ಅಪರಾಧ
ಕುಕ್‌ನ ಕೊಲೆಗೈದು ಶವ ಕಾರಲ್ಲಿಟ್ಟುಕೊಂಡು ಸುತ್ತಾಡಿದ ಕೆಫೆ ಮಾಲೀಕ ಅರೆಸ್ಟ್
ಶಿವಮೊಗ್ಗದ ಸಾಗರ ಪಟ್ಟಣದ ಕೆಫೆಯೊಂದರ ಮಾಲೀಕ ಇಮ್ರಾನ್ ಎಂಬಾತ ಕುಕ್ ಟಿಂಕೂ ಶರ್ಮಾ ಎಂಬ ಯುವಕನನ್ನು ಸ್ನೂಕರ್ ಸ್ಟಿಕ್‌ನಿಂದ ಕೊಲೆ ಮಾಡಿ ಶವವನ್ನುಕಾರಿನಲ್ಲಿ ಇಟ್ಟುಕೊಂಡು ಇಡೀ ದಿನ ಊರು ಸುತ್ತಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ಹಣಕಾಸಿನ ಸಣ್ಣ ವಿವಾದದಿಂದ ಆರಂಭವಾದ ಜಗಳ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿದೆ. ಕೊಲೆಯ ನಂತರ ಇಮ್ರಾನ್, ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ತನ್ನ ಹೊಂಡಾ ಸಿಟಿ ಕಾರಿನಲ್ಲಿ ಇರಿಸಿಕೊಂಡಿದ್ದ. ನಿರ್ಜನ ಪ್ರದೇಶಗಳು, ರೈಲ್ವೆ ಹಳಿ ಬಳಿ
ದಾರಿಗಾಗಿ ಜಗಳ: ಮಹಿಳೆಯ ಬಟ್ಟೆ ಕಳಚಿ ಹಲ್ಲೆಗೆ ಯತ್ನ
ಹಾಸನದ ಬೇಲೂರು ತಾಲೂಕಿನ ಹಂಚಿಹಳ್ಳಿ ಗ್ರಾಮದಲ್ಲಿ ದಾರಿ ವಿಚಾರಕ್ಕೆ ಗ್ರಾಮದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಗ್ರಾಮದ ಗೋವಿಂದಪ್ಪ, ಕುಮಾರ್ ಹಾಗೂ ಇತರರ ಮನೆಗೆ ತೆರಳಲು ದಾರಿ ನಿರ್ಮಾಣ ವಿಚಾರದಲ್ಲಿ ಗಲಾಟೆ
ವಿವಾಹಿತೆಯೊಂದಿಗೆ ಅನೈತಿಕ ಸಂಬಂಧ: ಗದಗ ಯುವಕನ ಕೊಲೆಗೈದ ಆರೋಪಿಗಳು ಅರೆಸ್ಟ್
ಗದಗದ ಚಂದ್ರು ಕುರಿ ಎಂಬ ಯುವಕನ ಮೃತದೇಹ ಪತ್ತೆ ಪ್ರಕರಣದ ತನಿಕೆ ನಡೆಸಿರುವ ಪೊಲೀಸರು ಇದೊಂದು ಕೊಲೆ ಎಂಬುದನ್ನು ಪತ್ತೆ ಹಚ್ಚಿದ್ದಾರೆ. ವಿವಾಹಿತ ಮಹಿಳೆ ಜೊತೆಗಿನ ಅನೈತಿಕ ಸಂಬಂಧವೇ ಆತನ ಕೊಲೆಗೆ ಕಾರಣ ಎಂಬ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೊಲೆ ಆರೋಪಿಗಳಾದ
ಸೈಬರ್ ವಂಚಕಿಯ ಪ್ರೀತಿ, ಮದುವೆ ಮಾತು ನಂಬಿ ಟೆಕ್ಕಿ ಕಳೆದುಕೊಂಡಿದ್ದು 18 ಲಕ್ಷ ರೂ.
ಪ್ರೀತಿಸುವುದಾಗಿ ನಂಬಿಸಿ ಮದುವೆಯಾಗುವ ಆಸೆ ಹುಟ್ಟಿಸಿದ ಸೈಬರ್ ವಂಚಕಿ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ 18 ಲಕ್ಷ ರೂಪಾಯಿ ವಂಚಿಸಿದ್ದಾಳೆ. ನಗರದ ನ್ಯೂ ತಿಪ್ಪಸಂದ್ರದಲ್ಲಿ ನೆಲೆಸಿರುವ 29 ವರ್ಷದ ಟೆಕ್ಕಿ ಪ್ರೀತಿಯ ಹೆಸರಲ್ಲಿ ಹಣ ಕಳೆದುಕೊಂಡ ಬಳಿಕ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು
ಬಕೆಟ್ ನೀರಲ್ಲಿ ಮುಳುಗಿ ಮಗು ಸಾವು: ತಾಯಿ ಆತ್ಮಹತ್ಯೆ
ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದ್ದು, ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ನೊಂದ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಆತ್ಮಹತ್ಯೆ ಮಾಡಿಕೊಂಡವರು, ಅವರ
ಪರಿಸರ ಸ್ನೇಹಿ ಚೀಲಗಳ ಖರೀದಿಯಲ್ಲಿ ಅಕ್ರಮ: ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್
ಮೈಸೂರು ನಗರ ಪಾಲಿಕೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೆ ಹಂಚಿಕೆ ಮಾಡಲು ಪರಿಸರ ಸ್ನೇಹಿ ಚೀಲಗಳ ಖರೀದಿಯಲ್ಲಿ ನಡೆದ ಅಕ್ರಮಗಳ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.
ಅಪಪ್ರಚಾರಕ್ಕೆ ನೊಂದು ಹೊಳಲ್ಕೆರೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ಚಿತ್ರದುರ್ಗ ಹೊಳಲ್ಕೆರೆ ಪಟ್ಟಣದಲ್ಲಿ ಪ್ರಾಧ್ಯಾಪಕರೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ ನಡೆಸಿದ್ದಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನ ಮನೆಯಲ್ಲಿ
ಮದುವೆ ಮಾಡಿಸಿಲ್ಲವೆಂದು ಹಾಸನದಲ್ಲಿ ತಾಯಿಯ ಕೊಲೆಗೈದ ಮಗ
ನಲ್ವತ್ತು ವರ್ಷ ಆಗಿದ್ದರೂ ಮದುವೆ ಮಾಡಿಸಿಲ್ಲವೆಂದು ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65) ಕೊಲೆಯಾದ ಮಹಿಳೆ, ಉಮಾಶಂಕರ್ (40) ತಾಯಿಯನ್ನು ಕೊಲೆ ಮಾಡಿದ ಮಗ. ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಾಸ್
ಮತ್ತೊಂದು ಮದುವೆಯಾದ ಪತಿ: ಮಕ್ಕಳ ಕೊಂದು ಸುಸೈಡ್ ಮಾಡಿಕೊಂಡ ಪತ್ನಿ
ಪತಿ ಮತ್ತೊಂದು ಮದುವೆಯಾದ ಕಾರಣಕ್ಕೆ ನೊಂದ ಮಹಿಳೆ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಎಸ್ ಬಾನೋತ್ ಶ್ರಾವಂತಿ (29) ಮತ್ತು ಮಕ್ಕಳಾದ ಕಾರ್ತಿಕ್ (12) ಮತ್ತು ಕೌಶಿಕ್ (10) ಎಂದು ಗುರುತಿಸಲಾಗಿದೆ. ದೀರ್ಘಕಾಲದ ಕೌಟುಂಬಿಕ ಕಲಹವೇ ಈ
ಅತ್ತಿಗೆ ಜತೆ ಅಕ್ರಮ ಸಂಬಂಧ ಶಂಕೆ: ತಮ್ಮನ ಕೊಲೆಗೈದ ಅಣ್ಣ
ತುಮಕೂರು ನಗರದ ಬನಶಂಕರಿಯಲ್ಲಿ ಅತ್ತಿಗೆ ಜತೆ ಸಂಬಂಧ ಹೊಂದಿದ್ದ ತಮ್ಮನನ್ನು ಅಣ್ಣನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ತಮ್ಮ ಅಕ್ರಮ ಸಂಬಂಧ ಹೊಂದಿದ್ದ ಕಾರಣಕ್ಕೆ ಸೋದರರ ಮಧ್ಯೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.




