ಅಪರಾಧ
ಜಾತ್ರೆ ವೇಳೆ ಕೋಳಿ ಅಂಕ ನಡೆಸುತ್ತಿದ್ದ 27 ಬಿಜೆಪಿ ಮುಖಂಡರ ವಿರುದ್ಧ ಕೇಸ್
ಜಾತ್ರೆ ವೇಳೆ ಸಾಂಪ್ರದಾಯಿಕ ಕೋಳಿ ಅಂಕ (ಜೂಜು) ನಡೆಸುತ್ತಿದ್ದ 25 ಬಿಜೆಪಿ ಮುಖಂಡರು ಸೇರಿದಂತೆ ಹಲವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿ ವಿಟ್ಲದಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಸಮೀಪ ಕೇಪು ಎಂಬಲ್ಲಿ ಕೋಳಿ ಅಂಕ ನಡೆಸುವ ವಿಚಾರದಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಕೋಳಿ ಅಂಕ ನಡೆಸುವವರ ಪರ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪಾಕ್ಗೆ ನೌಕಾಪಡೆಯ ರಹಸ್ಯ ಮಾಹಿತಿ: ಮಲ್ಪೆಯಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್
ಭಾರತೀಯ ನೌಕಾಪಡೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣ ಸಂಬಂಧ ಮಲ್ಪೆ ಪೊಲೀಸರು ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಗುಜರಾತ್ನ ಆನಂದ ತಾಲೂಕಿನ ಕೈಲಾಸ್ನಗರಿಯ ನಿವಾಸಿ ಹಿರೇಂದ್ರ (34) ಬಂಧಿತ. ಪ್ರಕರಣದಲ್ಲಿ ಈ ಹಿಂದೆ ಬಂಧಿತರಾಗಿರುವ ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ಯಾರ್ಡ್ ಗುತ್ತಿಗೆ
ಹುಬ್ಬಳ್ಳಿಯಲ್ಲಿ ದಲಿತನ ಮದುವೆಯಾದ ಸಿಟ್ಟಿಗೆ ಗರ್ಭಿಣಿ ಮಗಳ ಕೊಲೆಗೈದ ತಂದೆ
ಪ್ರೀತಿಸಿ ಮದುವೆಯಾದ ಮಗಳು ಆರು ತಿಂಗಳ ಗರ್ಭಿಣಿಯಾಗಿರುವಾಗಲೇ ತಂದೆ ಕೊಲೈದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಏಳು ತಿಂಗಳ ಹಿಂದೆ ಮಾನ್ಯ ಪಾಟೀಲ್ ಮತ್ತು ವಿವೇಕಾನಂದ್ ದೊಡ್ಡಮನಿ ಪ್ರೀತಿಸಿ ಮದುವೆಯಾಗಿದ್ದರು. ವಿವೇಕಾನಂದ ದೊಡ್ಡಮನಿ ದಲಿತ ಸಮುದಾಯಕ್ಕೆ ಸೇರಿದ್ದರಿಂದ ಮಾನ್ಯ ಪಾಟೀಲ್ ಕುಟುಂಬಸ್ಥರುಈ ಮದುವೆಯನ್ನು
ಆನೇಕಲ್ನಲ್ಲಿ ಸರಣಿ ಅಪಘಾತ: ಇಬ್ಬರು ಬಲಿ, ಚಾಲಕನ ಥಳಿಸಿದ ಸಾರ್ವಜನಿಕರು
ಬೆಂಗಳೂರಿನ ಹೊರವಲಯ ಆನೇಕಲ್ನಲ್ಲಿ ಕಂಟೈನರ್ ಚಾಲಕ ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು ಎರಡು ಮಂದಿ ಮೃತಪಟ್ಟಿದ್ದಾರೆ, ಐದಕ್ಕೂ ಹೆಚ್ಚು ಮಂದಿ ಗಂಬೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಲ್ಲಿಸಿದ್ದ ವಾಹನ, ಚಲಿಸುತ್ತಿದ್ದ ವಾಹನಗಳ ಮೇಲೆ ಕಂಟೈನರ್ ಹರಿದಿದೆ. ವಾಹನಗಳಿಗೆ ಡಿಕ್ಕಿಯಾದರೂ
ಹಣ ಸಹಾಯ ನೀಡಿದ ಸ್ನೇಹಿತನಿಂದ ಸೆಕ್ಸ್ಗಾಗಿ ಕಿರುಕುಳ: ಮಹಿಳೆ ಆತ್ಮಹತ್ಯೆ ಯತ್ನ
ಬೆಂಗಳೂರಿನ ರಾಜಗೋಪಾಲ ನಗರ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸ್ನೇಹಿತ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಸ್ನೇಹಿತನಾಗಿ ಪರಿಚಿತನಾಯಿದ್ದ ವ್ಯಕ್ತಿ ಸಹಾಯದ ಹೆಸರಲ್ಲಿ ಮಹಿಳೆಯನ್ನು
ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಬಾಲಕನಿಗೆ ಹಿಂಸೆ, ಶಿಕ್ಷಕ ದಂಪತಿ ಅರೆಸ್ಟ್, ಪರವಾನಗಿಯಿಲ್ಲದ ಶಾಲೆ ಬಂದ್
ಬಾಗಲಕೋಟೆಯ ನವನಗರದ 54ನೇ ಸೆಕ್ಟರ್ನಲ್ಲಿರುವ ದಿವ್ಯಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಬಾಲಕನ ಮೇಲೆ ಶಿಕ್ಷಕ ದಂಪತಿ ಅಮಾನವೀಯವಾಗಿ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರನ್ನೂ ಬಂಧಿಸಲಾಗಿದೆ. ಯಾವುದೇ ಪರವಾನಗಿ ಪಡೆಯದೆ ಈ ಶಾಲೆ ನಡೆಸುತ್ತಿರೆಂಬ ವಿಷಯ ಬಯಲಾಗಿದೆ.
ಕೊಲ್ಲೂರು ದೇಗುಲ ನಕಲಿ ವೆಬ್ಸೈಟ್: ಭಕ್ತರಿಗೆ ವಂಚಿಸುತ್ತಿದ್ದಾತ ರಾಜಸ್ಥಾನದಲ್ಲಿ ಅರೆಸ್ಟ್
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ನಕಲಿ ವೆಬ್ಸೈಟ್ ಮೂಲಕ ಭಕ್ತರಿಗೆ ವಂಚಿಸುತ್ತಿದ್ದ ರಾಜಸ್ಥಾನದ ತಿಜಾರಿ ಜಿಲ್ಲೆಯ ನಾಸೀರ್ ಹುಸೇನ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ವೆಬ್ಸೈಟ್ ಮೂಲಕ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಂದ ರೂಮ್ ಬುಕ್ಕಿಂಗ್ ಮಾಡಿಸುವುದಾಗಿ ಹೇಳಿ ಹಣ ಪಡೆದು,
69 ಬಾರಿ ಗುಂಡಿಕ್ಕಿ ಸುಪಾರಿ ಹಂತಕರು!
ಎರಡು ಕುಟುಂಬಗಳ ನಡುವೆ ದೀರ್ಘ ಸಮಯದಿಂದ ನಡೆಯುತ್ತಿದ್ದ ಜಗಳ ಗುಂಡಿಕ್ಕಿ ಒಬ್ಬನ ಹತ್ಯೆಯೊಂದಿಗೆ ಅಂತ್ಯಗೊಂಡ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ. 52 ವರ್ಷದ ರತನ್ ಲೋಹಿಯಾ ಎಂಬಾತನ ಮೇಲೆ ಹಲವಾರು ಬಾರಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆಯ ವೇಳೆ
ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಬಿಜೆಪಿ ಶಾಸಕ ಬೈರತಿ ಬಸವರಾಜ್ ನಾಪತ್ತೆ, ಸಿಐಡಿ ಹುಡುಕಾಟ
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ವಜಾಗೊಂಡಿದ್ದು, ಬಿಜೆಪಿ ಶಾಸಕ ಬೈರತಿ ಬಸವರಾಜ್ ನಾಪತ್ತೆಯಾಗಿದ್ದಾರೆ. ಸಿಐಡಿ ಅಧಿಕಾರಿಗಳು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದ ಭೂಮಿ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನ
ಮೈಸೂರು: ಸಂಪಾದಿಸಿದ ಹಣವನ್ನೇ ಕೊಡದ ಪತ್ನಿ ಕೊಲೆಗೆ ಸುಪಾರಿ ನೀಡಿದ ಪತಿ!
ಗಂಡನೊಬ್ಬತಾನು ದುಡಿದು ಸಂಪಾದಿಸಿದ ಹಣವನ್ನು ಹೆಂಡತಿ ತನಗೆ ಕೊಡುತ್ತಿಲ್ಲವೆಂದು ಆಕೆಯನ್ನು ಕೊಲ್ಲಲು ಸುಪಾರಿ ನೀಡಿರುವ ಪ್ರಕರಣ ಮೈಸೂರಿನ ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರು ಸಹಕರಿಸಿದ್ದು, ಮೇಟಗಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್,




