Menu

ಕುಟುಂಬ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಸುಸೈಡ್‌

ಕೌಟುಂಬಿಕ ಕಲಹದಿಂದ ಬೇಸತ್ತು ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೊದಲಿಗೆ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ ಪತ್ನಿ ಅಪಾರ್ಟ್‌ಮೆಂಟ್‌ನ 17ನೇ ಫ್ಲೋರ್‌ನಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರೂ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ದಂಪತಿ ನಡುವೆ ಅನೇಕ ಬಾರಿ ಕಲಹಗಳಾಗಿದೆ. ಇಬ್ಬರೂ ಮಾನಸಿಕ ಒತ್ತಡ ಮತ್ತು ಮಾನಸಿಕ

ಬಿಹಾರ ಶೀತ್ಲಾ ಮಾತಾ ಮಂದಿರದಲ್ಲಿ ಕಾಲ್ತುಳಿತಕ್ಕೆ ಎಂಟು ಮಂದಿ ಬಲಿ

ಬಿಹಾರದ ನಳಂದ ಶೀತ್ಲಾ ಮಾತಾ ಮಂದಿರದಲ್ಲಿ ಕಾಲ್ತುಳಿತ ಸಂಭವಿಸಿ ಎಂಟು ಭಕ್ತರು ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರೆಲ್ಲರೂ ಮಹಿಳೆಯರು. ನಳಂದ ಬಿಹಾರ ಶರೀಫ್‌ನಿಂದ 5 ಕಿಲೋಮೀಟರ್ ದೂರದಲ್ಲಿರುವ ಮಾಘ್ರಾ ಗ್ರಾಮದಲ್ಲಿರುವ ಶೀತ್ಲಾಷ್ಟಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ಚೈತ್ರ ಮಾಸದ

ರಾಯಚೂರಿನಲ್ಲಿ ನಕಲಿ ವೈದ್ಯ ನೀಡಿದ ಇಂಜೆಕ್ಷನ್‌: ಬಾಲಕಿ ಸಾವು

ರಾಯಚೂರು ಜಿಲ್ಲೆಯಲ್ಲಿ ನಕಲಿ ವೈದ್ಯ ಬಳಿ ಚಿಕಿತ್ಸೆಗೆ ಹೋಗಿ ಇಂಜೆಕ್ಷನ್‌ ಚುಚ್ಚಿಸಿಕೊಂಡ ಬಾಲಕಿ ಮೃತಪಟ್ಟಿದ್ದಾಳೆ. ಮಸ್ಕಿ ತಾಲೂಕಿನ ಅಮಿನಗಢ ಗ್ರಾಮದ ಸಿಂಧೂ (13) ಇಂಜೆಕ್ಷನ್ ಪಡೆದ ನಂತರ ಮೃತಪಟ್ಟಾಕೆ. ನಕಲಿ ವೈದ್ಯ ಉತ್ತಮ ಕುಮಾರ್ ಸರ್ಕಾರ್ ನೀಡಿದ ಚಿಕಿತ್ಸೆಯಿಂದ ಬಾಲಕಿ ಮೃತಪಟ್ಟಿದ್ದಾಗಿ

ಕೊಲೆ ಆರೋಪದಡಿ ಪತಿ ಜೈಲಿನಲ್ಲಿದ್ದರೆ ಲವರ್‌ ಮನೆಯಲ್ಲಿ ಪತ್ನಿ ಪತ್ತೆ

ಉತ್ತರ ಪ್ರದೇಶದ ಕೌಶಂಬಿಯಲ್ಲಿ ಪತ್ನಿಯನ್ನು ಕೊಲೆ ಮಾಡಿರುವ ಆರೋಪದಡಿ ಪತಿ ಜೈಲು ಸೇರಿರುವ ಕೊಲೆ ಕೇಸ್‌ನ ತನಿಖೆ ನಡೆಸಿದ ಪೊಲೀಸರೇ ಅಚ್ಚರಿಪಡುವಂತೆ ಕೊಲೆಯಾಗಿದ್ದಾಳೆ ಎನ್ನಲಾದ ಪತ್ನಿ ಪ್ರಿಯಕರನ ಮನೆಯಲ್ಲಿ ಆರಾಮವಾಗಿ ಇರುವುದು ಪತ್ತೆಯಾಗಿದೆ. ಕೌಶಂಬಿಯಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಆರೋಪಡಿ

ನೆಲಮಂಗಲದಲ್ಲಿ ಬೈಕ್‌ಗೆ ಲಾರಿ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಭಿಲಾಷ್ (21), ಮನೋಜ್ (21) ಹಾಗೂ ನವೀನ್ (21) ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದ ಈ ಮೂವರು ರಾತ್ರಿ ಬಿರಿಯಾನಿ ತಿನ್ನಲು ಒಂದೇ

ಬಾಂಬ್‌ ಬೆದರಿಕೆ ಆರೋಪಿಯನ್ನು ಮೈಸೂರಲ್ಲಿ ಬಂಧಿಸಿದ ದೆಹಲಿ ಪೊಲೀಸ್‌

ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರ ವಿಶೇಷ ತಂಡ ಮೈಸೂರಿನಲ್ಲಿ ಬಂಧಿಸಿದೆ. ಮೈಸೂರು ನಗರದಲ್ಲಿ ಅಡಗಿ ಕುಳಿತಿದ್ದ ಶ್ರೀನಿವಾಸ್ ಬಂಧಿತ ಆರೋಪಿ. ದೆಹಲಿ ಪೊಲೀಸರ ತಂಡ ಆತನನ್ನು

ಹುಣಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ ವಶ, ಆರೋಪಿಗಳಿಬ್ಬರ ಬಂಧನ

ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ ದಾಸ್ತಾನು ಪತ್ತೆ ಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ

ಬೆಂಗಳೂರಿನಿಂದ ತಿರುಪತಿ ದರ್ಶನಕ್ಕೆ ಹೊರಟಿದ್ದ ದಂಪತಿ, ಮಗು ಅಪಘಾತಕ್ಕೆ ಬಲಿ

ಬೆಂಗಳೂರು ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ದಂಪತಿ ಹಾಗೂ ಅವರ ನಾಲ್ಕು ವರ್ಷದ ಹೆಣ್ಣು ಮಗು ಸ್ಥಳದಲ್ಲೇ

ಇಂಡಿಯಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ. ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಮಕ್ಕಳಾದ ಅನುಶ್ರೀ (6), ತನು (3) ಮತ್ತು ಸಂತೋಷನನ್ನು (1) ಬಾವಿಗೆ ತಳ್ಳಿ ಬಳಿಕ ತಾನೂಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ

ಗೂಗಲ್‌ ಮ್ಯಾಪ್‌ ತೋರಿಸಿದಂತೆ ಸಂಚರಿಸಿದ ಲಾರಿ ಮನೆ ಮುಂದೆ ನಿಂತಿದ್ದ ಕಾರಿಗೆ ಡಿಕ್ಕಿ: ಕಾರೊಳಗಿದ್ದ ಚಾಲಕ ಸಜೀವ ದಹನ

ಬೆಂಗಳೂರು ನಗರದ ಕುರುಬರಹಳ್ಳಿ ಪ್ರದೇಶದಲ್ಲಿ ತಡರಾತ್ರಿ ನಿಯಂತ್ರಣ ತಪ್ಪಿದ ಲಾರಿಯೊಂದು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನಗೊಂಡಿದ್ದಾರೆ. ಆಂಧ್ರ ಪ್ರದೇಶದಿಂದ ಸುಂಕದಕಟ್ಟೆ ಕಡೆಗೆ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ, ಗೂಗಲ್ ಮ್ಯಾಪ್ ಅನುಸರಿಸಿ