ಅಪರಾಧ
ಲೈಂಗಿಕ ಸಮಸ್ಯೆಗೆ ಔಷಧಿ: ಬೆಂಗಳೂರು ಟೆಕ್ಕಿಗೆ 48 ಲಕ್ಷ ರೂ. ವಂಚಿಸಿದ್ದ ನಕಲಿ ಗುರೂಜಿ ಅರೆಸ್ಟ್
ಲೈಂಗಿಕ ಸಮಸ್ಯೆಯ ಪರಿಹಾರಕ್ಕೆ ಆಯುರ್ವೇದ ಔಷಧಿ ನೀಡುವುದಾಗಿ ನಂಬಿಸಿ ಬೆಂಗಳೂರಿನ ಟೆಕ್ಕಿಗೆ ೪೮ ಲಕ್ಷ ರೂ. ವಂಚಿಸಿದ್ದ ನಕಲಿ ಗುರೂಜಿಯನ್ನು ಜ್ಞಾನ ಭಾರತಿ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಸಮಸ್ಯೆ ಸೇರಿದಂತೆ ನಾನಾ ಕಾಯಿಲೆಗಳಿಗೆ ಔಷಧಿ ನೀಡುವುದಾಗಿ ನಂಬಿಸಿ ಈ ಗುರೂಜಿ ಸಾರ್ವಜನಿಕರನ್ನು ವಂಚಿಸುವುದನ್ನೇ ವೃತ್ತಿಯಾಗಿಸಿಕೊಂಡಿದ್ದು ತನಿಖೆ ವೇಳೆ ಬಯಲಾಗಿದೆ. ಬಂಧಿತ ಆರೋಪಿಯು ವಿಜಯ್ ಗುರೂಜಿ ಎಂದು ಗುರುತಿಕೋಮಡಿದ್ದು, ಆತನಿಗೆ ಸಹಕರಿಸುತ್ತಿದ್ದ ಸಹಚರನನ್ನು ಕೂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯು ರಸ್ತೆ
ಪಿಎಚ್‌ಡಿ ಪದವಿ ನೀಡದೆ ಕಿರುಕುಳ: ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ
ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಚಿಕ್ಕೋಡಿ ಪಟ್ಟಣದಲ್ಲಿರುವ ಮನೆಯಲ್ಲಿ 19ಕ್ಕೂ ಅಧಿಕ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗೈಡ್‌ಗಳು ಉದ್ದೇಶಪೂರ್ವಕವಾಗಿ ಪಿಎಚ್‌ಡಿ ಪದವಿ ನೀಡದೆ ಸತಾಯಿಸಿದ್ದರಿಂದ ಬೇಸರಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಮುಂದಾಗಿದ್ದಾರೆ, ಆಕೆಯನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ
ಗೆಳತಿಯ ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ
ಯುವಕನೊಬ್ಬ ಸಣ್ಣ ಜಗಳಕ್ಕೆ ಗೆಳತಿಯನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ. 20 ವರ್ಷದ ದಿವ್ಯಾ ನಿಗೋಟ್ ಕೊಲೆಯಾದ ಯುವತಿ. ಬೀಡ್ ಜಿಲ್ಲೆಯ 21 ವರ್ಷದ ಗಣೇಶ್ ಕೇಲ್ ಕೊಲೆಗೈದ ಬಳಿಕ ಆತ್ಮಹತ್ಯೆ ಮಾಡಿಕೊಂಡಾತ. ಇಬ್ಬರೂ ಪುಣೆಯ
ಸಂಗಾತಿಯ ಕೊಲೆಗೈದಾತ ಪೊಲೀಸ್ ಕಸ್ಟಡಿಯಲ್ಲಿ ಹೃದಯಾಘಾತದಿಂದ ಸಾವು
ಲಿವ್-ಇನ್ ಸಂಗಾತಿಯ ಕೊಂದಾತ ಪೊಲೀಸ್ ಕಸ್ಟಡಿಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌರಾಷ್ಟ್ರದಲ್ಲಿ ನಡೆದಿದೆ. ಮಧ್ಯಪ್ರದೇಶ ಮೂಲದ ನರೇಂದ್ರ ಸಿಂಗ್ ಧ್ರುವೇಲ್ ಸಂಗಾತಿಯ ಕೊಂದು ಪೊಲೀಸ್ ವಶದಲ್ಲಿರುವಾಗ ಮೃತಪಟ್ಟಿದ್ದಾನೆ. ಸೌರಾಷ್ಟ್ರದ ಸೆರಾಮಿಕ್ ಕಾರ್ಖಾನೆಯ ಕಾರ್ಮಿಕ ವಸತಿಗೃಹದಲ್ಲಿ ಈ ಜೋಡಿ ಮೂರು ತಿಂಗಳಿನಿಂದ ವಾಸವಿತ್ತು.
ಶಾಲೆಯಲ್ಲಿ ನಾಲ್ಕು ವರ್ಷದ ಮಗುವನ್ನು ಹೊಡೆದು ತುಳಿದು ಕೊಂದ ಸಹಾಯಕಿ
ಹೈದರಾಬಾದ್‌ನ ಜೀಡಿಮೆಟ್ಲಾದ ಶಾಪುರ್ ನಗರದಲ್ಲಿ ಮಹಿಳಾ ಸಹಾಯಕ ಸಿಬ್ಬಂದಿ ಶಾಲೆಯಲ್ಲಿ 4 ವರ್ಷದ ನರ್ಸರಿ ಮಗುವನ್ನು ನೆಲಕ್ಕೆ ತಳ್ಳಿ ಹೊಡೆದು ತುಳಿದು ಕೊಲೆ ಮಾಡಿದ್ದಾಳೆ. ಈ ಘಟನೆಯು ಎಲ್ಲ ಪೋಷಕರನ್ನು ಬೆಚ್ಚಿ ಬೀಳಿಸಿದ್ದು, ಶಾಲೆಯೊಳಗೆ ಮಕ್ಕಳ ಸುರಕ್ಷತೆ ಬಗ್ಗೆ ಆತಂಕವೊಡ್ಡಿದೆ. ಮಗುವನ್ನು
ಅಣ್ಣ ಚೆನ್ನಾಗಿ ಓದು ಎಂದಿದ್ದೇ ತಪ್ಪಾಯ್ತಾ?: ಗದಗದಲ್ಲಿ ಕರೆಗೆ ಹಾರಿದ ತಂಗಿ
ಗದಗದಲ್ಲಿ ಅಣ್ಣೊಬ್ಬ ತಂಗಿಗೆ ಚೆನ್ನಾಗಿ ಓದು ಎಂದು ಬುದ್ದಿ ಹೇಳಿದ್ದೇ ತಪ್ಪಾಗಿ ಹೋಯ್ತಾ ಎಂಬಂತೆ ತಂಗಿ ಕೆರೆಗೆ ಹಾರಿ ಆತ್ಮಹತ್ಯ ಮಾಡಿಕೊಂಡಿದ್ದಾಳೆ. ಗದಗದ ಭೀಷ್ಮ ಕೆರೆಗೆ ಹಾರಿ ಚಂದ್ರಿಕಾ ನಡುವಿನಮನಿ (21) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಗಲಕೋಟೆಯ ಶಿರೂರಿನ ಚಂದ್ರಿಕಾ ನಡುವಿನಮನಿ ಗದಗ
ಜಾತಿ ಪ್ರೀತಿಗೆ ಮಗಳ ಪ್ರಿಯಕರನ ಕೊಲೆಗೈದ ಪೋಷಕರು: ಶವವನ್ನೇ ಮದುವೆಯಾದ ಯುವತಿ
ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಬೇರೆ ಜಾತಿ ಎಂಬ ಕಾರಣಕ್ಕೆ ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ಆಕೆಯ ಮನೆಯವರು ಹೊಡೆದು ಕೊಂದರೆ ಸಾವಿನಿಂದ ಆಘಾತಗೊಂಡ ಯುವತಿ ಆತನ ಶವವನ್ನೇ ಮದುವೆಯಾಗಿ ಆತನ ಮನೆಯಲ್ಲೇ ಇರುವ ನಿರ್ಧಾರ ಮಾಡಿದ್ದಾಳೆ. 20 ವರ್ಷದ ಸಕ್ಷಮ್ ಟಾಟೆ ಕೊಲೆಯಾದ ಯುವಕ.
ಬೆಂಗಳೂರಿನ ಪಿಜಿಯಲ್ಲಿ ಹಾಸನದ ವಿದ್ಯಾರ್ಥಿನಿ ಆತ್ಮಹತ್ಯೆ, ತಂದೆಗೆ ಎಂಟು ಪುಟಗಳ ಪತ್ರ
ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾರೂ ಇಲ್ಲದ ವೇಳೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆಗೆ ಎಂಟು ಪುಟದ ಡೆತ್ನೋಟ್ ಬರೆದಿದ್ದಾಳೆ. ಹೆಸರುಘಟ್ಟ ರಸ್ತೆಯ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಹಾಸನದ ವತ್ಸಲಾ (19) ಆತ್ಮಹತ್ಯೆ
ಸರ್ಕಾರಿ ಆಸ್ಪತ್ರೆ ಬದಲು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಆ್ಯಂಬುಲೆನ್ಸ್ ಚಾಲಕ: ಬಡ ರೋಗಿ ಕುಟುಂಬದ ರೋಧನ
ನೆಲಮಂಗಲದಲ್ಲಿ 108 ಆ್ಯಂಬುಲೆನ್ಸ್ ದುರ್ಬಳಕೆ ಮಾಡಿಕೊಂಡಿರುವ ಚಾಲಕ ಹಣದಾಸೆಗಾಗಿ ಬಡ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ. ಪಾಯಿಸನ್ ಕೇಸ್ ಸಂಬಂಧ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃಷ್ಣಮೂರ್ತಿ (30)ಗೆ ಸ್ಥಳೀಯವಾಗಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲು
ನಾಯಕನಹಟ್ಟಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ: ಚಿಕಿತ್ಸೆಗೆ ಬಂದ ರೋಗಿ ಸಾವು
ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಚಿಕಿತ್ಸೆಗೆ ಬಂದ ರೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ಆಸ್ಪತ್ರೆ ವೈಧ್ಯಾಧಿಕಾರಿಗಳ ವಿರುದ್ಧ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗರಾಜಪ್ಪ (50) ಮೃತಪಟ್ಟವರು. ನಾಯಕನಹಟ್ಟಿ ಪಟ್ಟಣದ ಅಂಬೇಡ್ಕರ್ ಕಾಲೊನಿ



