೂರಿನ ಮಹಿಳೆಯೊಬ್ಬರು ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲು ತಾನು ಕೆಲಸ ಮಾಡುತ್ತಿದ್ದ ಮನೆಯಿಂದ ಚಿನ್ನಾಭರಣ ಕದ್ದು ಜೈಲು ಸೇರಿದ್ದಾರೆ. ರಾಗಿಗುಡ್ಡದ ನಿವಾಸಿ ಶಾಂತಿ ಅಲಿಯಾಸ್ ಶಾಂತಮ್ಮ ಬಂಧಿತ ಆರೋಪಿಯಾಗಿದ್ದು, ₹14.3 ಲಕ್ಷ ರೂ. ಮೌಲ್ಯದ 143 ಗ್ರಾಂ ಚಿನ್ನ ಜಪ್ತಿ
21 ಶಾಲೆಗಳಿಗೆ ಹುಸಿ ಬಾಂಬ್ ಇಮೇಲ್: ಯುವತಿ ಅರೆಸ್ಟ್
ಲವ್ ಫೇಲ್ಯೂರ್ ಆಗಿದ್ದ ಯುವತಿಯೊಬ್ಬಳು ಪ್ರಿಯಕರನ ಹೆಸರಿನಲ್ಲಿ ಉಡುಪಿ ಶಾಲೆ ಸೇರಿ ನೆರೆ ರಾಜ್ಯದ 21 ಶಾಲೆಗಳಿಗೆ ಹುಸಿ ಬಾಂಬ್ ಇಮೇಲ್ ಕಳುಹಿಸಿದ್ದು, ಅಹಮದಾಬಾದ್ ಪೊಲೀಸರು ಬಂಧಿಸಿದ್ದಾರೆ. ರೀನಾ ಜೋಶಿಲ್ದಾ ಬಂಧಿತ ಆರೋಪಿ. ರೀನಾ ಎಲೆಕ್ಟ್ರಿಕಲ್ ಎಂಜಿನಿಯರ್ ಆಗಿ ಚೆನ್ನೈಯ ಬಹುರಾಷ್ಟ್ರೀಯ
ರಾಜ್ಯದ 18 ಕಡೆ ಖಾಸಗಿ ಕಾಲೇಜುಗಳ ಮೇಲೆ ಇಡಿ ದಾಳಿ
ಬೆಂಗಳೂರು ಸೇರಿದಂತೆ ರಾಜ್ಯದ 18 ಕಡೆ ಖಾಸಗಿ ಕಾಲೇಜುಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಬಿಎಂಎಸ್ ಕಾಲೇಜು ಹಾಗೂ ಆಕಾಶ್ ಇಂಜಿನಿಯರಿಂಗ್ ಕಾಲೇಜ್ ಮೇಲೂ ದಾಳಿಯಾಗಿದೆ. ಅಕ್ರಮ ಹಣ ವರ್ಗಾವಣೆ ಮತ್ತು ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ವಿಚಾರವಾಗಿ ಸಾಕಷ್ಟು