ಅಪರಾಧ
ಸಾಲ ಬಾಧೆ: ಬಾಗಲಕೋಟೆಯಲ್ಲಿ ಚಿನ್ನ ವ್ಯಾಪಾರಿ ಕುಟುಂಬ ಆತ್ಮಹತ್ಯೆ
ಸಾಲ ಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿಗಳಾದ 54 ವರ್ಷದ ಪ್ರಕಾಶ್ ರಾಯ್ಕರ್, ಪತ್ನಿ 46 ವರ್ಷದ ಪ್ರಭಾ ರಾಯ್ಕರ್ ಹಾಗೂ 21 ವರ್ಷದ ಪುತ್ರ ಶಶಾಂಕ್ ರಾಯ್ಕರ್ ಸ್ವಗೃಹದಲ್ಲೇ ಆತ್ಮಹತ್ಯೆ ಮಾಡಿಕೊಂಡವರು. ಪ್ರಕಾಶ್ ರಾಯ್ಕರ್ ಗಂಗಾವತಿಯಲ್ಲಿ ಚಿನ್ನದ ಆಭರಣ ಅಂಗಡಿ ನಡೆಸುತ್ತಿದ್ದರು. ಕೆಲವು ಸಮಯದಿಂದ ವ್ಯವಹಾರದಲ್ಲಿ ನಷ್ಟ ಉಂಟಾಗಿತ್ತು, ಹೆಚ್ಚುತ್ತಿದ್ದ ಸಾಲದ ಹೊರೆ ಮತ್ತು ಉಂಟಾದ ಮಾನಸಿಕ ಒತ್ತಡವೇ
ಲಕ್ಷ್ಮೀ ದೇವಿಗೆ ಅವಮಾನ: ಜ್ಯೋತಿಷಿ ಆರ್ಯವರ್ಧನ್ ವಿರುದ್ಧ ದೂರು
ಲಕ್ಷ್ಮೀ ದೇವಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಜ್ಯೋತಿಷಿ ಆರ್ಯವರ್ಧನ್ ವಿರುದ್ಧ ಮೇಲೆ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರ್ಯವರ್ಧನ್ ಕರ್ನಾಟಕ ಗೋವು ರಕ್ಷಕರ ಸೇನೆಯು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಮಹಿಳೆಯರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ
ತಲಘಟ್ಟಪುರದಲ್ಲಿ ಪಾರ್ಟಿ ಎಂದು ಕರೆಸಿ ಯುವತಿಯ ಅತ್ಯಾಚಾರ: ಐವರ ಬಂಧನ
ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾರ್ಟಿ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಯುವಕರುಯುವತಿಗೆ ಮೊದಲೇ ಪರಿಚಯವಿದ್ದರು ಎನ್ನಲಾಗಿದೆ. ಸೋಮಶೇಖರ್ ಎಂಬಾತ, ಕಲಬುರ್ಗಿಯಿಂದ ನಮ್ಮ ಸ್ನೇಹಿತರು ಬಂದಿದ್ದಾರೆ ಎಂದು ಹೇಳಿ
ಕೃಷ್ಣಾ ನದಿಗೆ ಉರುಳಿದ್ದ ಟಿಪ್ಪರ್ ಒಳಗೆ ಚಾಲಕನ ಶವ ಪತ್ತೆ
ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಜ್ಯದ ಅತಿ ಉದ್ದದ ಕೊರ್ತಿ–ಕೋಲ್ಹಾರ ಸೇತುವೆ ಮೇಲೆ ಮೂರು ದಿನಗಳ ಹಿಂದೆ ಟಿಪ್ಪರ್ ಮತ್ತು ಕಾರು ಡಿಕ್ಕಿಯಾಗಿ ನಿಯಂತ್ರಣ ತಪ್ಪಿದ ಟಿಪ್ಪರ್ ಕೃಷ್ಣಾ ನದಿಗೆ ಬಿದ್ದಿತ್ತು. ಆ ಟಿಪ್ಪರ್ ಅನ್ನು ಕ್ರೇನ್ ಮೂಲಕ ಮೇಲಕ್ಕೆ ಎತ್ತಲಾಗಿದ್ದು, ಒಳಭಾಗದಲ್ಲಿ
ನಟ ದರ್ಶನ್ ಜಾಮೀನು ಆದೇಶ ಮರುಪರಿಶೀಲನೆ ಅರ್ಜಿ ವಜಾಗೊಳಿಸಿದ ಸುಪ್ರೀಂ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಮೇ 15 ರಂದು ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಸುಪ್ರೀಂ ಕೋರ್ಟ್ ನೀಡಿದ್ದ ಅದೇಶ ಮರು ಪರಿಶೀಲನೆ ಮಾಡುವಂತೆ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜೈಲಿನಲ್ಲಿರುವ ದರ್ಶನ್ ಇನ್ನೂ
ಅಕ್ರಮ ಆಸ್ತಿ ಕೇಸ್ ರದ್ದು ಕೋರಿ ಕೆಎಸ್ ಈಶ್ವರಪ್ಪ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾ
ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈಶ್ವರಪ್ಪ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆಗೆ ಮನವಿ
ಪೆರೇಸಂದ್ರ ಕ್ವಾರಿಯಲ್ಲಿ ಡ್ರಿಲ್ಲಿಂಗ್ ವೇಳೆ ಸ್ಫೋಟಕ್ಕೆ ಕಾರ್ಮಿಕ ಬಲಿ
ಚಿಕ್ಕಬಳ್ಳಾಪುರದ ಪೆರೇಸಂದ್ರ ಸಮೀಪದ ಹಿರೇನಗವಳ್ಳಿ ಬೆಟ್ಟದಲ್ಲಿರುವ ಎಕೋ ಸ್ಯಾಂಡ್ ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ವೇಳೆ ಸಂಭವಿಸಿದ ಸ್ಫೋಟದಲ್ಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಧರ್ಮಾವರಂನ 35 ವರ್ಷದ ನಾಗೇಂದ್ರ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ವಾರಿಯಲ್ಲಿ ಡ್ರಿಲ್ಲಿಂಗ್ ಕಾರ್ಯ ನಡೆಯುತ್ತಿದ್ದ ವೇಳೆ
ಹೈದರಾಬಾದ್, ಕರ್ನಾಟಕಗಳಲ್ಲಿ ತೆಲಂಗಾಣ ಅಧಿಕಾರಿಯ ಭಾರಿ ಅಕ್ರಮ ಆಸ್ತಿ ಪತ್ತೆ ಮಾಡಿದ ಎಸಿಬಿ
ತೆಲಂಗಾಣದ ಭ್ರಷ್ಟ ಅಧಿಕಾರಿಯೊಬ್ಬರ ಕೋಟಿ ಕೋಟಿ ಅಕ್ರಮ ಆಸ್ತಿಯ ವಿವರಗಳನ್ನು ಭ್ರಷ್ಟಾಚಾರ ನಿಗ್ರಹ ದಳ ಬಯಲಿಗೆಳೆದಿದೆ. ಹೈದರಾಬಾದ್ ಮತ್ತು ಕರ್ನಾಟಕಗಳಲ್ಲಿ 50 ಎಕರೆ ಜಮೀನು, ಕೆಜಿಗಟ್ಟಲೆ ಚಿನ್ನ, 200 ಕೋಟಿ ರೂ. ಅಕ್ರಮ ಆಸ್ತಿ ಪತ್ತೆಯಾಗಿದೆ. ಒಟ್ಟು ಅಕ್ರಮ ಆಸ್ತಿಯ ನಿಜವಾದ
ಅನೈತಿಕ ಸಂಬಂಧ ಶಂಕೆ: ಪತ್ನಿಯ ಕೊಲೆಗೈದ ಪತಿ
ಶ್ರೀರಂಗಪಟ್ಟಣ ತಾಲೂಕಿನ ಆಲಗೂಡು ಗ್ರಾಮದಲ್ಲಿ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ಪತ್ನಿಯ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಡೆದಿದೆ. ರಶ್ಮಿ ಕೊಲೆಯಾದ ಮಹಿಳೆ, ಆಕೆಯ ಪತಿ ಆಲಗೂಡು ಗ್ರಾಮದ ರಮೇಶ್ ಕೊಲೆ ಆರೋಪಿ, ಕಳೆದ ಕೆಲವು
ಕ್ವಾರಿ ದುರಂತ: ಅಧಿಕೃತ ವರದಿ ಬಂದ ಬಳಿಕ ಕ್ರಮವೆಂದ ಸಿಎಂ ಡಿ ಕೆ ಶಿವಕುಮಾರ್
ಮಾಗಡಿ ರಸ್ತೆ ಬಳಿ ಎರಡು ಕ್ವಾರಿಯಲ್ಲಿ ಕುಸಿತವಾಗಿದ್ದು 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ




