ಅಪರಾಧ
ಡಿಜಿಟಲ್ ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ 17 ಲಕ್ಷ ರೂ. ವಂಚನೆ, 12 ಮಂದಿ ಅರೆಸ್ಟ್
ಡಿಜಿಟಲ್ ಕ್ರಿಪ್ಟೋ ಕರೆನ್ಸಿಗೆ ಭಾರತೀಯ ರೂಪಾಯಿಯನ್ನು ಪರಿವರ್ತಿಸಿ ವಿದೇಶದಿಂದ ಕಡಿಮೆ ಬೆಲೆಗೆ ವಸ್ತುನ್ನು ಖರೀದಿಸಿ ಕೊಡುವುದಾಗಿ ನಂಬಿಸಿ 17.64 ಲಕ್ಷ ರೂಪಾಯಿ ದೋಚಿದ ಪ್ರಕರಣವನ್ನು ಸಂಜಯನಗರ ಪೊಲೀಸರು ಬಹಿರಂಗಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಶ್ಮೀರ ಯುವಕರು ಸೇರಿದಂತೆ 12 ಆರೋಪಿಗಳನ್ನು ಬಂಧಿಸಿದ್ದಾರೆ. ಸೈಬರ್ ವಂಚನೆ ಮತ್ತು ದರೋಡೆ ಎರಡನ್ನೂ ಒಳಗೊಂಡಿರುವ ಪ್ರಕರಣವೆಂದು ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ದೂರುದಾರ ವಿಶ್ವಾಸ್ ಬೆಂಗಳೂರಿನಲ್ಲಿ ಕಾಫಿ ಶಾಪ್ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದರು. ಕಾಫಿ
ಅಬಕಾರಿ ಇಲಾಖೆಯಲ್ಲಿ ಲಂಚ ನಿರ್ವಹಣೆಗೆ ಸಂಘಟಿತ ತಂಡ: ಇಡಿ ಬಹಿರಂಗ
ರಾಜ್ಯ ಅಬಕಾರಿ ಇಲಾಖೆಯಲ್ಲಿ ಅಧಿಕಾರಿಗಳು ಲಂಚ ಸಂಗ್ರಹಿಸಲು ಸಹಚರರು ಮತ್ತು ಖಾಸಗಿ ವ್ಯಕ್ತಿಗಳ ಸಂಘಟಿತ ತಂಡ ಮಾಡಿಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ತಂಡ ಅಬಕಾರಿ ಅಂಗಡಿಗಳಿಂದ ಮಾಸಿಕ ನಿಗದಿತ ಲಂಚ ಸಂಗ್ರಹಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಪಾವತಿಸುತ್ತಿದೆ. ಪರವಾನಗಿ ನವೀಕರಣ, ವರ್ಗಾವಣೆ ಮತ್ತು
ಪೋಕ್ಸೋ ಆರೋಪಿ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ರದ್ದು
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಪಡೆದುಕೊಂಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಆದೇಶ ಪ್ರಕಟಿಸಿದೆ. ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸಲು ಮೂರು ವಾರಗಳ
ಪತ್ನಿ, ಮಗ ಇದ್ದರೂ ಗೆಳತಿ ಕೃಷಿ ತಾಪಂಡ ಮನೆಯಲ್ಲಿ ವೈಶಾಕ್ ಉಪಾಧ್ಯಾಯ ಸುಸೈಡ್
ನಟಿ ಕೃಷಿ ತಾಪಂಡ ಗೆಳೆಯ ವೈಶಾಕ್ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿಗೆ ಕೊರಿಯರ್ ಮೂಲಕ ಬೆದರಿಕೆ ಹಾಕಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವೈಶಾಕ್ ಜೈಲು ಸೇರಿದ್ದರು. ಆತ್ಮಹತ್ಯೆಗೂ ಮೊದಲು
ಪೋಟೊ ಕ್ರೇಜ್: ಚನ್ನಪಟ್ಟಣದ ಐವರು ಮುತ್ತತ್ತಿಯಲ್ಲಿ ಕಾವೇರಿ ಪಾಲು
ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಈಜಲು ಹೋದ ಐವರು ಮುಳುಗಿ ಮೃತಪಟ್ಟಿದ್ದಾರೆ. ಮೃತರು ರಾಮನಗರದ ಚನ್ನಪಟ್ಟಣದಿಂದ ಇಲ್ಲಿಗೆ ಪ್ರವಾಸಿಗಳಾಗಿ ಬಂದಿದ್ದವರು. ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ಕುಟುಂಬ ಮುತ್ತತ್ತಿಯ ಮುತ್ತತ್ತಿರಾಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ
ಸರ್ಕಾರಿ ಜಾಗ ಪರಭಾರೆ ಆರೋಪ: ಶಿವಮೊಗ್ಗ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಶಿವಮೊಗ್ಗ ನಗರದ ತಾಲೂಕು ಕಚೇರಿಯ ಆಡಳಿತ ವಿಭಾಗದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರ್ಚ್ ವಾರಂಟ್‌ನೊಂದಿಗೆ ದಿಢೀರ್ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಶಿವಮೊಗ್ಗದ ಗೋವಿಂದಾಪುರದಲ್ಲಿ 11 ಎಕರೆ ವಿಸ್ತೀರ್ಣದ ಸರ್ಕಾರಿ ಜಾಗವನ್ನು ಖಾಸಗಿಯವರಿಗೆ ಪರಭಾರೆ ಮಾಡಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ
ಅಯೋಧ್ಯೆ ಮಂದಿರದಲ್ಲಿ ಸ್ಫೋಟಕ್ಕೆ ಸಂಚು: ಹರಿಹರದಲ್ಲಿ ಬಂಧಿತ ಉಗ್ರ
ಹರಿಹರದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಉತ್ತರ ಪ್ರದೇಶ ಮೂಲದವನಾಗಿದ್ದು, ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಹರಿಹರದಲ್ಲಿ ಮಂಗಳವಾರ ಶಂಕಿತ ಉಗ್ರನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಅಯೋಧ್ಯೆಯ
ಕೆಆರ್‌ಪುರದಲ್ಲಿ ತಂದೆ, ತಾಯಿ, ತಂಗಿಯ ಹತ್ಯೆ: ಪಾಂಡಿಚೆರಿಯಲ್ಲಿ ಯುವತಿ ಅರೆಸ್ಟ್
ಬೆಂಗಳೂರಿನ ಕೆ.ಆರ್. ಪುರದಲ್ಲಿ ತಂದೆ, ತಾಯಿ, ತಂಗಿಯ ಕೊಲೆ ಪ್ರಕರಣದ ಪ್ರಮುಖ ಆರೋಪಿ ಶ್ವೇತಾಳನ್ನು ಪಾಂಡಿಚೇರಿಯಲ್ಲಿ ವೈಟ್‌ಫೀಲ್ಡ್ ವಿಭಾಗದ ವಿಶೇಷ ಪೊಲೀಸ್ ತಂಡ ಬಂಧಿಸಿದ್ದು, ತಾಯಿಯ ಹತ್ಯೆಯನ್ನು ತಾನೇ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಆಕೆಯ ಪ್ರಿಯಕರ ಕೆನೆತ್‌ಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ. ನನ್ನ
ವಾರಕ್ಕೊಂದು ಬೈಕ್ ಕಳವು: ನಕಲಿ ಆರ್‌ಸಿ ಜೊತೆ ರೈತರಿಗೆ ಮಾರಾಟ
ಬಳ್ಳಾರಿಯ ಸಿರಗುಪ್ಪ ತಾಲೂಕು ಪೊಲೀಸರು ಬೈಕ್ ಕಳ್ಳನನ್ನು ಬಂಧಿಸಿ 20.50 ಲಕ್ಷ ರೂಪಾಯಿ ಮೌಲ್ಯದ ವಿವಿಧ ಕಂಪನಿಗಳ 41 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಳ್ಳಾರಿಯ ಅಹಂಬಾವಿ ನಗರದ ನಿವಾಸಿ, ಆಟೋ ಚಾಲಕ ಸಿದ್ದಾರೆಡ್ಡಿ ಬಂಧಿತ ಆರೋಪಿ. ಒಂದೂವರೆ ವರ್ಷದಿಂದ ಬೈಕ್ ಕಳ್ಳತನದಲ್ಲಿ ತೊಡಗಿದ್ದ
ವೃದ್ಧ ದಂಪತಿ ಸಾವು ಪ್ರಕರಣ: ಪತ್ನಿಗೆ ಹೃದಯಾಘಾತ, ಪತಿ ಸುಸೈಡ್
ಬೆಂಗಳೂರಿನ ಸಂಪಿಗೆಹಳ್ಳಿಯಲ್ಲಿ ನಡೆದಿದ್ದ ವೃದ್ಧ ದಂಪತಿಯ ನಿಗೂಢ ಸಾವು ಪ್ರಕರಣದಲ್ಲಿ ಪತ್ನಿಯನ್ನು ಕೊಲೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯ ವರದಿ ಪ್ರಕಟವಾಗಿದ್ದು, ನಿಜಾಂಶ ಬಯಲಾಗಿದೆ. ಪತ್ನಿ ಸುಮಿತ್ರಾ ಪ್ರಸಾದ್(77) ಹೃದಯಾಘಾತದಿಂದ ಮೃತಪಟ್ಟಿದ್ದು, ಆಕೆಯ ಸಾವಿನಿಂದ




