ಅಪರಾಧ
ಬೆಂಗಳೂರು ಕಲಾಸಿಪಾಳ್ಯದಲ್ಲಿ ಬಾಲಕಿ ಆತ್ಮಹತ್ಯೆ
ಬೆಂಗಳೂರು ಕಲಾಸಿಪಾಳ್ಯ ಹೋಟೆಲ್ ಮಯೂರ ಪಕ್ಕದ ರಸ್ತೆಯ ಮನೆಯಲ್ಲಿ ಬಾಲಕಿಯೊಬ್ಬಳು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶರ್ಮಿಳಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಬಾಲಕಿಯ ಪೋಷಕರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಕಲಾಸಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಅರ್ಕಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆ ಸಾವು
ಕನಕಪುರ ತಾಲೂಕಿನ ಸಾತನೂರು ಅರಣ್ಯ ವಲಯದ ವ್ಯಾಪ್ತಿಯ ಕುನ್ನೂರು ಗ್ರಾಮದ ಬಳಿ ಅರ್ಕಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಎರಡು ಕಾಡಾನೆಗಳು ಮೃತಪಟ್ಟಿವೆ. ಕಾಡಾನೆಗಳು ಹಿನ್ನೀರು ದಾಟಲು ಮುಂದಾದಾಗ ನೀರಿನೊಳಗಿದ್ದ ಜೊಂಡಿನಲ್ಲಿ ಸಿಲುಕಿ ಮುಂದಕ್ಕೂ ಹೋಗಲಾಗದೆ, ಹಿಂದಕ್ಕೂ ಬರಲಾಗದೆ ಒದ್ದಾಡಿ ಮೃತಪಟ್ಟಿವೆ ಎನ್ನಲಾಗಿದೆ.
ಸ್ನೇಹಿತ, ಸಾರ್ವಜನಿಕರ ನಿರ್ಲಕ್ಷ್ಯ: ಬೆಂಗಳೂರಿನಲ್ಲಿ ಆಕ್ಸಿಡೆಂಟ್ ಆಗಿ ರಾತ್ರಿಯಿಡಿ ಒದ್ದಾಡಿ ಪ್ರಾಣ ಬಿಟ್ಟ ವ್ಯಕ್ತಿ
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆತನ ಸ್ನೇಹಿತ ಅಲ್ಲೇ ಬಿಟ್ಟು ಪರಾರಿಯಾಗಿದ್ದು, ಸಾರ್ವಜನಿಕರು ಕೂಡ ನೆರವಿಗೆ ಧಾವಿಸದೆ ಬಿಟ್ಟ ಪರಿಣಾಮ ಆತ ರಾತ್ರಿಯಿಡೀ ಒದ್ದಾಡಿ ಪ್ರಾಣ ಬಿಟ್ಟಿರುವ ಹೃದಯ ವಿದ್ರಾವಕ ಘಟನೆಯೊಂದು ಮೈಕೋ ಲೇಔಟ್ ಸಂಚಾರಿ ಠಾಣೆ ವ್ಯಾಪ್ತಿಯ KMF ಕಚೇರಿ
ಅತ್ತಿಬೆಲೆ ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರ ಸಾವು
ಬೆಂಗಳೂರು ಹೊರವಲಯದ ಅತ್ತಿಬೆಲೆ ಸಮೀಪದ ಬಳ್ಳೂರು ಗ್ರಾಮದಲ್ಲಿ ಆಟವಾಡುತ್ತ ಕೆರೆ ಬಳಿ ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆಯೊಂದು ನಡೆದಿದೆ. ಅನಿಕೇತ್ ಕುಮಾರ್(12), ರೆಹಮಾತ್ ಬಾಬಾ(11) ಮೃತಪಟ್ಟ ಬಾಲಕರು. ಬಾಲಕ ಅನಿಕೇತ್ ಕುಮಾರ್ ಬಿಹಾರ ಮೂಲದವ, ರೆಹಮಾತ್
ದಾವಣಗೆರೆಯಲ್ಲಿ ಕಾರು ಕಾಲುವೆಗೆ ಉರುಳಿ ಇಬ್ಬರ ಸಾವು
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಭದ್ರಾ ಕಾಲುವೆಗೆ ಕಾರು ಬಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಲ್ಲಿಕಾರ್ಜುನ(29) ಹಾಗೂ ಸಿದ್ದೇಶ್(38) ಮೃತಪಟ್ಟವರು. ದಾವಣಗೆರೆಯ ಆರು ಜನ ಮಂಗಳೂರು ಪ್ರವಾಸಕ್ಕೆ ಹೋಗಿ ವಾಪಸ್ ಬರುವಾಗ ಈ ದುರಂತ ನಡೆದಿದೆ. ನಿದ್ದೆ ಮಂಪರಿನಲ್ಲಿ
ಆಕಸ್ಮಿಕ ಸಾವಲ್ಲ, ಕೊಲೆಯೆಂದು ಆರು ಗಂಟೆಯೊಳಗೆ ದೃಢಪಡಿಸಿದ ಯಮಕನಮರಡಿ ಪೊಲೀಸ್
ಕಬ್ಬು ಕಡಿಯುವಾಗ ಕುಡುಗೋಲು ತಾಗಿ ಸಾವು ಎಂದು ಬಿಂಬಿತವಾಗಿದ್ದ ಪ್ರಕರಣವನ್ನು ಆರು ಗಂಟೆಯೊಳಗೆ ಬೇಧಿಸಿದ ಪೊಲೀಸರು ಅದೊಂದು ಕೊಲೆ ಎಂಬುದನ್ನು ದೃಢಪಡಿಸಿ ಆರೋಪಿಗಳಾದ ಸಹೋದರ ಮತ್ತು ಸಂಬಂಧಿಯನ್ನು ಅರೆಸ್ಟ್ ಮಾಡಿರುವ ಘಟನೆ ಬೆಳಗಾವಿಯ ಯಮಕನಮರಡಿಯ ಲ್ಲಿ ನಡೆದಿದೆ. ಯಮಕನಮರಡಿ ಪೊಲೀಸ್ ಇನ್ಸ್‌ಪೆಕ್ಟರ್
ಪೊಲೀಸ್ ಮೇಲೆ ದಾಳಿ: ಕೊಲೆ ಆರೋಪಿ ಮೇಲೆ ಫೈರಿಂಗ್
ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಕಿಡ್ನಾಪ್ ಅಂಡ್ ಮರ್ಡರ್ ಕೇಸ್ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಹೆಬ್ಬಗೋಡಿ ಇನ್ಸ್ಪೆಕ್ಟರ್ ಸೋಮಶೇಖರ್ ಆರೋಪಿಯಾಗಿರುವ ಆಂದ್ರಪ್ರದೇಶ ಮೂಲದ ರವಿಪ್ರಸಾದ್ ರೆಡ್ಡಿಯ ಎರಡು ಕಾಲಿಗೆ ಗುಂಡು ಹೊಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೊಮ್ಮಸಂದ್ರ
ವಿದ್ಯುತ್ ಕಂಬಕ್ಕೆ ಲಾರಿ ಗುದ್ದಿ ಗೋಡೆ ಬಿದ್ದು ಮಗು ಸಾವು
ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿ ಕಾಲೊನಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ವಿದ್ಯುತ್ ಕಂಬಕ್ಕೆ ತಗುಲಿ ಗೋಡೆ ಬಿದ್ದು ಪರಿಣಾಮ ಮಗುವೊಂದು ಮೃತಪಟ್ಟಿದೆ. ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ (1.8) ಮೃತಪಟ್ಟ ಮಗು. ಲಾರಿ ಚಾಲಕನ ನಿರ್ಲಕ್ಷ್ಯದಿಂದ
ಉಗ್ರ, ವಿಕೃತ ಕಾಮಿ, ಕ್ರಿಮಿನಲ್ ಗಳಿಗೆ ಬೆಂಗಳೂರು ಜೈಲಲ್ಲಿ ರಾಜಾತಿಥ್ಯ!
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ಶಂಕಿತ ಉಗ್ರ, ವಿಕೃತ ಕಾಮಿ ಉಮೇಶ್ ರೆಡ್ಡಿ ಚಿನ್ನದ ಸ್ಮಗ್ಲರ್ ಮುಂತಾದ ಕ್ರಿಮಿನಲ್ ಗಳಿಗೆ ರಾಜಾತಿಥ್ಯ ನೀಡುತ್ತಿರುವುದು ಮತ್ತೆ ಸುದ್ದಿಯಾಗಿದೆ. ಹೌದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕ್ರಿಮಿನಲ್ ಗಳಿಗೆ ರಾಜಾತಿಥ್ಯ ನೀಡುತ್ತಿರುವ ವೀಡಿಯೋ ಹಾಗೂ
ರನ್ಯಾ ರಾವ್ ವಿರುದ್ಧ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ಸಿದ್ಧತೆ
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ತನಿಖೆ ನಡೆಸುತ್ತಿದ್ದ ಡಿಆರ್‌ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ. 123 ಕೋಟಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿರುವ ಪ್ರಕರಣ ಇದಾಗಿದೆ. ಪ್ರಕರಣದ ಐದು ಆರೋಪಿಗಳಿಗೂ ಶೋಕಾಸ್ ನೋಟಿಸ್ ನೀಡಿದ್ದ ಡಿಆರ್‌ಐ ರನ್ಯಾ




